ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಕಾರ್ಗಿಲ್ ಯುದ್ದದಲ್ಲಿ ಮಡಿದ ಭಾರತೀಯ ವೀರ ಯೋಧರ ಸ್ಮರಣಾರ್ಥ (Kargil Vijya Divas) ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ರವರ ಸಹಯೋಗದಲ್ಲಿ ಜು.26 ಶುಕ್ರವಾರದಂದು ಪಟ್ಟಣದ ಗಜನಾಣ್ಯ ಪಟ್ಟುಸಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದ್ದು, ಜನರು ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದ್ಬಳಕೆ ಮಾಡಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳ ಸಂಘಟನೆ ಮಾಧ್ಯಮ ಹೇಳಿಕೆ ಬಿಡುಗಡೆ (Kargil Vijya Divas) ಮಾಡಿದ್ದು, ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ ಸುಧಾಕರ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಕೇಶವ ರೆಡ್ಡಿ ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಯುವ ನಾಯಕ ಆರ್.ಮಿಥುನ್ ರೆಡ್ಡಿ, ಉಚ್ಚನ್ಯಾಯಾಲಯದ ವಕೀಲ ಸದಾಶಿವರೆಡ್ಡಿ, ಹೊಸಕೋಟೆ ತಾಲ್ಲೂಕಿನ ಟಿಎಪಿಎಂಸಿ ಅಧ್ಯಕ್ಷ ಮಂಜುನಾಥ ಗೌಡ, ಬಾಗೇಪಲ್ಲಿ ಎಕ್ಸ್’ಪರ್ಟ್ ಪಿಯು ಕಾಲೇಜಿನ ಅಧ್ಯಕ್ಷ ತರುಣ್ ನಾಗೇಶ್, ನೇಕಾರರ ಪ್ರಕೋಷ್ಠದ ಸಹ ಸಂಚಾಲಕ ಗಜನಾಣ್ಯ ನಾಗರಾಜ್, ವಿಶ್ವಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ, ಗುಡಿಬಂಡೆ ವಿಶ್ವಹಿಂದೂ ಪರಿಷದ್ ಅಧ್ಯಕ್ಷ ಶ್ರೀನಾಥ್ (ಎಂಟಿಎಸ್) ಅವರು ಸೇರಿ ಹಲವು (Kargil Vijya Divas) ಗಣ್ಯರು ಭಾಗವಹಿಸಲಿದ್ದಾರೆ.
ಈ (Kargil Vijya Divas) ಶಿಬಿರದಲ್ಲಿ ಮೂಳೆ-ಕೀಲು ತಜ್ಞರು, ಕಿವಿ-ಮೂಗು ತಜ್ಞರು, ಶಸ್ತ್ರ ಚಿಕಿತ್ಸಾ ತಜ್ಞರು, ದಂತವೈದ್ಯರು, ಗಂಟಲು ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಮಕ್ಕಳ ತಜ್ಞರು ಭಾಗವಹಿಸಲಿದ್ದಾರೆ. ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ಪಡೆಯಬೇಕು ಎಂದು ಆಯೋಜಕರು ಮನವಿ ಮಾಡಿದರು.