Farmers Protest: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಸ್ಕಾಂ ಕಚೇರಿ ಮುಂದೆ ರೈತ ಸಂಘ ಪ್ರತಿಭಟನೆ….!

Farmers Protest – ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ಬೆಸ್ಕಾಂ ಕಚೇರಿಯ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಬೆಸ್ಕಾ ಕಚೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿದರು.

Farmers Protest for power 1

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷ ಕೆ.ಎನ್.ಸೋಮಶೇಖರ್‍ ತಾಲೂಕಿನಾದ್ಯಂತ ರೈತರು ಸುಮಾರು 500 ಎಕರೆಗೂ ಹೆಚ್ಚು ಹೂಗಳು, ಆಲೂಗಡ್ಡೆ ಸೇರಿದಂತೆ ವಿವಿಧ ಬೆಳೆಗಳನ್ನು ಇಟ್ಟಿದ್ದಾರೆ. ಆದರೆ ರೈತರು ತಮ್ಮ ಬೆಳೆಗಳಿಗೆ ಸರಿಯಾಗಿ ನೀರು ಪೂರೈಕೆ ಮಾಡಲು ಆಗದೆ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಬೆಸ್ಕಾಂ ಇಲಾಖೆಯವರು. ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದೇ ಯಾವುದೇ ಮುನ್ಸೂಚನೆಯಿಲ್ಲದೇ ವಿದ್ಯುತ್ ಕಡಿತಗೊಳಿಸುತ್ತಿದ್ದಾರೆ. ಇದರಿಂದ ರೈತರು ಸಾಲ ಮಾಡಿ ಇಟ್ಟಂತಹ ಬೆಳೆ ಕೈಗೆ ಸಿಗುವುದಿ‌ಲ್ಲವೇನೋ ಎಂಬ ಭಯದಲ್ಲಿದ್ದಾನೆ. ಆದ್ದರಿಂದ ಬೆಸ್ಕಾಂ ಇಲಾಖೆಯವರು ಕೂಡಲೇ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಟ್ರಾನ್ಸ್ ಫಾರ್ಮರ್‍ ಗಳ ಬಳಿಯಿರುವಂತಹ ಗಿಡಗಂಟೆಗಳನ್ನು ತೆರೆವುಗೊಳಿಸಬೇಕು ಹಾಗೂ ವಿದ್ಯುತ್ ಲೈನ್ ಹಾದುಹೋಗಿರುವ ಕಡೆ ಮರಗಳ ರೆಂಬೆಗಳನ್ನು ತೆರೆವು ಮಾಡಬೇಕೆಂದು ಒತ್ತಾಯಿಸಿದರು.

ನಂತರ ರೈತ ಮುಖಂಡ ರಾಮರೆಡ್ಡಿ ಮಾತನಾಡಿ, ನಮ್ಮ ತಾಲೂಕಿನ ರೈತರು ಕೃಷಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ನಮ್ಮ ಬೆಳೆಗಳಿಗೆ ನೀರು ಹಾಯಿಸಲು ಯಾವುದೇ ನದಿಗಳಾಗಲಿ, ಕಾಲುವೆಗಳಾಗಲಿ ಇಲ್ಲ. ಬೋರ್‍ ವೆಲ್ ಗಳ ಮೂಲಕವೇ ನೀರು ಹಾಯಿಸಬೇಕಿದೆ. ಆದರೆ ಬೆಸ್ಕಾಂ ನವರು ಮಾತ್ರ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದೇ ತುಂಬಾನೆ ಸಮಸ್ಯೆ ಕೊಡುತ್ತಿದ್ದಾರೆ. ಸೋಲಾರ್‍ ಪ್ಲಾಂಟ್ ಗಳನ್ನಾದರೂ ಆರಂಭಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಬೆಸ್ಕಾ ಇಲಾಖೆಯವರು ಮುಂದಾಗಬೇಕು. ನಮ್ಮೆಲ್ಲಾ ಈ ಸಮಸ್ಯೆಗಳನ್ನು ಬಗೆಹರಿಸದೇ ಇದ್ದರೇ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Farmers Protest for power 2

ಈ ಸಮಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಸ್ಕಾ ಇಲಾಖೆಯ ಎಇಇ ವಿಶ್ವಾಸ್ ರವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಮಯದಲ್ಲಿ ರೈತ ಸಂಘದ ಕಾರ್ಯದರ್ಶಿ ಭೂಪಾಲ್‍ರೆಡ್ಡಿ, ಜಿಲ್ಲಾ ಘಟಕ ಸದಸ್ಯಬಲ ರಾಮಪ್ಪ.ಗೌರವಾಧ್ಯಕ್ಷ ವೆಂಕಟರೋಣಪ್ಪ, ಮುಖಂಡರಾದ ಚೌಡರೆಡ್ಡಿ, ಬಿ.ಶ್ರೀನಿವಾಸ, ಲಕ್ಷ್ಮೀನಾರಾಯಣಪ್ಪ, ಗಂಗಿರೆಡ್ಡಿ, ರಾಮಾಂಜಿನಪ್ಪ, ಗಂಗಾಧರಪ್ಪ ಸೇರಿದಂತೆ ಹಲವರಿದ್ದರು.

Leave a Reply

Your email address will not be published. Required fields are marked *

Next Post

HMPV : ಇದು ಹೊಸ ವೈರಸ್ ಅಲ್ಲ, ಭಯ ಬೇಡ ಎಂದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ….!

Tue Jan 7 , 2025
HMPV – ಇಡೀ ವಿಶ್ವದಾದ್ಯಂತ ಕಳೆದೆರಡು ದಿನಗಳಿಂದ HMPV ವೈರಸ್ ಕುರಿತು ಭಾರಿ ಸಂಚಲನ ಸೃಷ್ಟಿಯಾಗಿದ್ದು, ಭಾರತದಲ್ಲೂ ಸಹ ಈ ವೈರಸ್ ಹಲವು ಕಡೆ ಪತ್ತೆಯಾಗಿದೆ. ಇದೀಗ ಈ ವೈರಸ್ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮಾಹಿತಿ ಹಂಚಿಕೊಂಡಿದ್ದಾರೆ. HMPV 2001 ರಲ್ಲಿ ಮೊದಲ ಬಾರಿಗೆ ಕಂಡುಬಂದಿದ್ದು, ಇದು ಹೊಸ ವೈರಸ್ ಅಲ್ಲ. ಇದು ಸುಮಾರು ವರ್ಷಗಳಿಂದ ಜಾಗತಿಕವಾಗಿ ಹರಡುತ್ತಿದೆ. ಆದ್ದರಿಂದ ಇದು ಹೊಸ ವೈರಸ್ ಎಂದು ಭಯಪಡಬೇಡಿ […]
J P Nadda information about HMTV
error: Content is protected !!