Air Hostess – ಗುರುಗ್ರಾಮದ ಖಾಸಗಿ ಆಸ್ಪತ್ರೆಯೊಂದರಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿಯ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ ನಡೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೋಗಿಯ ಆರೋಗ್ಯವನ್ನು ಕಾಪಾಡಬೇಕಾದ ಸಿಬ್ಬಂದಿಯೇ ಈ ಕೃತ್ಯಕ್ಕೆ ಒಳಗಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಗಳನ್ನು ಬಂಧಿಸಿ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹ ವ್ಯಕ್ತವಾಗುತ್ತಿದೆ.
Air Hostess – ಘಟನೆಯ ಹಿನ್ನೆಲೆ
ಗಗನಸಖಿಯೊಬ್ಬರು ವಿಮಾನಯಾನ ತರಬೇತಿಗಾಗಿ ಗುರುಗ್ರಾಮಕ್ಕೆ ಆಗಮಿಸಿದ್ದರು. ತಾವು ತಂಗಿದ್ದ ಹೋಟೆಲ್‌ನ ಈಜುಕೊಳದಲ್ಲಿ ಈಜುವಾಗ ದುರಂತವೊಂದರಿಂದ ಮುಳುಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ತಕ್ಷಣವೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಏಪ್ರಿಲ್ 6 ರಂದು ಆಕೆಯ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದರಿಂದ, ಆಕೆಯ ಪತಿ ಆಕೆಯನ್ನು ಸದರ್ ಪ್ರದೇಶದ ಮತ್ತೊಂದು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಿದರು. ಇಲ್ಲಿ ಆಕೆಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

Air Hostess – ಲೈಂಗಿಕ ದೌರ್ಜನ್ಯದ ಆರೋಪ
ಗಗನಸಖಿಯ ಪ್ರಕಾರ, ತಾವು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮತ್ತು ವೆಂಟಿಲೇಟರ್‌ನ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ, ಆಸ್ಪತ್ರೆ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. “ನಾನು ಎಚ್ಚರಗೊಂಡಾಗಲೂ ಕೂಗಲು ಅಥವಾ ಓಡಿಹೋಗಲು ಸಾಧ್ಯವಾಗಲಿಲ್ಲ. ಆ ಕ್ಷಣ ಭೀಕರವಾಗಿತ್ತು,” ಎಂದು ಆಕೆ ತನ್ನ ನೋವಿನ ಅನುಭವವನ್ನು ಹಂಚಿಕೊಂಡಿದ್ದಾರೆ.
Read this also : Mumbai – ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬಾಲಕಿಯನ್ನು ರೈಲ್ವೆ ನಿಲ್ದಾಣದಲ್ಲಿ ಎಸೆದು ಹೋದ ಕ್ರೂರಿಗಳು…!
Air Hostess – ದೂರು ದಾಖಲು ಮತ್ತು ಕಾನೂನು ಕ್ರಮ
ಏಪ್ರಿಲ್ 13 ರಂದು ಸಂತ್ರಸ್ತೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮನೆಗೆ ಹಿಂತಿರುಗಿದ ನಂತರ, ಅವರು ತಮ್ಮ ಪತಿಗೆ ತಮಗಾದ ಆಘಾತಕಾರಿ ಅನುಭವದ ಬಗ್ಗೆ ತಿಳಿಸಿದರು. ತಕ್ಷಣವೇ ಅವರು ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಮಾಡಿ ವಿಷಯವನ್ನು ತಿಳಿಸಿದರು. ನಂತರ, ದಂಪತಿಗಳು ತಮ್ಮ ವಕೀಲರ ಸಲಹೆಯ ಮೇರೆಗೆ ಸದರ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದರು. ದೂರಿನ ಆಧಾರದ ಮೇಲೆ, ಗುರುಗ್ರಾಮ ಪೊಲೀಸರು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವಕ್ತಾರರು, ಎಫ್‌ಐಆರ್ ದಾಖಲಾಗಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
Air Hostess – ಸಾರ್ವಜನಿಕ ಆಕ್ರೋಶ
ಈ ಘಟನೆಯಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆಯ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಂದ ಇಂತಹ ಕೃತ್ಯಗಳು ಸಮಾಜದಲ್ಲಿ ಭಯ ಮತ್ತು ಅಪನಂಬಿಕೆಯನ್ನು ಹುಟ್ಟಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯ ಒತ್ತಾಯ ಕೇಳಿಬರುತ್ತಿದೆ. ಇನ್ನೂ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಣೆ ಮಾಡಲಾಗುತ್ತಿದೆ ಮತ್ತು ಆಸ್ಪತ್ರೆ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.