ಬಾಗೇಪಲ್ಲಿ: ಸರ್ಕಾರಿ ಶಾಲೆ ಮಕ್ಕಳು ಇತರೆ ಶಾಲೆ ಮಕ್ಕಳಂತೆ ಕಲಿಯಲು ಪೂರಕವಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಸರ್ಕಾರ (Govt schemes) ಕಲ್ಪಿಸಿದ್ದು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಪಿ.ಎಂ.ಶ್ರೀ ಶಾಲೆಯ ಮುಖ್ಯ ಶಿಕ್ಷಕ ಆರ್.ಹನುಮಂತರೆಡ್ಡಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಪಟ್ಟಣದ ಪಿ.ಎಂ.ಶ್ರೀ ಶಾಲೆಯಲ್ಲಿ ಆಯೋಜಿಸಲಾಗಿದ್ದ 2024-25ನೇ ಸಾಲಿನ 461 ಶಾಲಾ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಣೆ ಮಾಡಿ ಮಾತನಾಡಿ, (Govt schemes) ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಯಾವುದೇ ರೀತಿಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಸಮವಸ್ತ್ರ, ಶೂ, ಬಿಸಿಯೂಟ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರದ ಈ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಎಸ್.ಎಂ.ಸಿ. ಅಧ್ಯಕ್ಷೆ ಉಷಾ, ಸದಸ್ಯರಾದ ಭಾರತಿ, ನರಸಿಂಹಪ್ಪ, ಶಿಕ್ಷಕರಾದ ವೈ.ಎ.ಮಂಜುನಾಥ್‍ರೆಡ್ಡಿ, ಧರ್ಮಪುತ್ರಿ, ಪ್ರಭಾವತಿ, ಯೋಗ ಗುರು ಟಿ.ರಘುನಾಥರೆಡ್ಡಿ ಮತ್ತಿತರರು ಇದ್ದರು.