ಬಾಗೇಪಲ್ಲಿ: ಮುಂದಿನ ಪೀಳಿಗೆಯ ಉಜ್ವಲ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಕೈಜೋಡಿಸಬೇಕಾದ ಅಗತ್ಯವಿದೆ ಎಂದು ತಾಲೂಕಿನ ಘಂಟಂವಾರಿಪಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಿ.ರಾಮಸುಬ್ಬಮ್ಮ ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಘಂಟಂವಾರಿಪಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸುಂದರ ಲಾಲ್ ಬಹುಗುಣ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಮಾನವನ ದುರಾಸೆಯಿಂದಾಗಿ ಪರಿಸರ ವಿನಾಶದ ಅಂಚಿಗೆ ತಲುಪುವ ಮೂಲಕ ಇಡೀ ಮನಕುಲವೇ ನಾಶವಾಗುವಂತಹ ಪರಿಸ್ಥಿತಿ ನಿರ್ಮಾಣವಾಗುವಂತಹ ಅವಕಾಶಗಳು ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.
ಮುಂದಿನ ಪೀಳಿಗೆಯ ಭವಿಷ್ಯದ ಹಿತದೃಷ್ಠಿಯಿಂದ ಶಿಕ್ಷಣದ ಜೊತೆಗೆ ಗಿಡ ಮರಗಳನ್ನು ಉಳಿಸಿ ಬೆಳಸುವಂತಹ ಕೆಲಸವನ್ನು ವಿದ್ಯಾರ್ಥಿಧೆಸೆಯಿಂದಲ್ಲೇ ಮೈಗೂಡಿಸಿಕೊಳ್ಳಬೇಕೆಂದ ಅವರು ಪರಿಸರ ಸಂರಕ್ಷಣೆಗೆಪರಿಸರ ವಿನಾಶದ ಅಂಚಿಗೆ ತಲುಪುವ ಮುನ್ನ ಎಚ್ಚತ್ತೆಕೊಳ್ಳಬೇಕಾದ ಅಗತ್ಯವಿದೆ ಅಲ್ಲದೆ ಪರಿಸರದ ಬಗ್ಗೆ ಇಂದಿನ ಯುವ ಪೀಳಿಗೆಗೆ ಜಾಗೃತಿ ಮೂಡಿಸಬೇಕಾಗಿದೆ ಎಂದ ಅವರು ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಮಾನವನ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಎಸ್.ಎನ್.ಸಂದ್ಯಾ, ಎನ್.ಶ್ರೀನಿವಾಸ್, ನಾರಾಯಣಸ್ವಾಮಿ, ರಾಮಚಂದ್ರಪ್ಪ, ಎಲ್.ರವಿ ಮತ್ತಿತರರು ಇದ್ದರು.