G Parameshwar: ಸಿಎಂ ತವರಲ್ಲೇ ಗೃಹ ಸಚಿವರ ಶಾಕಿಂಗ್ ಕಾಮೆಂಟ್ಸ್, ಯಾವಾಗ ಏನಾಗುತ್ತೊ ಗೊತ್ತಿಲ್ಲ ಎಂದ ಜಿ.ಪರಮೇಶ್ವರ್….!

G Parameshwar – ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಬೆಳಕಿಗೆ ಬಂದಾಗಿನಿಂದ  ರಾಜ್ಯ ಸರ್ಕಾರ ಆಗ ಬೀಳುತ್ತೆ, ಈಗ ಬೀಳುತ್ತೆ ಎಂಬ ಮಾತುಗಳು ಕೇಳಿಬರುತ್ತಲೇ ಇದೆ. ಇದರ ಜೊತೆಗೆ ಆಡಳಿತ ಪಕ್ಷಗಳ ನಾಯಕರುಗಳು ಮಾತುಗಳೂ ಸಹ ಈ ಚರ್ಚೆಗೆ ಕಾರಣವಾಗಿದೆ ಎನ್ನಬಹುದಾಗಿದೆ. ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್‍ ಪರೋಕ್ಷವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿಎಂ ತವರು ಮೈಸೂರಿನಲ್ಲಿ ನಡೆದ ಕಾಂಗ್ರೇಸ್ ಕಚೇರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಾವಾಗ ಏನಾಗುತ್ತೋ ಗೊತ್ತಿಲ್ಲ. ಆದಷ್ಟು ಬೇಗ ಮೈಸೂರಿನಲ್ಲಿ ಕಾಂಗ್ರೇಸ್ ಕಚೇರಿಯನ್ನು ಕಟ್ಟು ಬಿಡಿ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ರಾಜ್ಯದ ರಾಜಕೀಯ ಪಡುಸಾಲೆಯಲ್ಲಿ ಚರ್ಚನೀಯವಾದ ವಿಷಯವಾಗಿದೆ.

Dr G Parameshwar Shocking comments

ರಾಜ್ಯದಲ್ಲಿ ಆಪರೇಷನ್ ರಾಜಕೀಯದ ಸದ್ದು ಗದ್ದಲದ ನಡುವೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಇವತ್ತಿನ ರಾಜಕೀಯ ಬೆಳವಣಿಗೆ ನೋಡ್ತಿದ್ರೆ ಏನೂ ಹೇಳಲಿಕ್ಕೆ ಆಗಲ್ಲ. ಮುಂದೆ ಏನ್ ಆಗತ್ತೋ ಗೊತ್ತಿಲ್ಲ ಅನ್ನೋ ಮೂಲಕ ಸರ್ಕಾರ ಬೀಳೋ ಮಾತನ್ನು ಪರೋಕ್ಷವಾಗಿ ನುಡಿದಿದ್ದಾರೆ. ಮೈಸೂರಿನ ಕಾಂಗ್ರೇಸ್ ಕಚೇರಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಆದಷ್ಟು ಬೇಗ ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿ ಕಟ್ಟುಬಿಡಿ. ಮುಂದೆ ಏನ್ ಆಗತ್ತೋ ಗೊತ್ತಿಲ್ಲ. ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದ್ರೆ ಏನೂ ಹೇಳಲಿಕ್ಕೆ ಆಗಲ್ಲ. ಮೈಸೂರಿನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸ್ಥಳವನ್ನು ಪಡೆಯಲು ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ಚಂದ್ರ ಪ್ರಭಾ ಅರಸು ಅವರ ಜೊತೆ ಸಾಕಷ್ಟು ಬಾರಿ ಮೀಟಿಂಗ್ ಮಾಡಿದ್ದೇನೆ. ಈಗ ಶೀಘ್ರದಲ್ಲೇ 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಂಗ್ರೆಸ್ ಕಚೇರಿಯನ್ನು ಕಟ್ಟಲು ಸಿಎಂ ಹೊರಟಿದ್ದಾರೆ ಅಂತ ಪರಮೇಶ್ವರ್ ಹೇಳಿದ್ದಾರೆ.

Dr G Parameshwar Shocking comments 0

ಇನ್ನೂ ಕೆಲವು ದಿನಗಳ ಹಿಂದೆಯಷ್ಟೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ನಮ್ಮ ಶಾಸಕರಿಗೆ ಬಿಜೆಪಿ ಕೋಟಿ ಕೋಟಿ ಆಫರ್‍ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ನಮ್ಮ ಪಕ್ಷದ 50 ಮಂದಿ ಶಾಸಕರಿಗೆ ತಲಾ 50 ಕೋಟಿ ನೀಡುತ್ತೇವೆ ನಮ್ಮ ಪಕ್ಷಕ್‌ಎಕ ಬನ್ನಿ ಎಂದು ಬಿಜೆಪಿಯವರು ಆಫರ್‍ ನೀಡಿದ್ದಾರೆ ಆರೋಪಿಸಿದ್ದರು. ಅದರ ಜೊತೆಗೆ ಮತ್ತೆ ಕೆಲವರು 50 ಕೋಟಿಯಲ್ಲ 100 ಕೋಟಿ ಆಫರ್‍ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ್ದರು. ಈ ಚರ್ಚೆಯ ನಡುವೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‍ ನೀಡಿದ ಈ ಹೇಳಿಕೆ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *

Next Post

CPIM: ಬಿಜೆಪಿ-ಕಾಂಗ್ರೇಸ್ ಪಕ್ಷಗಳಿಗೆ ಜನರು ತಕ್ಕಪಾಠ ಕಲಿಸುತ್ತಾರೆ: ರಾಘವಲು

Fri Nov 22 , 2024
CPIM – ರೈತರ, ದಲಿತರ, ಅಲ್ಪಸಂಖ್ಯಾತರ,ಬಡವರ, ಕೂಲಿ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ಮಾಡುವ ಏಕೈಕ ಪಕ್ಷ ಸಿಪಿಐ(ಎಂ) ಪಕ್ಷವಾಗಿದೆ. ದೇಶ ಮತ್ತು ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ. ರಾಘವಲು ಭವಿಷ್ಯ ನುಡಿದರು. 18ನೇ ಸಿಪಿಐ(ಎಂ) ಜಿಲ್ಲಾ ಸಮ್ಮೇಳನದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತದಲ್ಲಿ ಆಯೋಜಿಸಲಾಗಿದ್ದ […]
CPIM 18th sammelana
error: Content is protected !!