ತನ್ನ ಮೇಲಿನ ಅತ್ಯಾಚಾರವನ್ನು ವಿರೋಧಿಸಿದ ಆರು ವರ್ಷದ ಬಾಲಕಿಯನ್ನು ಕೊಲೆ ಮಾಡಿದ (Gujarat News) ಘಟನೆಯೊಂದು ನಡೆದಿದೆ. ಗುಜರಾತ್ ನ ದಾಹೋದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 1ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯದ ಪ್ರಯತ್ನವನ್ನು ವಿರೋಧಿಸಿದಕ್ಕೆ ಪುಟ್ಟ ಕಂದಮ್ಮನ್ನು ಶಾಲೆಯ ಪ್ರಾಂಶುಪಾಲ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ಮಾಡಿದ ಬಳಿಕ ಬಾಲಕಿಯ ಮೃತದೇಹವನ್ನು ಶಾಲೆಯ ಕಾಂಪೌಂಡ್ ನಲ್ಲಿಯೇ ಎಸೆದಿದ್ದಾನೆ. ಆಕೆಯ ಬ್ಯಾಗ್ ಹಾಗೂ ಶೂ ಗಳನ್ನು ತರಗತಿಯ ಬಳಿ ಎಸೆದಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ ನ ದಾಹೋದ್ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಶಾಲೆಯ ಪ್ರಾಂಶುಪಾಲ ಗೋವಿಂದ್ ನಟ್ (55) ಎಂದು ಗುರ್ತಿಸಲಾಗಿದೆ. ಈ ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿ ರಾಜದೀಪ್ ಸಿಂಗ್ ಝಾಲಾ ಮಾಹಿತಿ ನೀಡಿದ್ದಾರೆ. ಆರು ವರ್ಷದ ಬಾಲಕಿಯ ಮೃತದೇಹ ಕಳೆದ ಗುರುವಾರ ಸಂಜೆ ಶಾಲೆಯ ಆವರಣದಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, 10 ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ಬಾಲಕಿ ಪ್ರತಿನಿತ್ಯ ಪ್ರಾಂಶುಪಾಲ ಗೋವಿದ್ ಜೊತೆಗೆ ಶಾಲೆಗೆ ಹೋಗುತ್ತಿದ್ದಳು ಎಂದು ಮೃತ ಬಾಲಕಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದ ಬಳಿಕ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಕುರಿತು ಪ್ರಾಂಶುಪಾಲರು ಬಾಲಕಿಯನ್ನು ಶಾಲೆಗೆ ಬಿಟ್ಟು ಬೇರೆ ಕೆಲಸಕ್ಕೆ ತೆರಳಿರುವುದಾಗಿ ತಿಳಿಸಿದ್ದರು. ಆದರೆ ಈ ಮಾತು ಕೇಳಿದ ಪೊಲೀಸರಿಗೆ ಅನುಮಾನ ಉಂಟಾಗಿದೆ. ಬಳಿಕ ಗೋವಿಂದ್ ನಟ್ ರವರ ಪೋನ್ ಸ್ಥಳದ ವಿವರಗಳನ್ನು ಪರಿಶೀಲನೆ ನಡೆಸಿದಾಗ, ಆ ದಿನ ಆತ ತಡವಾಗಿ ಶಾಲೆಗೆ ಬಂದಿರುವುದು ಕಂಡುಬಂದಿದೆ. ಬಳಿಕ ಆತನನ್ನು ಪೊಲೀಸ್ ಶೈಲಿಯಲ್ಲಿ ತನಿಖೆ ನಡೆಸಿದಾಗ ತಾನು ಎಸಗಿದ ಪಾಪ ಕೃತ್ಯದ ಬಗ್ಗೆ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇನ್ನೂ ಈ ಪ್ರಕರಣದ ಸಂಬಂಧ ಆರೋಪಿ ಗೋವಿಂದ ನಟ್ ವಿರುದ್ದ ಭಾರತೀಯ ನ್ಯಾಯ ಸಂಹಿತೆ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.