Gwalior – ಮಧ್ಯಪ್ರದೇಶದ ಗ್ವಾಲಿಯರ್‌ನ ವ್ಯಕ್ತಿಯೊಬ್ಬ ತನ್ನ 20 ವರ್ಷದ ಮಗಳನ್ನು ಪೊಲೀಸ್ ಅಧಿಕಾರಿಗಳು ಮತ್ತು ಪಂಚಾಯತಿಯವರ ಎದುರೇ ಕೊಲೆ ಮಾಡಿದ್ದಾನೆ. ಇನ್ನೇನು ನಾಲ್ಕು ದಿನಗಳಲ್ಲಿ ಮದುವೆ ನಡೆಯಬೇಕಿತ್ತು. ಆದರೆ ಮದುವೆ ನಾಲ್ಕು ದಿನ ಬಾಕಿಯಿರುವಾಗಲೇ 20 ವರ್ಷದ ಸ್ವಂತ ಮಗಳನ್ನು ಪೊಲೀಸರ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ತನು ಎಂದು ಗುರ್ತಿಸಲಾಗಿದೆ. ಅಷ್ಟಕ್ಕೂ ತಂದೆ ತನ್ನ ಮಗಳನ್ನು ಕೊಲೆ ಮಾಡಿದ್ದಾದರೂ ಏಕೆ ಎಂಬ ವಿಚಾರಕ್ಕೆ ಬಂದರೇ.
ಮಗಳ ವಿವಾಹದ ಆಮಂತ್ರಣ ಪತ್ರಿಕೆ ಹಂಚಿದ್ದು, ಇನ್ನೇನು ಮದುವೆಗೆ ನಾಲ್ಕು ದಿನ ಇರುವಾಗಲೇ ಮಗಳು ಅರೆಂಜ್ ಮ್ಯಾರೇಜ್ ಗೆ ಒಪ್ಪದೇ, ಮತ್ತೊಬ್ಬನನ್ನು ವಿವಾಹವಾಗುತ್ತೇನೆ ಎಂದಿದ್ದಕ್ಕೆ ಪೊಲೀಸರು ಮತ್ತು ಪಂಚಾಯಿತಿದಾರರ ಸಮ್ಮುಖದಲ್ಲೇ ತಂದೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ತನ್ನ ಮಗಳು ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ವಿಡಿಯೋ ಹಿನ್ನೆಲೆಯಲ್ಲಿ ಕೋಪಗೊಂಡ ತಂದೆ ಮಹೇಶ್ ಗುರ್ಜರ್ ಎಂಬಾತ ದೇಶಿ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ತನ್ನ ಮಗಳ ಎದೆಗೆ ಗುಂಡು ಹಾರಿಸಿದ್ದಾನೆ. ತನುವಿನ ಹಣೆ, ಕುತ್ತಿಗೆ, ಕಣ್ಣು ಮತ್ತು ಮೂಗಿನ ತಾಗಿದೆ. ಕುಸಿದು ಬಿದ್ದ ತನು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮಂಗಳವಾರ ಸಂಜೆ 9 ಗಂಟೆ ಸುಮಾರಿಗೆ ನಗರದ ಗೋಲಾ ಕಾ ಮಂದಿರ ಪ್ರದೇಶದಲ್ಲಿ ಈ ಕೊಲೆ ನಡೆದಿದೆ.
ಇನ್ನೂ ಮೃತ ಯುವತಿ ತನು ಪೋಸ್ಟ್ ಮಾಡಿದ ವಿಡಿಯೋದಲ್ಲಿ ಏನಿದೆ ಎಂಬ ವಿಚಾರಕ್ಕೆ ಬಂದರೇ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ವೀಡಿಯೊದ ಬಗ್ಗೆ ತಿಳಿದ ನಂತರ ಕೋಪಗೊಂಡ ತಂದೆ ಮಹೇಶ್ ಗುರ್ಜರ್ ಅವರು ಸಾರ್ವಜನಿಕವಾಗಿ ತನುವನ್ನು ಹೊಡೆದರು. ತನ್ನ ಕೊಲೆಗೆ ಕೆಲವೇ ಗಂಟೆಗಳ ಮೊದಲು, ತನು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾಳೆ. ತನ್ನ ಕುಟುಂಬವು ತನಗೆ ಇಷ್ಟವಿಲ್ಲದ ಮದುವೆಗೆ ಒತ್ತಾಯಿಸಿದೆ ಎಂದು ಆರೋಪಿಸಿದ್ದಾರೆ. 52 ಸೆಕೆಂಡುಗಳ ಕ್ಲಿಪ್‌ನಲ್ಲಿ, ಅವಳು ತನ್ನ ತಂದೆ ಮಹೇಶ್ ಮತ್ತು ಇತರ ಸಂಬಂಧಿಕರನ್ನು ತನ್ನ ಪರಿಸ್ಥಿತಿಗೆ ಕಾರಣವೆಂದು ಹೆಸರಿಸಿದ್ದಾಳೆ, ತನ್ನ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾಳೆ. ತನಗೆ ಜೀವಭಯವಿದೆ ಎಂದು ಹೇಳಿಕೊಂಡಿದ್ದಳು. ನಾನು ವಿಕ್ಕಿ ಎಂಬಾತನನ್ನ ಮದುವೆಯಾಗಲು ಬಯಸಿದ್ದೇನೆ. ನನ್ನ ಮನೆಯವರು ಆರಂಭದಲ್ಲಿ ಇದಕ್ಕೆ ಒಪ್ಪಿದ್ದರು, ನಂತರ ನಿರಾಕರಿಸಿದರು. ಅವರು ಪ್ರತಿದಿನ ನನ್ನನ್ನ ಹೊಡೆಯುತ್ತಾರೆ ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾರೆ. ನನಗೆ ಏನಾದರೂ ಸಂಭವಿಸಿದರೆ, ನನ್ನ ಕುಟುಂಬವೇ ಜವಾಬ್ದಾರವಾಗಿರುತ್ತದೆ ಎಂದು ತನು ವಿಡಿಯೋನಲ್ಲಿ ಹೇಳಿಕೊಂಡಿದ್ದಳು.
ಈ ವೀಡಿಯೋದಲ್ಲಿ ಉಲ್ಲೇಖಿಸಿದ ವಿಕ್ಕಿ ಎಂಬಾತ ಉತ್ತರ ಪ್ರದೇಶದ ಆಗ್ರಾ ನಿವಾಸಿಯಾಗಿದ್ದು, 6 ವರ್ಷಗಳಿಂದ ತನು ಜೊತೆ ಸಂಬಂಧ ಹೊಂದಿದ್ದ. ನಾನು ವಿಕ್ಕಿಯನ್ನು ಮದುವೆಯಾಗಲು ಬಯಸುತ್ತೇನೆ. ನನ್ನ ಮನೆಯವರು ಆರಂಭದಲ್ಲಿ ಒಪ್ಪಿಕೊಂಡರು ಆದರೆ ನಂತರ ಅವರ ಮನಸ್ಸು ಬದಲಾಯಿಸಿದರು. ಅವರು ಪ್ರತಿದಿನ ನನಗೆ ಹೊಡೆಯುತ್ತಾರೆ ಮತ್ತು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾರೆ. ನನಗೇನಾದರೂ ಸಂಭವಿಸಿದರೆ ನನ್ನ ಕುಟುಂಬದವರೇ ಹೊಣೆಯಾಗುತ್ತಾರೆ’’ ಎಂದು ತನು ವಿಡಿಯೋದಲ್ಲಿ ಹೇಳಿದ್ದರು.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವರಿಷ್ಠಾಧಿಕಾರಿ ಧರ್ಮವೀರ್ ಸಿಂಗ್ ನೇತೃತ್ವದ ಪೊಲೀಸ್ ಅಧಿಕಾರಿಗಳು ತನುವಿನ ಪೋಷಕರು ಹಾಗೂ ಆಕೆಯೊಂದಿಗೆ ಮಧ್ಯಸ್ಥಿಕೆ ವಹಿಸಲು ತನು ಅವರ ಮನೆಗೆ ಧಾವಿಸಿದರು. ಸಮುದಾಯದ ಪಂಚಾಯತ್ ಕೂಡ ನಡೆಯುತ್ತಿದ್ದು, ವಿಷಯವನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದರು, ಮಾತುಕತೆ ವೇಳೆ ತನು ಹಾಗೂ ತಂದೆ ತಮ್ಮ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಒಪ್ಪಲಿಲ್ಲ. ತನು ರಕ್ಷಣೆಯ ದೃಷ್ಟಿಯಿಂದ ಮನೆ ತೊರೆಯಲು ವಿನಂತಿಸಿದಳು. ಈ ಸಮಯದಲ್ಲಿ ಅಲ್ಲಿದ್ದ ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.