Dr.Manmohan Singh Passes Away – ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ 92 ವರ್ಷದ ಮನ್‌ಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ವಿಧಿವಶರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೂ ಮುನ್ನಾ ಮನಮೋಹನ್ ಸಿಂಗ್ ರವರು ಎರಡು ಅವಧಿಗಳ ಕಾಲ ದೇಶದ ಪ್ರಧಾನಿಯಾಗಿದ್ದರು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಅವರು, ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. 33 ವರ್ಷಗಳ ನಂತರ ಮೇಲ್ಮನೆಯಲ್ಲಿ ತಮ್ಮ ರಾಜಕೀಯ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದ್ದರು. ಮನಮೋಹನ್ ಸಿಂಗ್ ಅವರ ಆರೋಗ್ಯ ಗುರುವಾರ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್‌ನ ತುರ್ತು ವಿಭಾಗಕ್ಕೆ ಗುರುವಾರ ದಾಖಲಿಸಲಾಗಿತ್ತು. ಆದರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇನ್ನೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ಮರಣದ ಹಿನ್ನೆಲೆಯಲ್ಲಿ ರಾಜಕೀಯ ಗಣ್ಯರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರು 33 ವರ್ಷಗಳ ಹಿಂದೆ, 1991 ರಲ್ಲಿ, ಸಿಂಗ್ ಅವರು ರಾಜ್ಯಸಭೆಯಲ್ಲಿ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದರು. ಮೇಲ್ಮನೆಯಲ್ಲಿ ನಾಲ್ಕು ತಿಂಗಳು ಕಳೆದ ಬಳಿಕ ಅವರು ಜೂನ್‌ನಲ್ಲಿ ಪಿವಿ ನರಸಿಂಹರಾವ್ ಸರ್ಕಾರದಲ್ಲಿ ಜೂನ್ 1991 ರಲ್ಲಿ ಹಣಕಾಸು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕು ತಿಂಗಳ ನಂತರ, 1991 ರಲ್ಲಿ ಭಾರತದ ಏಕೈಕ ಸಿಖ್ ಪ್ರಧಾನಿ ರಾಜ್ಯಸಭೆಗೆ ಪ್ರವೇಶಿಸಿದ್ದರು. ಬಿಜೆಪಿ ಸರ್ಕಾರದ ನೋಟು ಅಮಾನ್ಯೀಕರಣದ ವಿರುದ್ಧ ಧ್ವನಿ ಎತ್ತಿದ್ದ ಮನಮೋಹನ್ ಸಿಂಗ್ ಅವರು ಅದು ಸಂಘಟಿತ ಲೂಟಿ ಮತ್ತು ಕಾನೂನುಬದ್ಧ ಲೂಟಿ ಎಂದು ಸಂಸತ್ತಿನಲ್ಲಿ ಗುಡುಗಿದ್ದರು. 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು.