Govt School – ಸರ್ಕಾರಿ ಶಾಲೆಗಳಲ್ಲಿ ನುರಿತ ಹಾಗೂ ತರಬೇತಿ ಪಡೆದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಮನವಿ ಮಾಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಸುಪಲೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಸರಸ್ವತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Govt School – ಸರ್ಕಾರಿ ಶಾಲೆಗಳಲ್ಲಿ ಆದ್ದೂರಿ ವಾರ್ಷಿಕೋತ್ಸವ

ಖಾಸಗಿ ಶಾಲೆಗಳು ಸಾಮಾನ್ಯವಾಗಿ ತಮ್ಮ ವಾರ್ಷಿಕೋತ್ಸವವನ್ನು ಆದ್ದೂರಿಯಾಗಿ ಆಚರಿಸುತ್ತವೆ. ಆದರೆ, ಮಾಚಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವಿ. ಶ್ರೀರಾಮಪ್ಪ ಮತ್ತು ಸಹ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಶಾಲಾ ವಾರ್ಷಿಕೋತ್ಸವವನ್ನು ಭವ್ಯವಾಗಿ ಆಯೋಜಿಸಿದ್ದು ಶ್ಲಾಘನೀಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಆದ್ಯತೆ ನೀಡಿ ಉಚಿತ ಶಿಕ್ಷಣ, ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕಗಳು, ಕ್ಷೀರಭಾಗ್ಯ ಯೋಜನೆ, ಪೌಷ್ಟಿಕ ಆಹಾರ ವಿತರಣೆ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿವೆ. ಆದರೂ, ಪೋಷಕರು ಆಂಗ್ಲ ಮಾಧ್ಯಮ ಮತ್ತು ಖಾಸಗಿ ಶಾಲೆಗಳ ಮೇಲಿನ ಆಕರ್ಷಣೆಯಿಂದ ಅಧಿಕ ಶುಲ್ಕ ಪಾವತಿಸಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ ಎಂದು ಬಾಲಾಜಿ ಆತಂಕ ವ್ಯಕ್ತಪಡಿಸಿದರು.
Govt School – ಸ್ಥಳೀಯ ನಾಯಕರಿಂದ ಸರ್ಕಾರಿ ಶಾಲೆಗಳಿಗೆ ಮೆಚ್ಚುಗೆ
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಅಂಬರೀಶ್ ಮಾತನಾಡಿ, ನಮ್ಮ ಊರಿನ ಸರ್ಕಾರಿ ಶಾಲೆಯು ಖಾಸಗಿ ಶಾಲೆಗಿಂತ ಚೆನ್ನಾಗಿದೆ. ಇಲ್ಲಿನ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಈ ಶಾಲೆಗೆ ವಿವಿಧ ಕಾರ್ಯಕ್ರಮಗಳನ್ನು ಮಾಡಲು ಒಂದು ರಂಗಮಂದಿರ ಬೇಕಾಗಿದೆ. ಹಂಪಸಂದ್ರ ಗ್ರಾಮ ಪಂಚಾಯತಿ ವತಿಯಿಂದ ರಂಗಮಂದಿರ ನಿರ್ಮಾಣ ಮಾಡಿಕೊಡಬೇಕೆಂದು ಗ್ರಾಮ ಪಂಚಾಯತಿ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಸದಸ್ಯರಲ್ಲಿ ಮನವಿ ಮಾಡಿದರು.
ಗ್ರಾಮ ಪಮಚಾಯತಿ ಸದಸ್ಯ ಶಿವರಾಮ್ ಮಾತನಾಡಿ ನಮ್ಮ ಗ್ರಾಮ ಪಂಚಾಯತಿ ವತಿಯಿಂದ ಶಾಲೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಸಿಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
Govt School – ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳನ್ನು ನೀಡಿ ಸಂಭ್ರಮ ಹೆಚ್ಚಿಸಿದರು. ಈ ಸಂದರ್ಭದಲ್ಲಿ ಹಂಪಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ಆದಿನಾರಾಯಣಪ್ಪ, ಉಪಾಧ್ಯಕ್ಷೆ ಮುದ್ದು ಗೌರಮ್ಮ, ಸದಸ್ಯರಾದ ಗರುಡಾಚಾರ್ಲಹಳ್ಳಿ ಎಚ್. ಶಿವರಾಮ್, ಮಾಚಹಳ್ಳಿ ಗಂಗನಾರಾಯಣಪ್ಪ, ಲಕ್ಕೇನಹಳ್ಳಿ ಕೋಮಲ ರಮಣ, ಕೊಂಡರೆಡ್ಡಿಹಳ್ಳಿ ನಾಗರಾಜ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
Govt School -ಕಾರ್ಯಕ್ರಮದಲ್ಲಿ ಹಾಜರಿದ್ದ ಗಣ್ಯರು
ಈ ಸಂದರ್ಭದಲ್ಲಿ ಹಂಪಸಂದ್ರ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಮುನಿಲಕ್ಷ್ಮಮ್ಮ ಆದಿನಾರಾಯಣಪ್ಪ, ಉಪಾಧ್ಯಕ್ಷೆ ಮುದ್ದು ಗೌರಮ್ಮ, ಸದಸ್ಯರಾದ ಗರುಡಾಚಾರ್ಲಹಳ್ಳಿ ಎಚ್ ಶಿವರಾಮ್, ಮಾಚಹಳ್ಳಿ ಗಂಗನಾರಾಯಣಪ್ಪ, ಲಕ್ಕೇನಹಳ್ಳಿ ಕೋಮಲ ರಮಣ, ಕೊಂಡರೆಡ್ಡಿಹಳ್ಳಿ ನಾಗರಾಜ್, ಮುಖ್ಯಅತಿಥಿಗಳಾಗಿ ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ ಎಂ ವಿ ಶಿವಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ಮಂಜುನಾಥ, ಬಿ ಐ ಇ ಆರ್ ಟಿ ರಾಜಪ್ಪ ಆರ್, ಉಪಾಧ್ಯಕ್ಷ ಎ ಆದಿನಾರಾಯಣ, ಮುದ್ದುರಾಜು, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಜೆ ವಿ ಮುರಳಿ, ಕಾರ್ಯದರ್ಶಿ ಬಿ ಆರ್ ಪಿ ರಾಘವೇಂದ್ರ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ರೇಣುಕಾ ಸದಸ್ಯರಾದ ಶಿವಶಂಕರಪ್ಪ, ಸುಮತಿ, ನಳಿನ, ರಾಮಕೃಷ್ಣ, ಮಂಜುನಾಥ್, ರಮಣ, ಚಂದ್ರಶೇಖರ್, ಮುಖ್ಯ ಶಿಕ್ಷಕ ವಿ ಶ್ರೀರಾಮಪ್ಪ, ಸಹ ಶಿಕ್ಷಕರಾದ ಉಮಾದೇವಿ ಷಾಜೀಯ ಪರ್ವೀನ್ ಶಶಿಕಲಾ ಬಿ ಹೆಚ್, ಊರಿನ ಗಣ್ಯರು, ಹಳೇಯ ವಿದ್ಯಾರ್ಥಿಗಳು ಎಲ್ಲಾ ಮಕ್ಕಳು ಭಾಗವಹಿಸಿದ್ದರು.
1 Comment
Pingback: School : ಸರ್ಕಾರಿ ಶಾಲೆಗಳಿಗೆ ದಾನಿಗಳ ಕೊಡುಗೆ ಅಪಾರ: ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ...! - ISM Kannada News