SSLC Results – ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.52.54 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಕಳೆದ ವರ್ಷ ಶೇ. 59.24 ರಷ್ಟು ಫಲಿತಾಂಶ ಪಡೆದುಕೊಂಡಿತ್ತು. ಈ ಬಾರಿ ಒಟ್ಟು 649 ಮಂದಿ ಪರೀಕ್ಷೆಯನ್ನು ಬರೆದಿದ್ದು, 341 ಮಂದಿ ಉತ್ತೀರ್ಣರಾಗಿದ್ದಾರೆ. ಜೆಪಿ ನಗರ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎಸ್. ಶ್ರಿಯ 610 ಅಂಕಗಳನ್ನು ಪಡೆದುಕೊಂಡು ತಾಲೂಕಿನ ಟಾಪರ್ ಆಗಿದ್ದಾರೆ.
SSLC Results – ತಾಲೂಕಿನ ಒಟ್ಟಾರೆ ಫಲಿತಾಂಶ
ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ 12 ಸರ್ಕಾರಿ, 2 ವಸತಿ ಶಾಲೆ ಹಾಗೂ ಒಂದು ಅನುದಾನಿತ ಪ್ರೌಢಶಾಲೆ ಸೇರಿ ಒಟ್ಟು 15 ಶಾಲೆಗಳಿದ್ದು, ಒಟ್ಟು 649 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದರು. ಈ ಪೈಕಿ 341 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಸಾಲಿನಲ್ಲಿ ಮಾಚಹಳ್ಳಿ ಪ್ರೌಢಶಾಲೆ ಶೇ100 ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ. ಈ ಶಾಲೆಯಲ್ಲಿ ಒಟ್ಟು 11 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಎರಡನೇ ಸ್ಥಾನದಲ್ಲಿ ಜೆ.ಪಿ. ನಗರದ ಆದರ್ಶ ವಿದ್ಯಾಲಯ ಪಡೆದುಕೊಂಡಿದ್ದು, 72 ವಿದ್ಯಾರ್ಥಿಗಳ ಪೈಕಿ 66 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯು ಮೂರನೇ ಸ್ಥಾನ ಪಡೆದುಕೊಂಡಿದ್ದು, 49 ವಿದ್ಯಾರ್ಥಿಗಳ ಪೈಕಿ 42 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊನೆಯ ಸ್ಥಾನವನ್ನು ಚೆಂಡೂರು ಸರ್ಕಾರಿ ಪ್ರೌಢಶಾಲೆ ಪಡೆದುಕೊಂಡಿದ್ದು, 17 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಕೇವಲ 2 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. Read this also :SSLC ಫಲಿತಾಂಶ 2025: ಯಾವ ಜಿಲ್ಲೆ ಮೊದಲ ಸ್ಥಾನದಲ್ಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…!
SSLC Results – ತಾಲೂಕಿನ ಟಾಪರ್ಸ್ ಗಳು
ಇನ್ನೂ ಗುಡಿಬಂಡೆ ತಾಲೂಕಿನ ಜೆಪಿ ನಗರ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎಸ್. ಶ್ರಿಯ 610 ಅಂಕಗಳನ್ನು ಪಡೆದುಕೊಂಡು ತಾಲೂಕಿಗೆ ಪ್ರಥಮ ಸ್ಥಾನವನ್ನು, ಗುಡಿಬಂಡೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಹೆಚ್.ವಿ. ವರುಣ್ 604 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ಜೆಪಿ ನಗರ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಪಿ.ಆರ್.ಕೀರ್ತನ 594 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.