Wednesday, January 28, 2026
HomeStateFarmers Day : ರೈತರ ಬದುಕು ಹಸನು ಮಾಡಲು ಸರ್ಕಾರದ ನೆರವು ಅನಿವಾರ್ಯ : ಕೃಷಿಕ...

Farmers Day : ರೈತರ ಬದುಕು ಹಸನು ಮಾಡಲು ಸರ್ಕಾರದ ನೆರವು ಅನಿವಾರ್ಯ : ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥ್

ದೇಶಕ್ಕೆ ಅನ್ನ ನೀಡುವಂತಹ ರೈತ ಇದೀಗ ತುಂಬಾ ಸಂಕಷ್ಟದಲ್ಲಿದ್ದಾನೆ, ತಾನು ಬೆಳೆದ ಬೆಳೆಗೆ ಬೆಲೆ ಸಿಗದೆ ಸಾಲದ ಸಂಕೋಲೆಗೆ ಸಿಲುಕುತ್ತಿದ್ದಾನೆ. ಈ ನಿಟ್ಟಿನಲ್ಲಿ ರೈತರ ಬದುಕನ್ನು ಹಸನು ಮಾಡುವಂತಹ ಕೆಲಸ ಸರ್ಕಾರಗಳು ಮಾಡಬೇಕಿದೆ ಎಂದು ಕೃಷಿಕ ಸಮಾಜದ ಗುಡಿಬಂಡೆ ತಾಲೂಕು ಅಧ್ಯಕ್ಷ ಹೆಚ್.ಎನ್.ಮಂಜುನಾಥ್ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ (Farmers Day) ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

Farmers Day celebration organized by the Agriculture Department at Gajananya Kalyana Mantapa in Gudibande town

Farmers Day – ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಲಿ

ಇಂದು ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಒಬ್ಬ ರೈತ ಏನೆ ಸಮಸ್ಯೆ ಬಂದರೂ ಕೃಷಿಯನ್ನು ಮಾತ್ರ ಬಿಡುವುದಿಲ್ಲ. ಲಾಭ ಬರಲಿ, ನಷ್ಟ ಬರಲಿ ಕೃಷಿ ಚಟುವಟಿಕೆಯನ್ನು ಮಾತ್ರ ಬಿಡುವುದಿಲ್ಲ. ಇಂದು ರೈತ ತುಂಬಾ ಸಂಕಷ್ಟದಲ್ಲಿದ್ದಾನೆ. ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನು ಬೆಳೆ ಚೆನ್ನಾಗಿ ಬಂದರೇ ಬೆಲೆ ಸಿಗುವುದಿಲ್ಲ, ಬೆಲೆ ಇದ್ದಾಗ ಇಳುವರಿ ಸಿಗುವುದಿಲ್ಲ. ಅದರ ಜೊತೆಗೆ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಕಾಟ. ಇದರಿಂದ ರೈತ ಸಂಕಷ್ಟಕ್ಕೆ ಸಿಲುಕುತ್ತಿದ್ದಾನೆ. ಸರ್ಕಾರಗಳು ರೈತರ ಸಮಸ್ಯೆಗಳನ್ನು ಸ್ಪಂಧಿಸಿ, ರೈತರನ್ನು ಸಂಕಷ್ಟಗಳಿಂದ ಪಾರು ಮಾಡುವಂತಹ ಕೆಲಸ ಮಾಡಬೇಕಿದೆ ಎಂದರು.

ರಾಸಾಯನಿಕ ಮುಕ್ತ ಕೃಷಿಗೆ ಒತ್ತು ನೀಡಿ

ಇದೇ ಸಮಯದಲ್ಲಿ (Farmers Day) ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೆಚ್.ಪಿ.ರಾಮನಾಥರೆಡ್ಡಿ ಮಾತನಾಡಿ, ಇಂದಿನ ಸರ್ಕಾರಗಳು ಹೆಚ್ಚು ಹೆಚ್ಚು ರಸಗೊಬ್ಬರಗಳನ್ನು ಬಳಸಿ ಹೆಚ್ಚು ಉತ್ಪಾದನೆ ಮಾಡಲು ರೈತರನ್ನು ಪರೋಕ್ಷವಾಗಿ ಉತ್ತೇಜನ ಮಾಡುತ್ತಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಭೂಮಿಯ ಫಲವತ್ತತೆ ನಾಶವಾಗಿ ಭೂಮಿ ಬರಡಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ರೈತರಿಗೆ ಸಾವಯವ ಗೊಬ್ಬರಗಳನ್ನು ಬಳಸಲು ಸರ್ಕಾರಗಳು ಉತ್ತೇಜನ ನೀಡಬೇಕಿದೆ ಎಂದರು.

Read this also : ಕರುವಿನೊಂದಿಗೆ ವಾಕಿಂಗ್ ಹೊರಟ ಯುವಕ; ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ವೀಕ್ಷಣೆ ಪಡೆದ ದೃಶ್ಯ…!

ಕಾರ್ಯಕ್ರಮದಲ್ಲಿ ತಾಪಂ ಇಒ ನಾಗಮಣಿ ಮಾತನಾಡಿ, (Farmers Day) ರೈತರು ಅಧಿಕ ಇಳುವರಿ ಪಡೆಯಬೇಕೆಂಬ ಉದ್ದೇಶದಿಂದ ಹೆಚ್ಚು ರಾಸಾಯನಿಕ ಗೊಬ್ಬರಗಳನ್ನು ಬಳಸುತ್ತಿದ್ದಾರೆ. ಇದರಿಂದ ವಿಷಪೂರಿತವಾದ ಆಹಾರ ಉತ್ಪಾದನೆಯಾಗುತ್ತಿದೆ. ಇದರಿಂದ ಎಲ್ಲರಿಗೂ ಅಪಾಯವಾಗಲಿದೆ. ಜೊತೆಗೆ ಭೂಮಿ ಸಹ ಬರಡಾಗುತ್ತದೆ. ಈ ಕುರಿತು ರೈತರು ಎಚ್ಚರಿಕೆ ವಹಿಸಬೇಕು ಎಂದರು.

Farmers Day celebration organized by the Agriculture Department at Gajananya Kalyana Mantapa in Gudibande town

ಸಾಧಕ ರೈತರಿಗೆ ಸನ್ಮಾನದ

ಈ ವೇಳೆ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಮುಖಂಡ ಕೃಷ್ಣೇಗೌಡ ಸೇರಿದಂತೆ ಹಲವರು (Farmers Day) ಮಾತನಾಡಿದರು. ತಾಲೂಕಿನಲ್ಲಿ ಪ್ರಮುಖ ಆದಾಯದ ಮೂಲಗಳಾಗಿರುವ ರೇಷ್ಮೆ, ತೋಟಗಾರಿಕೆ, ಪಶುಪಾಲನೆ ಹಾಗೂ ಮೀನುಗಾರಿಕೆ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಪ್ರಗತಿಪರ ರೈತರನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಈ ಸಮಯದಲ್ಲಿ ಪಪಂ ಅಧ್ಯಕ್ಷ ವಿಕಾಸ್, ಉಪಾಧ್ಯಕ್ಷ ಗಂಗರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೇಶವರೆಡ್ಡಿ, ಕೃಷಿಕ ಸಮಾಜದ ಪದಾಧಿಕಾರಿಗಳು, ರೈತ ಮುಖಂಡರು, ಕೃಷಿ ಇಲಾಖೆಯ ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.

by ISM Kannada News Deskhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular