Govt Employees – ಸರ್ಕಾರಿ ನೌಕರರು ಕೆಲಸದ ನಿಮಿತ್ತ ತಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬಾರದು. ಆಗಿದ್ದಾಂಗೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಸರ್ಕಾರಿ ನೌಕರರ ಸಂಘದ ಗುಡಿಬಂಡೆಯ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ನೌಕರರಿಗೆ ಸಲಹೆ ನೀಡಿದರು.
Govt Employees – ನೌಕರರು ಆಗಾಗ ಆರೋಗ್ಯ ತಪಾಸಣೆ ಮಾಡಿಸಿ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಇತ್ತೀಚಿಗೆ ಅನಾರೋಗ್ಯದ ನಿಮಿತ್ತ ಮೃತಪಟ್ಟ ಆದರ್ಶ ವಿದ್ಯಾಲಯದ ಶಿಕ್ಷಕ ಮಹದೇವಯ್ಯನವರ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಜೆಪಿ ನಗರದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಮಹದೇವಯ್ಯ ನವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರ ಮರಣ ಇಂದು ಶಾಲೆಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಲಾರದ ನಷ್ಟ ಎಂದೇ ಹೇಳಬಹುದಾಗಿದೆ. ಸದಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಾ, ಹೆಚ್ಚು ಫಲಿತಾಂಶ ಬರಲು ಶ್ರಮಿಸುತ್ತಿದ್ದ ಶಿಕ್ಷಕ ಅನಾರೋಗ್ಯದಿಂದ ಮೃತಪಟ್ಟಿದ್ದು ನೋವಿನ ಸಂಗತಿಯಾಗಿದೆ. ಆದ್ದರಿಂದ ನೌಕರರು ಆಗಿದ್ದಾಂಗೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು ಎಂದು ಸಲಹೆ ನೀಡಿದರು.

Govt Employees – ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಮನವಿ
ಬಳಿಕ ನೌಕರರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿ ವಿಜ್ಞಾನ ಶಿಕ್ಷಕ ಮಹದೇವಯ್ಯ ಮೃತಪಟ್ಟ ವಿಚಾರ ತಿಳಿದು ತುಂಬಾನೆ ದುಃಖವಾಯಿತು. ಗುಡಿಬಂಡೆ ತಾಲೂಕು ಒಳ್ಳೆಯ ಶಿಕ್ಷಕನನ್ನು ಕಳೆದುಕೊಂಡಂತಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರಿ ನೌಕರರ ಸಂಘದಿಂದ ಅಗತ್ಯ ಸಹಕಾರವನ್ನು ನೀಡುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಮಾಡುತ್ತೇವೆ. ಜೊತೆಗೆ ನೌಕರರ ಸಂಘದ ವತಿಯಿಂದ ಮುಂದಿನ ದಿನಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು.
Read this also : ಬೇಸಿಗೆಯಲ್ಲಿ ಸೌತೆಕಾಯಿ ರಸದ ಅದ್ಭುತ ಪ್ರಯೋಜನಗಳು: ಹೃದಯಾಘಾತದಿಂದ ರಕ್ಷಣೆ!
Govt Employees – ಶ್ರದ್ದಾಂಜಲಿ ಸಭೆಯಲ್ಲಿ ಹಾಜರಿದ್ದವರು
ಈ ವೇಳೆ ಸರ್ಕಾರಿ ನೌಕರರ ಸಂಘದ ಪಿ.ಎನ್.ರಾಜಶೇಖರ್, ಮಂಜುಳ, ನಾರಾಯಣಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀರಾಮರೆಡ್ಡಿ, ಶಿಕ್ಷಣ ಇಲಾಖೆಯ ಟಿಪಿಒ ಮುರಳಿ, ಇಸಿಒ ನಂಜುಂಡಪ್ಪ, ಖಜಾನೆ ಇಲಾಖೆಯ ನಾಗರಾಜ್, ಶಿಕ್ಷಕರಾದ ಸಿ.ವೈ.ನರಸಿಂಹಪ್ಪ, ಅಶೋಕ್, ರಾಮಕೃಷ್ಣ, ಮನೋಹರ್, ಮುರಳಿ ಸೇರಿದಂತೆ ಹಲವರು ಇದ್ದರು.