HomeStateDoctors Protest : ಮಾ. 11 ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್: ಗುಡಿಬಂಡೆಯಲ್ಲಿ ಆರೋಗ್ಯ...

Doctors Protest : ಮಾ. 11 ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್: ಗುಡಿಬಂಡೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುಡಿಬಂಡೆ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, (Doctors Protest) ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಹಾಗೂ ನೌಕರರು ಮಾ.11ರಿಂದ 15ರವರೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಸಂಬಂಧ ಗುಡಿಬಂಡೆ ತಹಸೀಲ್ದಾರ್‍ ಸಿಗ್ಬತ್ತುಲ್ಲಾ ರವರಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮನವಿ ಪತ್ರ ಸಲ್ಲಿಸಿದರು.

Doctors Protest with black badges in Gudibande government hospital Karnataka

Doctors Protest – ಪ್ರತಿಭಟನೆಗೆ ಕಾರಣವೇನು?

ಈ ವೇಳೆ ಗುಡಿಬಂಡೆ ತಾಲೂಕು ಅರೋಗ್ಯಾಧಿಕಾರಿ ಡಾ.ಅಕ್ಷಯ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಸಾಕಷ್ಟು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಈ ಸಂಬಂಧ ನಮ್ಮ ಕರ್ನಾಟಕ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘದ ವತಿಯಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿತ್ತು. ಇಲಾಖೆಯ ಯಾವುದೇ ಅಧಿಕಾರಿ, ನೌಕರ ಸಿಬ್ಬಂದಿಗಳಿಗೆ 5 ವರ್ಷಗಳಿಂದ ಮುಂಬಡ್ತಿ ನೀಡಿಲ್ಲ. ನಿಯಮಾನುಸಾರ ಸೇವಾನಿರತ ಸರ್ಕಾರಿ ವೈದ್ಯರು, ಅಧಿಕಾರಿ, ನೌಕರರು ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶವಿದ್ದರೂ ಶಿಕ್ಷಣಕ್ಕೆ ಅವಕಾಶ ನೀಡುತ್ತಿಲ್ಲ. ಆರೋಗ್ಯ ಇಲಾಖೆ ವರ್ಗಾವಣೆ ಕಾಯ್ದೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸದೆ ಅವೈಜ್ಞಾನಿಕವಾಗಿ ಕೌನ್ಸಿಲಿಂಗ್ ವರ್ಗಾವಣೆ ಮಾಡಲಾಗುತ್ತಿದೆ.

ಮಾ.11 ರಿಂದ ಮಾ.15 ರ ತನಕ ಕಪ್ಪು ಪಟ್ಟಿ ಪ್ರದರ್ಶನ

ಹೀಗೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮಾ.11 ರಿಂದ ಮಾ.15 ರ ತನಕ ಎಲ್ಲ ಸರ್ಕಾರಿ ಆಸ್ಪತ್ರೆಗಳ (Doctors Protest) ವೈದ್ಯರು, ಸಿಬ್ಬಂದಿ ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಆರಂಭಿಸಲಿದ್ದಾರೆ. ಈ ದಿನದಂದು, ಹೊರರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಲಾಗುವುದು. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರಿಸದ ಪಕ್ಷದಲ್ಲಿ ರಾಜ್ಯ ಸಂಘದ ನಿರ್ದೇಶನದ ಮೇರೆಗೆ ಎರಡನೇ ಹಂತದ ಹೋರಾಟಕ್ಕೆ ಮುಂದಾಗುತ್ತೇವೆ ಎಂದರು. Read this also : ಆಂಬ್ಯುಲೆನ್ಸ್ ನಿರಾಕರಣೆ, ಮಗುವಿನ ಶವವನ್ನು ರಟ್ಟಿನ ಪೆಟ್ಟಿಗೆಯಲ್ಲೇ ಹೊತ್ತೊಯ್ದ ಅಸಹಾಯಕ ತಂದೆ!

Doctors Protest with black badges in Gudibande government hospital Karnataka

ಪ್ರಮುಖ ಬೇಡಿಕೆಗಳು

ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಔಷಧಗಳನ್ನು ಪೂರೈಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಎಲ್ಲ ವೃಂದದ ಜೇಷ್ಠತಾ ಪಟ್ಟಿಯನ್ನು ಕಾಲ ಕಾಲಕ್ಕೆ ಪ್ರಕಟಿಸಬೇಕು. ಎಲ್ಲ ವೃಂದದ ಅಧಿಕಾರಿನೌಕರರಿಗೆ ಐದು ವರ್ಷಗಳಿಂದ ಮುಂಬಡ್ತಿ ನೀಡಿಲ್ಲ. (Doctors Protest)  ಕೂಡಲೇ ಮುಂಬಡ್ತಿ ನೀಡಬೇಕು, ಗುತ್ತಿಗೆ ವೈದ್ಯರು, ನೌಕರರು ಹಾಗೂ ಎಚ್‌ಎಚ್‌ಎಂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಕಾಲ ಕಾಲಕ್ಕೆ ವೇತನ ಹೆಚ್ಚಳ ಮಾಡಿ, ನಿಗದಿತ ದಿನದೊಳಗೆ ಪಾವತಿಸಬೇಕು. ಅವೈಜ್ಞಾನಿಕ ಕೌನ್ಸೆಲಿಂಗ್ ಪ್ರಕ್ರಿಯೆ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಈ ಸಮಯದಲ್ಲಿ (Doctors Protest)  ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ಮಂಜುನಾಥ್, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರದೀಪ್ ಸೇರಿದಂತೆ ವಿವಿಧ ತಜ್ಞ ವೈದ್ಯರು, ಸರ್ಕಾರಿ ದಾದಿಯರು ಹಾಗೂ ಸಿಬ್ಬಂದಿ, ಎನ್.ಹೆಚ್.ಎಂ ಸಿಬ್ಬಂದಿ ಹಾಜರಿದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular