ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ಎಲ್ಲಿದ್ದರೂ ಕೂಡಲೇ ಸ್ವದೇಶಕ್ಕೆ ಬಾ ಎಂದು ಪ್ರಜ್ವಲ್ ಗೆ ಸೂಚನೆ ಕೊಟ್ಟ HD ದೇವೇಗೌಡ…!

ರಾಷ್ಟ್ರದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಪ್ರಜ್ವಲ್ ರೇವಣ್ಣಗೆ ಸೂಚನೆ ನೀಡಿದ್ದಾರೆ. ನೀನು ಎಲ್ಲಿಯೇ ಇದ್ದರೂ ಕೂಡಲೇ ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು, ಈ ಎಚ್ಚರಿಕೆಗೆ ತಲೆಬಾಗದೇ ಇದ್ದಲ್ಲಿ, ಮುಂದೆ ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ, ನನ್ನ ಮೇಲೆ ಏನಾದರೂ ಗೌರವ ಇದ್ದರೇ ಅವನು ಬದುಕಿ ಬರಬೇಕು ಎಂದು ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಎಚ್ಚರಿಕೆ ಪತ್ರವೊಂದನ್ನು ಬರೆದಿದ್ದು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.

HD Devegowda warns to Prajwal 1

ದೇವೆಗೌಡರು ಬರೆದ ಪತ್ರದಲ್ಲಿರುವಂತೆ – ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ.  ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

HD Devegowda warns to Prajwal 2

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ. ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಏಕಾಂಗಿಯಾಗುವುದರಲ್ಲಿ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Leave a Comment

Your email address will not be published. Required fields are marked *

Scroll to Top
WordPress Lab Ankara Escort: Çankaya Escort, Mamak Escort, Polatlı Escort İstanbul Escort: Avcılar Escort, Beylikdüzü Escort, Esenyurt Escort Bursa Escort: İznik Escort, Büyükorhan Escort, İnegöl Escort ರಾಜ್ಯ ಮಟ್ಟದ ಪ್ರವಾಸೋದ್ಯಮದತ್ತ ಗುಡಿಬಂಡೆ, ಚಲನಚಿತ್ರೊದ್ಯಮವೇ ಚಿತ್ರೀಕರಣಕ್ಕಾಗಿ ಇಲ್ಲಿದೆ ಐತಿಹಾಸಿಕ ಪ್ರಾಕೃತಿಕ ತಾಣಗಳು ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಕುಟುಂಬದ ಹೆಸರು ತರೋದು ಏಕೆ ಎಂದ ಹೆಚ್.ಡಿ.ಕೆ….! ರಾಮಾಯಣದಲ್ಲಿ ಸೀತೆಯ ಪಾತ್ರದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿಪಲ್ಲವಿ, ಬಾಯ್ ಕಟ್ ಸಾಯಿಪಲ್ಲವಿ ಎಂದ ನೆಟ್ಟಿಗರು, ಯಾಕೆ ಗೊತ್ತಾ? Video Reviews Pro – Video Widget WordPress Plugin AI Bundle: WordPress AI Writer, Chatbot, Image Generator, Text-to-Speech, OpenAI, Stable Diffusion Smart SMS & Email Manager (SSEM) Inilabs School Express : School Management System W8 Contact Form – WordPress Contact Form Plugin Karenderia Multiple Restaurant System Page Builder by AZEXO Maildoll – Email Marketing Application – A SAAS Based Email Marketing Software PhotoCluster 1.8 | Gallery Module for Gmedia plugin Vespia – Creative Coming Soon WordPress Plugin