ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಳಕೆದಾರರು ಸಂಖ್ಯೆ ಏರುತ್ತಲೇ ಇದೇ, ಅರ್ಹರ ಜತೆಗೆ ಅನರ್ಹರೂ ಸಹ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆಯೊಂದನ್ನು ನೀಡಿದ್ದಾರೆ. ಅನರ್ಹರಿಗೆ ನೀಡಿದ ಕಾರ್ಡ್‌ಗಳನ್ನು ರದ್ದು ಮಾಡಿ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು (BPL Ration Card) ವಿತರಣೆ ಮಾಡಲು ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್‌ಗಳನ್ನು ಹೋಂದಿದ್ದಾರೆ. ಈ ಪೈಕಿ ಕೆಲವರು ಅನರ್ಹರಾಗಿದ್ದರೂ ಸಹ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಶೇ.80 ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ನೀತಿ ಆಯೋಗದಂತೆ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ತರಬೇಕು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ನಿಯಮ ಮೀರಿ ಪಡೆದ ಕಾರ್ಡ್‌ಗಳನ್ನು ಡಿಲೀಟ್ ಮಾಡಲು ತಿಳಿಸಿದ್ದು, ಅದರಂತೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ವೈಟ್ ಬೋರ್ಡ್ ಕಾರು ಹೊಂದಿರುವವರು, ಸ್ವಂತ ಕೃಷಿ ಉಪಕರಣಗಳನ್ನು ಹೊಂದಿರುವವರು ಅಂದರೇ ಟ್ರಾಕ್ಟರ್ ಟಿಲ್ಲರ್ ಹೊಂದಿವರರು, ಸ್ವಂತ ಜಮೀನು, ಹಲವು ಪ್ಲಾಟ್ ಹೊಂದಿರುವಂತಹವರ ಮೇಲೆ ಅಧಿಕಾರಿಗಳು ಕಣ್ಣಿಡಲಿದ್ದಾರಂತೆ. ಪ್ರತಿ ಮೂರು ತಿಂಗಳಿಗೊಮ್ಮೆ ಆಹಾರ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಅನರ್ಹರ ಹೆಸರನ್ನು ಬಿಪಿಎಲ್ ಕಾರ್ಡ್‌ನಿಂದ ಡಿಲೀಟ್ ಮಾಡುತ್ತಾರೆ. ಬಿಪಿಎಲ್ ಕಾರ್ಡ್ ರದ್ದಾಗುವುದರಿಂದ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಸಹ ಕಳೆದುಕೊಳ್ಳಬಹುದಾಗಿದೆ.
ಇನ್ನೂ ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್ ಬಳಕೆದಾರರಿದ್ದಾರೆ. ಈ ಪೈಕಿ ಆದ್ಯತಾ, ಅಂತ್ಯೋದಯ ಹಾಗೂ ಅಣ್ಣಪೂರ್ಣ ಕಾರ್ಡ್ ಸಹ ಇದೆ. ಒಟ್ಟು 4.26 ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ಪ್ರತಿ ಮಾಹೆ 5 kg ಅಕ್ಕಿ, 5 ಕೆಜಿ ಅಕ್ಕಿ ಬದಲಾಗಿ ಹಣ ಪಡೆಯುತ್ತಿದ್ದಾರೆ. ಈ ಪೈಕಿ 21 ಲಕ್ಷ ಕಾರ್ಡ್‌ದಾರರಿಗೆ ಅನ್ನಭಾಗ್ಯ ಸಿಗುತ್ತಿಲ್ಲ. ಆಧಾರ್, ಕೆವೈಸಿ, ಬ್ಯಾಂಕ್ ಸೀಡಿಂಗ್, ನೇಮ್ ಮ್ಯಾಚಿಂಗ್ ಮೊದಲಾದ ಸಮಸ್ಯೆಗಳಿಂದ ಅನ್ನಭಾಗ್ಯ ಸೌಲಭ್ಯವನ್ನು ಕಳೆದುಕೊಂಡಿದ್ದಾರೆ. ಇನ್ನೂ ಅರ್ನಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.