G Parameshwar – ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಬೆಳಕಿಗೆ ಬಂದಾಗಿನಿಂದ ರಾಜ್ಯ ಸರ್ಕಾರ ಆಗ ಬೀಳುತ್ತೆ, ಈಗ ಬೀಳುತ್ತೆ ಎಂಬ ಮಾತುಗಳು ಕೇಳಿಬರುತ್ತಲೇ ಇದೆ. ಇದರ ಜೊತೆಗೆ ಆಡಳಿತ ಪಕ್ಷಗಳ ನಾಯಕರುಗಳು ಮಾತುಗಳೂ ಸಹ ಈ ಚರ್ಚೆಗೆ ಕಾರಣವಾಗಿದೆ ಎನ್ನಬಹುದಾಗಿದೆ. ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರೋಕ್ಷವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿಎಂ ತವರು ಮೈಸೂರಿನಲ್ಲಿ ನಡೆದ ಕಾಂಗ್ರೇಸ್ ಕಚೇರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಾವಾಗ ಏನಾಗುತ್ತೋ ಗೊತ್ತಿಲ್ಲ. ಆದಷ್ಟು ಬೇಗ ಮೈಸೂರಿನಲ್ಲಿ ಕಾಂಗ್ರೇಸ್ ಕಚೇರಿಯನ್ನು ಕಟ್ಟು ಬಿಡಿ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ರಾಜ್ಯದ ರಾಜಕೀಯ ಪಡುಸಾಲೆಯಲ್ಲಿ ಚರ್ಚನೀಯವಾದ ವಿಷಯವಾಗಿದೆ.
ರಾಜ್ಯದಲ್ಲಿ ಆಪರೇಷನ್ ರಾಜಕೀಯದ ಸದ್ದು ಗದ್ದಲದ ನಡುವೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಇವತ್ತಿನ ರಾಜಕೀಯ ಬೆಳವಣಿಗೆ ನೋಡ್ತಿದ್ರೆ ಏನೂ ಹೇಳಲಿಕ್ಕೆ ಆಗಲ್ಲ. ಮುಂದೆ ಏನ್ ಆಗತ್ತೋ ಗೊತ್ತಿಲ್ಲ ಅನ್ನೋ ಮೂಲಕ ಸರ್ಕಾರ ಬೀಳೋ ಮಾತನ್ನು ಪರೋಕ್ಷವಾಗಿ ನುಡಿದಿದ್ದಾರೆ. ಮೈಸೂರಿನ ಕಾಂಗ್ರೇಸ್ ಕಚೇರಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಆದಷ್ಟು ಬೇಗ ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿ ಕಟ್ಟುಬಿಡಿ. ಮುಂದೆ ಏನ್ ಆಗತ್ತೋ ಗೊತ್ತಿಲ್ಲ. ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದ್ರೆ ಏನೂ ಹೇಳಲಿಕ್ಕೆ ಆಗಲ್ಲ. ಮೈಸೂರಿನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸ್ಥಳವನ್ನು ಪಡೆಯಲು ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ಚಂದ್ರ ಪ್ರಭಾ ಅರಸು ಅವರ ಜೊತೆ ಸಾಕಷ್ಟು ಬಾರಿ ಮೀಟಿಂಗ್ ಮಾಡಿದ್ದೇನೆ. ಈಗ ಶೀಘ್ರದಲ್ಲೇ 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಂಗ್ರೆಸ್ ಕಚೇರಿಯನ್ನು ಕಟ್ಟಲು ಸಿಎಂ ಹೊರಟಿದ್ದಾರೆ ಅಂತ ಪರಮೇಶ್ವರ್ ಹೇಳಿದ್ದಾರೆ.
ಇನ್ನೂ ಕೆಲವು ದಿನಗಳ ಹಿಂದೆಯಷ್ಟೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ನಮ್ಮ ಶಾಸಕರಿಗೆ ಬಿಜೆಪಿ ಕೋಟಿ ಕೋಟಿ ಆಫರ್ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ನಮ್ಮ ಪಕ್ಷದ 50 ಮಂದಿ ಶಾಸಕರಿಗೆ ತಲಾ 50 ಕೋಟಿ ನೀಡುತ್ತೇವೆ ನಮ್ಮ ಪಕ್ಷಕ್‌ಎಕ ಬನ್ನಿ ಎಂದು ಬಿಜೆಪಿಯವರು ಆಫರ್ ನೀಡಿದ್ದಾರೆ ಆರೋಪಿಸಿದ್ದರು. ಅದರ ಜೊತೆಗೆ ಮತ್ತೆ ಕೆಲವರು 50 ಕೋಟಿಯಲ್ಲ 100 ಕೋಟಿ ಆಫರ್ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ್ದರು. ಈ ಚರ್ಚೆಯ ನಡುವೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ ಈ ಹೇಳಿಕೆ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.