HomeStateDr K Sudhakar - ರಾಜ್ಯ ಸರ್ಕಾರ ಜನತೆಗೆ ಸ್ವರ್ಗ ತೋರ್ಸ್ತೀನಿ ಅಂತಾ ನರಕ ತೋರ್ಸ್ತಿದೆ:...

Dr K Sudhakar – ರಾಜ್ಯ ಸರ್ಕಾರ ಜನತೆಗೆ ಸ್ವರ್ಗ ತೋರ್ಸ್ತೀನಿ ಅಂತಾ ನರಕ ತೋರ್ಸ್ತಿದೆ: ಡಾ.ಕೆ.ಸುಧಾಕರ್‍

Dr K Sudhakar – ಸುಳ್ಳು ಆಶ್ವಾಸನೆಗಳು, ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರ ಚುನಾವಣಾ ಸಮಯದಲ್ಲಿ ಜನರಿಗೆ ಸ್ವರ್ಗ ತೋರುಸುತ್ತೇವೆ ಅಂತಾ ಹೇಳಿ ಇದೀಗ ನರಕ ತೋರಿಸುತ್ತಿದೆ. ಮುಂದಿನ ಬಜೆಟ್ ನಲ್ಲಿ ರಾಜ್ಯದ ಜನರ ಮೇಲೆ ಎಷ್ಟು ಪ್ರಮಾಣದ ಸಾಲ ಹೊರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಸಂಸದ ಡಾ.ಕೆ.ಸುಧಾಕರ್‍ (Dr K Sudhakar) ತಿಳಿಸಿದರು.

"Dr K Sudhakar at Karnataka road project inauguration"

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಎಲ್ಲೋಡು ಗ್ರಾಮದ ಎಲ್ಲೋಡು ಆದಿನಾರಾಯಣಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೇಂದ್ರ ಸರ್ಕಾರದ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ  ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚಿಂತಾಮಣಿ – ಗೌರಿಬಿದನೂರು ರಸ್ತೆಯ (ರಾಜ್ಯ ಹೆದ್ದಾರಿ – 82) ಚೇಳೂರು, ಬಾಗೇಪಲ್ಲಿ, ಎಲ್ಲೋಡು, ಮಲ್ಲೇನಹಳ್ಳಿ ಕ್ರಾಸ್, ವಾಟದಹೊಸಹಳ್ಳಿ ರಸ್ತೆ ಮಾರ್ಗದಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ 3 ಕಿ.ಮಿ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

Dr K Sudhakar -ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ

ಈ ವೇಳೆ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್‍ ರಾಜ್ಯ ಸರ್ಕಾರ ವಿಧಾನಸಭಾ ಚುನಾವಣಾ ಸಮಯದಲ್ಲಿ ವಿವಿಧ ರೀತಿಯ ಯೋಜನೆಗಳನ್ನು ಜಾರಿ ಮಾಡುವುದಾಗಿ, ಗ್ಯಾರಂಟಿಗಳನ್ನು ಕೊಡುವುದಾಗಿ ಹೇಳಿ ಅಧಿಕಾರ ಗಿಟ್ಟಿಸಿಕೊಂಡಿದೆ. ಆದರೆ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳನ್ನೇನೋ ಜಾರಿ ಮಾಡಿದೆ. ಆದರೆ ಒಂದು ಕಡೆ ಕೊಟ್ಟು ಮತ್ತೊಂದು ಕಡೆ ಕಿತ್ತುಕೊಳ್ಳುವಂತಹ ಕೆಲಸ ಮಾಡುತ್ತಿದೆ. ಶಕ್ತಿ ಯೋಜನೆಯ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕೊಟ್ಟು, ಪುರುಷರಿಂದ ಹೆಚ್ಚುವರಿ ಟಿಕೆಟ್ ದರ ಪಡೆದುಕೊಳ್ಳುತ್ತಿದೆ. ಜೊತೆಗೆ ಬೆಂಗಳೂರಿನ ಮೆಟ್ರೋ ರೈಲು ಪ್ರಯಾಣ ದರ ಸಹ ಏರಿಕೆ ಮಾಡಿದೆ. ಅದನ್ನು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ ಎಂದು ಆರೋಪಿಸಿದರು.

Dr K Sudhakar -ರಾಜ್ಯ ಸರ್ಕಾರದಲ್ಲಿ ಬೆಲೆ ಏರಿಕೆ ಜಾಸ್ತಿಯಾಗಿದೆ

ಇನ್ನೂ ರಾಜ್ಯ ಸರ್ಕಾರ ಕಂದಾಯ ಇಲಾಖೆಯಲ್ಲಿ ರಿಜಿಸ್ಟ್ರೇಷನ್ ಮೊತ್ತ ಜಾಸ್ತಿಯಾಗಿದೆ. ಹಿಂದಿನ ಸರ್ಕಾರಕ್ಕೆ ಹೋಲಿಕೆ ಮಾಡಿದರೇ, ಶೇ.40-50 ರಷ್ಟು ಹೆಚ್ಚಳವಾಗಿದೆ. ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಸರ್ಕಾರಿ ಸೌಲಭ್ಯಗಳು ಜನರಿಗೆ ಸಿಗುವುದು ದುಸ್ತರವಾಗಿದೆ. ರಸ್ತೆಗಳ ಅಭಿವೃದ್ದಿಯಾಗುತ್ತಿಲ್ಲ. ಬಡವರಿಗೆ ಮನೆಗಳು ನೀಡುತ್ತಿಲ್ಲ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ ಹೊರೆ ಏರಿಸುವ ಕೆಲಸ ಮಾಡುತ್ತಿದೆ ಎಂದರು.

"Dr K Sudhakar at Karnataka road project inauguration"

Dr K Sudhakar -ರಾಜ್ಯ ಸರ್ಕಾರ ದಿವಾಳಿಯಾಗಿದೆ:

ಇನ್ನೂ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಟ್ಯಾಕ್ಸ್ ಕಡಿತಗೊಳಿಸಿ ಅನುಕೂಲ ಮಾಡಿದೆ. ಮಧ್ಯಮವರ್ಗದ ಜನತೆ ಕಟ್ಟುವಂತಹ ಟ್ಯಾಕ್ಸ್ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾಡಿದೆ. ಈ ರೀತಿಯ ಜನಪರವಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ಎನ್.ಡಿ.ಎ ಸರ್ಕಾರದಿಂದ ಮಾತ್ರ ಸಾಧ್ಯ. ಆದರೆ ರಾಜ್ಯ ಸರ್ಕಾರ ಮಾತ್ರ ಗ್ಯಾರಂಟಿಗಳ ಹೆಸರಿನಲ್ಲಿ ಸರ್ಕಾರವನ್ನು ದಿವಾಳಿ ಮಾಡಿದೆ. ಮಾ.7 ರಂದು ಮಂಡನೆಯಾಗುವ ಬಜೆಟ್ ನಲ್ಲಿ ಜನರು ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಎಂಬುದನ್ನು ನೋಡುವುದರ ಬದಲು ಜನರ ಮೇಲೆ ಎಷ್ಟು ಸಾಲ ಹೊರೆಸಲಾಗುತ್ತಿದೆ ಎಂಬುದನ್ನು ಎದುರುನೋಡಬೇಕಿದೆ ಎಂದರು.

ಇನ್ನೂ ಕಾಂಗ್ರೇಸ್ ಸರ್ಕಾರದ ಆಡಳಿತದಲ್ಲಿ ಒಕ್ಕೂಟದ ವ್ಯವಸ್ಥೆಯ ಬಗ್ಗೆ ಗೌರವ ಅನ್ನೋದು ಇಲ್ಲ. ಶಿಷ್ಟಚಾರ ಯಾರೂ ಸಹ ಅನುಸರಿಸುತ್ತಿಲ್ಲ. ಈ ಕುರಿತು ಅಧಿಕಾರಿಗಳಿಗೆ ಈಗಾಗಲೇ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಇದು ಸರಿಯಾಗದೇ ಇದ್ದರೇ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರದ ಅನುದಾಗಳಡಿ ಕೈಗೊಳ್ಳುವ ಕಾರ್ಯಕ್ರಮಗಳಿಗೆ ಸಂಸದರಿಗೆ ಮಾಹಿತಿ ನೀಡಬೇಕು, ಶಿಷ್ಟಾಚಾರ ಪಾಲನೆ ಮಾಡಬೇಕು. ಆದರೆ ಈ ವ್ಯವಸ್ಥೆ ರಾಜ್ಯದಲ್ಲಿ ಪಾಲನೆ ಮಾಡುತ್ತಿಲ್ಲ. ಯಾವುದೇ ಅನುದಾನವಿರಲಿ ಶಿಷ್ಟಾಚಾರ ಪಾಲಿಸಬೇಕು. ಅನೇಕ ಕಡೆ ಇದೇ ರೀತಿಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ.

ಅದೇ ರೀತಿ ಕೇಂದ್ರ ಸರ್ಕಾರ ಶಿಷ್ಟಚಾರ, ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲ ಅಂತಾ ಅನುದಾನ ನಿಲ್ಲಿಸಿದರೇ ಸರ್ಕಾರಗಳನ್ನು ನಡೆಸಲು ಆಗುತ್ತದೆಯೇ, ನಿಮ್ಮ ಮನೆಗಳಿಂದ ತಂದ ಅನುದಾನವಾದರೇ ನಾವು ನಿಮ್ಮನ್ನು ಕೇಳುವುದೇ ಇಲ್ಲ. ಆದರೆ ಇದು ಕೇಂದ್ರ-ರಾಜ್ಯ ಸರ್ಕಾರದ ಹಣ, ನಾನು ಎಂಟು ಕ್ಷೇತ್ರಗಳ ಜನರಿಂದ ಆಯ್ಕೆಯಾದವನು. ಇದು 8 ಕ್ಷೇತ್ರಗಳ ಜನತೆಗೆ ಮಾಡುವಂತಹ ಅವಮಾನ ಎಂದೇ ಭಾವಿಸಬೇಕಾಗುತ್ತದೆ ಎಂದರು. ಈ ಸಮಯದಲ್ಲಿ ಸಮಾಜ ಸೇವಕ ಹರಿನಾಥರೆಡ್ಡಿ, ಮುಖಂಡರಾದ ಕೋನಪ್ಪರೆಡ್ಡಿ, ಚೆನ್ನಕೃಷ್ಣಾರೆಡ್ಡಿ, ಅಶ್ವತ್ಥರೆಡ್ಡಿ, ಮದ್ದರೆಡ್ಡಿ, ಬೈರಾರೆಡ್ಡಿ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಮಂಜುನಾಥರೆಡ್ಡಿ ಸೇರಿದಂತೆ ಹಲವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular