Gruha Lakshmi Scheme : ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಬಿಗ್ ಅಪ್‌ಡೇಟ್…!

Gruha Lakshmi Scheme – ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಗೃಹ ಲಕ್ಷ್ಮಿ ಯೋಜನೆ ಇಂದಿಗೂ ಸಾವಿರಾರು ಕುಟುಂಬಗಳಿಗೆ ಆಸರೆಯಾಗಿದೆ. ಅನೇಕರು ಇದೇ ಹಣದಿಂದ ತಮ್ಮ ಜೀವನವನ್ನು ಕಟ್ಟಿಕೊಳ್ಳುತ್ತಿದ್ದಾರೆ. ಆದರೆ, ಕಳೆದ ಕೆಲವು ತಿಂಗಳಿಂದ ಗೃಹ ಲಕ್ಷ್ಮಿ ಹಣ ಖಾತೆಗೆ ಜಮಾ ಆಗಿಲ್ಲ ಎಂಬ ದೂರುಗಳು ಕೇಳಿಬಂದಿದ್ದವು. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಮಹತ್ವದ ಮಾಹಿತಿ ನೀಡಿದ್ದಾರೆ.

Minister Lakshmi Hebbalkar shares update on Gruha Lakshmi Scheme payment delay

Gruha Lakshmi Scheme – ಗೃಹ ಲಕ್ಷ್ಮಿ ಹಣ ಪಾವತಿ ವಿಳಂಬಕ್ಕೆ ಕಾರಣವೇನು?

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರಕಾರ, ಮಾರ್ಚ್ ತಿಂಗಳ ಹಣ ಪಾವತಿಗೆ ವರ್ಷಾಂತ್ಯದ (year-end) ಲೆಕ್ಕಪತ್ರದ ತಾಂತ್ರಿಕ ಕಾರಣಗಳಿಂದಾಗಿ ಸ್ವಲ್ಪ ವಿಳಂಬವಾಗಿದೆ. ಆದರೆ, ಏಪ್ರಿಲ್ ತಿಂಗಳ ಹಣದ ಬಿಲ್ಲಿಂಗ್ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ.

“ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ, ಏಪ್ರಿಲ್ ಹಣ ಇಷ್ಟರಲ್ಲೇ ಜಮಾ ಆಗಲಿದೆ,” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದುವರೆಗೆ ಗೃಹ ಲಕ್ಷ್ಮಿ ಯೋಜನೆಯ 19 ಕಂತುಗಳನ್ನು ಯಶಸ್ವಿಯಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು, ಶೀಘ್ರದಲ್ಲೇ 20ನೇ ಕಂತು ಕೂಡ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Gruha Lakshmi Scheme – ಸರ್ಕಾರಕ್ಕೆ 2 ವರ್ಷ: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು?

ಸಂಪುಟ ವಿಸ್ತರಣೆ ಮತ್ತು ಮುಖ್ಯಮಂತ್ರಿ ಬದಲಾವಣೆಯ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ನಮ್ಮ ಪಕ್ಷಕ್ಕೆ ಹೈಕಮಾಂಡ್ ಇದೆ. ಅವರು ಎಲ್ಲ ಶಾಸಕರ ಅಭಿಪ್ರಾಯ ಪಡೆದು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧಳಾಗಿ ನಡೆದುಕೊಳ್ಳುವವಳು, ಶಿಸ್ತು ಪಾಲಿಸುವವಳು. ಈ ಪ್ರಶ್ನೆಗಳಿಗೆ ನನ್ನಲ್ಲಿ ಉತ್ತರವಿಲ್ಲ,” ಎಂದು ಸ್ಪಷ್ಟಪಡಿಸಿದರು.

Minister Lakshmi Hebbalkar shares update on Gruha Lakshmi Scheme payment delay

Read this also : ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ ಸೊಸೆಯನ್ನು ಮನಸಾರೆ ಶ್ಲಾಘಿಸಿದ ಸಿಎಂ ಅಂಡ್ ಡಿಸಿಎಂ….!

ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ ಸಂದರ್ಭದಲ್ಲಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಜನರ ಜೀವನದಲ್ಲಿ ಒಳ್ಳೆಯದಾಗಲಿ, ಜನರಿಗೆ ಅನುಕೂಲವಾಗಲಿ ಎನ್ನುವ ನೀತಿ, ಸಿದ್ದಾಂತದಿಂದ ಆಡಳಿತ ನಡೆಸುತ್ತಿದೆ. ನಾವು ಚುನಾವಣೆಗೆ ಮುನ್ನ ನೀಡಿದ ಎಲ್ಲ ವಾಗ್ದಾನಗಳನ್ನೂ ಈಡೇರಿಸಿದ್ದೇವೆ. ಹಾಗಾಗಿ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ಭರವಸೆ ಇದೆ,” ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *

Scroll to Top