Monday, June 2, 2025
HomeStateGovt School : ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ, ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯಲ್ಲಿ...

Govt School : ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ, ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯಲ್ಲಿ ಲಭ್ಯ: ಕೃಷ್ಣಕುಮಾರಿ

Govt School – ಅನೇಕ ಪೋಷಕರು ಖಾಸಗಿ ಶಾಲೆಗಳತ್ತ ಆಕರ್ಷಿತರಾಗಿ ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಹೊಂದಿರುವುದು ಸಾಮಾನ್ಯ. ಆದರೆ, ಸರ್ಕಾರಿ ಶಾಲೆಗಳು ಕೇವಲ ಉಚಿತ ಶಿಕ್ಷಣ ನೀಡುವುದಲ್ಲದೆ, ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡುತ್ತವೆ ಎಂದು ಬಿಇಒ ಕೃಷ್ಣಕುಮಾರಿ ಅವರು ಪೋಷಕರಿಗೆ ಮನವಿ ಮಾಡಿದ್ದಾರೆ. ನಿಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.

Students receiving textbooks and uniforms at PM Shri Govt School, Gudibande

Govt School – ಸರ್ಕಾರಿ ಸೌಲಭ್ಯಗಳ ಜೊತೆಗೆ ಗುಣಮಟ್ಟದ ಶಿಕ್ಷಣ ಲಭ್ಯ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಪಿಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿಗಳ ಪ್ರಾರಂಬೋತ್ಸವ, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ಇಂದು ಅನೇಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹದ ಕಾರಣ ಸರ್ಕಾರಿ ಶಾಲೆಗಳ ಕುರಿತು ಕೀಳರಿಮೆಯನ್ನು ಹೊಂದಿರುತ್ತಾರೆ. ಆದರೆ ಅದು ತಪ್ಪು. ಸರ್ಕಾರಿ ಶಾಲೆಗಳಲ್ಲಿ ನುರಿತ ಹಾಗೂ ಅನುಭವಿ ಶಿಕ್ಷಕರು ಬೋದನೆ ಮಾಡುತ್ತಾರೆ. ಗುಣಮಟ್ಟದ ಶಿಕ್ಷಣ ಕೊಡುತ್ತಾರೆ. ಎಲ್ಲರೂ ಸರ್ಕಾರದ ನಿಯಮಗಳಂತೆ ನೇಮಕಗೊಂಡ ಶಿಕ್ಷಕರಾಗಿರುತ್ತಾರೆ. ಇದರ ಜೊತೆಗೆ ಸರ್ಕಾರಿ ಸೌಲಭ್ಯಗಳಾದ ಬಿಸಿಯೂಟ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಅವಿರಥವಾಗಿ ಶ್ರಮಿಸುತ್ತಿದೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುವುದರ ಬದಲಿಗೆ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡಿ ಎಂದು ಸಲಹೆ ನೀಡಿದರು.

Govt School – ಶಾಲೆಯ ಅಭಿವೃದ್ದಿಗೆ ಸಹಕಾರ

ಬಳಿಕ ಪಪಂ ನಾಮಿನಿ ಸದಸ್ಯ ಅಂಬರೀಶ್ ಮಾತನಾಡಿ, ಈ ಹಿಂದೆ ನಾವು ಓದುವ ಸಮಯದಲ್ಲಿ ಅಷ್ಟೊಂದು ಸೌಲಭ್ಯಗಳು ಇರಲಿಲ್ಲ. ಆದರೂ ಸಹ ನಾವೆಲ್ಲರೂ ಸರ್ಕಾರಿ ಶಾಲೆಗಳಲ್ಲಿಯೇ ಓದಿದ್ದೇವೆ. ಇಂದು ಯಾವುದೇ ಫಲಿತಾಂಶವಿರಲಿ ಅದರಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಿರೋದು ಸರ್ಕಾರಿ ಶಾಲೆಯ ಮಕ್ಕಳು ಎಂದರೇ ತಪ್ಪಾಗಲ್ಲ. ಇದೀಗ ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸೌಲಭ್ಯಗಳು ಸಿಗುತ್ತಿವೆ. ಅವುಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು. ಇದೀಗ ಈ ಶಾಲೆ ಪಿಎಂಶ್ರೀ ಶಾಲೆಯಾಗಿ ಉನ್ನತೀಕರಣಗೊಂಡಿದ್ದು, ಮತ್ತಷ್ಟು ಸೌಲಭ್ಯಗಳು ಮಕ್ಕಳಿಗೆ ಸಿಗಲಿದೆ. ಶಾಲೆಯ ಅಭಿವೃದ್ದಿಗೆ ನಮ್ಮ ಸಹಕಾರ ಸದಾ ಇರುತ್ತದೆ ಎಂದರು.

Students receiving textbooks and uniforms at PM Shri Govt School, Gudibande

Read this also : ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯ : ತಾ.ಪಂ ಇಒ ನಾಗಮಣಿ

Govt School – ಗುಲಾಬಿ ಹೂ ಕೊಟ್ಟು ವಿದ್ಯಾರ್ಥಿಗಳಿಗೆ ಸ್ವಾಗತ

ಇದೇ ಸಮಯದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎಂ.ಶಂಕರ್‍ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗರಾಜು ಮಾತನಾಡಿದರು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಗುಲಾಬಿ ಹಾಗೂ ಸಿಹಿ ನೀಡುವ ಮೂಲಕ ಆಹ್ವಾನಿಸಿದರು. ಈ ವೇಳೆ ಶಿಕ್ಷಣ ಇಲಾಖೆಯ ಇಸಿಒಗಳಾದ ರಘು, ನಂಜುಂಡಪ್ಪ, ಟಿಪಿಒ ಮುರಳಿ, ಸ್ಥಳೀಯ ಮುಖಂಡ ಬುಲೆಟ್ ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular