Good News ಸುಮಾರು ದಿನಗಳಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ (7th Pay Commission) ಶಿಫಾರಸ್ಸು ಜಾರಿಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದರು. ಅವರ ಬೇಡಿಕೆ ಇದೀಗ ಈಡೇರಲಿದೆ. 7ನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಕಟಿಸಿದ್ದಾರೆ. ಜು.15 ರಂದು ಸಚಿವ ಸಂಪುಟದಲ್ಲಿ ನಡೆದ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಮಾ.16 ರಂದು ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ (Siddaramaiah) ಸ್ವೀಕಾರ ಮಾಡಿದ್ದರು. ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಕುರಿತು ಮಾಹಿತಿ ಕೇಳಲಾಗಿತ್ತು. ಇದೀಗ ಹಣಕಾಸು ಇಲಾಖೆಯ ವರದಿ ಬಳಿಕ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ. ಇನ್ನೂ ಸರ್ಕಾರಿ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದರೇ ಜು.29 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಶುರು ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಹ ನೀಡಿದ್ದರು. ಇದೀಗ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯನ್ನು ಈಡೇರಿಸಲು ಮುಂದಾಗಿದ್ದು, ಅದರಂತೆ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಸರ್ಕಾರಿ ನೌಕರರ ವೇತನ ಶೇ.27.5 ರಷ್ಟು ಹೆಚ್ಚಾಗಲಿದೆ ಎಂದು ತಿಳಿದುಬಂದಿದೆ.
ಇನ್ನೂರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಕಳೆದರಡು ದಿನಗಳ ಹಿಂದೆಯಷ್ಟೆ ಚಿಕ್ಕಮಗಳೂರಿನಲ್ಲಿ ಸಭೆ ಸೇರಿ ವೇತನ ಆಯೋಗ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸದೇ ಇದ್ದರೇ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈ ಹಿಂದೆ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಕೆಲವು ಸಚಿವರು 7ನೇ ವೇತನ ಆಯೋಗ ಜಾರಿ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಸಂಪನ್ಮೂಲ ಕೊರತೆಯ ಕಾರಣದಿಂದ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸ್ಸಿನಂತೆ ಈ ತೀರ್ಮಾನವನ್ನು ಮಂದೂಡುತ್ತಾ ಬರುತ್ತಿತ್ತು. ಆದರೆ ಇದೀಗ ನೌಕರರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗ ಜಾರಿ ಮಾಡಲು ನಿರ್ಧಾರ ತೆಗೆದುಕೊಂಡಿದೆ.