Govt School : ಸರ್ಕಾರಿ ಶಾಲೆಗಳಿಗೆ ದಾನಿಗಳ ಕೊಡುಗೆ ಅವಶ್ಯಕ: ದಾಮೋದರ್ ರಾಜ್

Govt School : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಹಾಗೂ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಮಕ್ಕಳಿಗೆ ತುಂಬಾನೆ ಉಪಯುಕ್ತವಾಗಿದೆ. ಸರ್ಕಾರಿ ಸೌಲಭ್ಯಗಳ ಜೊತೆಗೆ ಕೆಲ ದಾನಿಗಳು ಸಹ ಶಾಲೆಗಳಿಗೆ ಕೊಡುಗೆ ನೀಡಿದರೇ ಸರ್ಕಾರಿ ಶಾಲೆಗಳು ಮತ್ತಷ್ಟು ಅಭಿವೃದ್ದಿಯಾಗಲಿದೆ ಎಂದು ಬೆಂಗಳೂರಿನ ಸಾರಥಿ ಸಂಸ್ಥೆಯ ದಾಮೋದರ್‍ ರಾಜ್ ಅಭಿಪ್ರಾಯಪಟ್ಟರು.

Govt School – ಸೌಲಭ್ಯಗಳು ಮತ್ತು ದಾನಿಗಳ ಬೆಂಬಲ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಸಾರಥಿ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ಸರ್ಕಾರಿ ಶಾಲೆಗಳ ಕುರಿತು ಕೆಲವರಿಗೆ ಅಸಮಾಧಾನವಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಓದಿದಂತಹ ಮಕ್ಕಳು ಇಂದು ದೇಶದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲ ಎಂಬಂತೆ ನುರಿತ ಹಾಗೂ ಅನುಭವಿ ಶಿಕ್ಷಕರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ದೊರೆಯಲಿದೆ. ಸರ್ಕಾರದಿಂದ ಈಗಾಗಲೇ ಅನೇಕ ಸೌಲಭ್ಯಗಳು ಮಕ್ಕಳಿಗೆ ಸಿಗುತ್ತಿದ್ದು, ಸಂಘ ಸಂಸ್ಥೆಗಳು ಅಥವಾ ದಾನಿಗಳು ಮತ್ತಷ್ಟು ಕೊಡುಗೆ ನೀಡಿದರೇ ಸರ್ಕಾರಿ ಶಾಲೆಗಳು ಮತ್ತಷ್ಟು ಅಭಿವೃದ್ದಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಯೋಚನೆ ಮಾಡಬೇಕು ಎಂದರು.

Students Receive Stationery from Donors at Beechaganahalli Govt School, Karnataka

Govt School – ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

ಬಳಿಕ ಶಿಕ್ಷಕ ರಾಮಾಂಜಿ ಮಾತನಾಡಿ, ಸರ್ಕಾರದಿಂದ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಮದ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿ ವೇತನ, ಪಠ್ಯಪುಸ್ತಕಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು. ಇದರ ಜೊತೆಗೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ದಾನಿಗಳು ಸಾಕಷ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಈ ಕೊಡುಗೆಗಳು ಮತ್ತಷ್ಟು ಹೆಚ್ಚಾಗಬೇಕು. ಶಾಲೆಗಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡುತ್ತಿರುವ ದಾನಿಗಳಿಗೆ ಮಕ್ಕಳೆಲ್ಲರೂ ಚಿರ ಋಣಿಯಾಗಿರುತ್ತಾರೆ. ಜೊತೆಗೆ ಪೋಷಕರೂ ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದರು.

Read this also : ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ, ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯಲ್ಲಿ ಲಭ್ಯ: ಕೃಷ್ಣಕುಮಾರಿ

Govt School – ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳ ವಿತರಣೆ

ಈ ವೇಳೆ ಬೀಚಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಬ್ಯಾಗ್ ಸೇರಿದಂತೆ ಲೇಖನಿ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಈ ಸಮಯದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಸಿಂಗ್, ಬೆಂಗಳೂರಿನ ಸಾರಥಿ ಸಂಸ್ಥೆ ಯ ಸುಧೀರ್‍, ಪ್ರಭಾವತಿ, ಪದ್ಮ, ಕುಮಾರ್‍, ಶರಣ್ಯ, ಟಿ.ಪ್ರಭಾವತಿ, ಸಹ ಶಿಕ್ಷಕರಾದ ರಜನಿಕಾಂತ್, ಜಿ.ವಿ.ನರಸಿಂಹಮೂರ್ತಿ, ಕಮಲ, ಅನುಶ್ರೀ, ಅಮೋಗ್, ಎಸ್.ಡಿ.ಎಂ.ಸಿ ಅಧ್ಯಕ್ಷ ರವಿ ಸೇರಿದಂತೆ ಹಲವರು ಇದ್ದರು.

Leave a Comment

Your email address will not be published. Required fields are marked *

Scroll to Top