ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ಮಾಡಲು ರೈತ ಸಂಘ ಮನವಿ

ಬಾಗೇಪಲ್ಲಿ: ತಾಲೂಕಿನ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಸಲಕರಣೆಗಳನ್ನು ಸಮರ್ಪಕವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಹಾಗೂ ರೈತ ಮುಖಂಡರು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮುಖಂಡರು ಕಳೆದ ವರ್ಷ ಮಳೆ ಅಭಾವದಿಂದ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತಲ್ಲದೆ ತಾಲೂಕಿನ ಯಾವುದೇ ರೈತರಿಗೂ ಬೆಳೆ ಕೈಗೆ ಸಿಕ್ಕಿಲ್ಲ, ಈ ವರ್ಷದಲ್ಲಿ ಮುಂಗಾರಿಗೂ ಮುನ್ನವೇ ಅಲ್ಪಸ್ವಲ್ಪ ಮಳೆಯಾಗುತ್ತಿದ್ದು ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ ಈ ನಿಟ್ಟಿನಲ್ಲಿ ರಾಗಿ, ಮುಸಕಿನ ಜೋಳ, ಅಲಸಂಧಿ, ಶೇಂಗಾ ಇತ್ಯಾಧಿ ಉತ್ತಮ ಗುಣಮಟ್ಟದ ಭಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಸಲಕರಣೆಗಳನ್ನು ರೈತರ ಅಗತ್ಯದ ಅನುಸಾರವಾಗಿ ಪೂರೈಸುವಂತೆ ಮನವಿ ಮಾಡಿದರು.

ರೈತರಿಗೆ ವಿತರಿಸುವ ಬಿತ್ತನೆ ಬೀಜ ಗುಣಮಟ್ಟವನ್ನು ಪರೀಕ್ಷೆ ಮಾಡಿ ವಿತರಿಸಿ ಒಂದು ವೇಳೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆಯಾಗಿ ಬೆಳೆ ನಾಶವಾದರೆ, ಉತ್ತಮ ಇಳುವರಿ ಬರದಿದ್ದರೆ ಬಿತ್ತನೆ ಬೀಜ ವಿತರಿಸಿದ ಇಲಾಖೆ ಅಧಿಕಾರಿಗಳು ಹಾಗೂ ಬಿತ್ತನೆ ಬೀಜ ಪೂರೈಸಿರುವ ಕಂಪನಿಗಳೇ ನೇರ ಹೊಣೆಗಾರರನ್ನಾಗಿಸಿ ಅವರ ವಿರುದ್ದ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದರು. ಈ ವೇಳೆ ರೈತ ಸಂಘದ ಮುಖಂಡರು ಹಾಗೂ ರೈತರು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಲಕ್ಷ್ಮೀ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

Next Post

ಸರ್ಕಾರ ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ, ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದ್ದು ಮುಖ್ಯ ಎಂದ ಡಿ.ಕೆ.ಶಿವಕುಮಾರ್

Tue May 21 , 2024
ಕರ್ನಾಟಕದ ಕಾಂಗ್ರೇಸ್ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‍ ರವರಿಗೆ ಕೆಪಿಸಿಸಿ ಘಟಕದಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಡಿಕೆಶಿ ಸರ್ಕಾರ ಒಂದು ಪೂರೈಸಿದ್ದು ಮುಖ್ಯವಲ್ಲ, ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ ಎಂದು ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‍, ರಾಜ್ಯದಲ್ಲಿ […]
dk shivakumar honor meeting
error: Content is protected !!