Friday, June 13, 2025
HomeStateಶಾಲಾ ಶಿಕ್ಷನಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, 7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಕಾಮುಕ….!

ಶಾಲಾ ಶಿಕ್ಷನಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, 7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಕಾಮುಕ….!

ಅತ್ಯಾಚಾರ, ಲೈಂಗಿಕ ದೌರ್ಜನ್ಯಕ್ಕೆ ಕಠಿಣ ಕಾನೂನು ಇದ್ದರೂ, ಅದು ಕಾಮುಕರ ಕಣ್ಣಿಗೆ ಏನು ಅಲ್ಲ ಎಂಬಂತೆ ನೀಚ ಕೃತ್ಯಗಳಿಗೆ ಒಳಗಾಗುತ್ತಿರುತ್ತಾರೆ. ಗುರುವನ್ನು ಮೊದಲ ಸ್ಥಾನದಲ್ಲಿಡಲಾಗುತ್ತದೆ. ಆದರೆ ಅದೇ ಗುರು ಇದೀಗ ನೀಚ ಕೆಲಸ ಮಾಡಿ ಶಿಕ್ಷಕ ಎಂಬ ಪದಕ್ಕೆ ಕಳಂಕ ತಂದಿದ್ದಾನೆ. ಚಿಕ್ಕಬಳ್ಳಾಪುರದ ಶಿಕ್ಷಕನೋರ್ವ ಶಾಲೆಯಲ್ಲಿಯೇ 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಇದೀಗ ಮೂರು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತನೇ ಈ ನೀಚ ಕೃತ್ಯವೆಸಗಿದ ಕಾಮುಕ ಎಂದು ಗುರ್ತಿಸಲಾಗಿದೆ. ಈತ ವಿದ್ಯಾರ್ಥಿನಿಯ ಮೇಲೆ ಕಳೆದ ಕೆಲ ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಮಹಿಳಾ ಅಧಿಕಾರಿಗಳು ರಕ್ಷಿಸಿ ಆಪ್ತ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇನ್ನೂ ಆರೋಪಿ ವೆಂಕಟೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

school girl rapped in chikkaballapura 1

ಅತ್ಯಾಚಾರಕ್ಕೆ ಒಳಗಾದ ಬಾಲಕಿ ಕಳೆದ 5 ತಿಂಗಳುಗಳಿಂದ ಪಿರಿಯಡ್ಸ್ ಆಗದ ಕಾರಣದ ಪೋಷಕರು ಆಕೆಯನ್ನು ವೈದ್ಯರ ಬಳಿ ಚೆಕಪ್ ಗಾಗಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ವೇಳೆ ವಿದ್ಯಾರ್ಥಿಯನ್ನು ಪೋಷಕರು ಪ್ರಶ್ನೆ ಮಾಡಿದಾಗ ಶಾಲೆಯ ಮುಖ್ಯ ಶಿಕ್ಷಕ ಅತ್ಯಾಚಾರ ಎಸಗಿರುವ ವಿಚಾರವನ್ನು ತಿಳಿಸಿದ್ದಾರೆ. ಕಳೆದ ಆರು ತಿಂಗಳಿಂದ ಶಿಕ್ಷಕ ವೆಂಕಟೇಶ್ ಅತ್ಯಾಚಾರವೆಸಗಿದ್ದಾನೆ. ಶಾಲೆಯ ಕಚೇರಿ ಕೊಠಡಿಯಲ್ಲಿ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದ್ದು, ವಿದ್ಯಾರ್ಥಿನಿ ವಿರೋಧ ಮಾಡಿದರೂ ಬಲವಂತದಿಂದ ಅತ್ಯಾಚಾರವೆಸಗಿದ್ದಾನೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಶಿಕ್ಷಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವೆಂಕಟೇಶ್ ನನ್ನು ಬಂಧಿಸಿದ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular