ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುತ್ತಿಗೆ ಡ್ರೈವರ್ ಒಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಸಂಸದ ಡಾ.ಕೆ. ಸುಧಾಕರ್ ಸೇರಿದಂತೆ ಮೂವರು ಕಾರಣ ಎಂದು ಡೆತ್ ನೋಟ್ ಬರೆದಿರುವುದು ತೀವ್ರ ಸಂಚಲನ ಮೂಡಿಸಿದೆ.
ಬಾಬು ಎಂ. (33) ಎಂಬುವವರು ಇಂದು ಮುಂಜಾನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಎಂಟು ವರ್ಷಗಳಿಂದ ಡಿಸಿ ಕಚೇರಿಯ ಲೆಕ್ಕ ಪರಿಶೋಧನೆ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇರೆಗೆ ಚಾಲಕರಾಗಿ ಕೆಲಸ ಮಾಡುತ್ತಿದ್ದರು.
Chikkaballapur – ಡೆತ್ ನೋಟ್‌ನಲ್ಲಿ ಏನಿದೆ?
ತ್ಮಹತ್ಯೆ ಮಾಡಿಕೊಳ್ಳುವ ಮೊದಲು ಬಾಬು ಅವರು ಬರೆದಿರುವ ಪತ್ರದಲ್ಲಿ ಸಂಸದ ಸುಧಾಕರ್, ನಾಗೇಶ್ ಚಿಕ್ಕಕಾಡಿಗೇನಹಳ್ಳಿ ಮತ್ತು ಮಂಜುನಾಥ್ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಪತ್ರದಲ್ಲಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ಸುಧಾಕರ್ ಅವರ ಬೆಂಬಲಿಗರು ಹಣ ಪಡೆದಿದ್ದರು ಎಂದು ಆರೋಪಿಸಲಾಗಿದೆ.
ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟಿದ್ದ ಬಾಬು
ಬಾಬು ಅವರು ಇಂದು ಮುಂಜಾನೆ 5 ಗಂಟೆಗೆ ಮನೆಯಿಂದ ಹೊರಟಿದ್ದು, ನಂತರ ಡಿಸಿ ಕಚೇರಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ, ಆದರೆ ಡೆತ್ ನೋಟ್ ಆಧರಿಸಿ ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.