ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ (Valmiki Scam) ನಡೆದ ಕೋಟಿ ಕೋಟಿ ಹಗರಣದ ಸಂಪೂರ್ಣ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರ ಎಂದು ಹಾಗೂ ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದ ಹಣ ಲೋಕಸಭಾ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ನಡೆದಂತಹ ವಾಲ್ಮಿಕಿ ನಿಗಮ ಬಹುಕೋಟಿ ಹಗರಣ (Valmiki Scam) ಪ್ರಕರಣದ ತನಿಖೆ ಮಾಡುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಹಗರಣ ಹೇಗೆ ನಡೆಯಿತೆಂದು ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಹಗರಣದ ಮಾಸ್ಟರ್ ಮೈಂಡ್ ಬಿ. ನಾಗೇಂದ್ರ ಎಂದು ಉಲ್ಲೇಖಿಸಲಾಗಿದೆ. ಬಿ. ನಾಗೇಂದ್ರ ಅವರು ಹಗರಣದ ಆರೋಪಿ, ಹೈದರಾಬಾದ್ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ಎಂಡಿ ಸತ್ಯನಾರಾಯಣವರ್ಮಾ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಣದ ಬಳಕೆಯ ಬಗ್ಗೆ ಬರೆದಿದ್ದಾರೆ. (Valmiki Scam) ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇಡಿ ತನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.

ಇನ್ನೂ ಇ.ಡಿ ಸಲ್ಲಿಸಿದ ಚಾರ್ಜ್ ಶೀಟ್ ನ ಪ್ರತಿ ಹಂತದಲ್ಲಿಯೂ ಸ್ವತಃ ಸಚಿವ ನಾಗೇಂದ್ರ (Valmiki Scam) ಭಾಗಿಯಾಗಿದ್ದು, ಆತನೇ ಡೀಲ್ ಮಾಡಿದ್ದಾನೆ. ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದ ಸಂಪೂರ್ಣ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರನೇ ಎಂದು ಉಲ್ಲೇಖ ಮಾಡಲಾಗಿದೆ. ಆದರೆ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ (Valmiki Scam) ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ (SIT) ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಆಗಸ್ಟ್ ತಿಂಗಳಿನಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ (Nagendra), ಬಸನಗೌಡ ದದ್ದಲ್ (Basanagouda Daddal) ಅವರ ಹೆಸರನ್ನು ಉಲ್ಲೇಖಿಸಿರಲಿಲ್ಲ. (Valmiki Scam) ಇದೀಗ ಇ.ಡಿ ಚಾರ್ಜ್ ಶೀಟ್ ನಲ್ಲಿ ನಾಗೇಂದ್ರ ಹೆಸರು ಉಲ್ಲೇಖ ಮಾತ್ರವಲ್ಲದೇ ಆತನೇ ಹಗರಣ ಪ್ರಮುಖ ರುವಾರಿ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.