HomeStateಜೈಲಿನಿಂದ ಬಂದ ಬಳಿಕ ಹೆಚ್.ಡಿ ರೇವಣ್ಣ ಫಸ್ಟ್ ರಿಯಾಕ್ಷನ್: ನನಗೆ ದೇವರ ಮೇಲೆ ನಂಬಿಕೆಯಿದೆ, ಆಪಾದನೆಯಿಂದ...

ಜೈಲಿನಿಂದ ಬಂದ ಬಳಿಕ ಹೆಚ್.ಡಿ ರೇವಣ್ಣ ಫಸ್ಟ್ ರಿಯಾಕ್ಷನ್: ನನಗೆ ದೇವರ ಮೇಲೆ ನಂಬಿಕೆಯಿದೆ, ಆಪಾದನೆಯಿಂದ ಹೊರಬರ್ತಿನಿ ಎಂದ ರೇವಣ್ಣ….!

ಮೈಸೂರಿನ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಮೇರೆಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್.ಡಿ.ರೇವಣ್ಣ ಷರತ್ತು ಬದ್ದ ಜಾಮೀನು ಮೇರೆಗೆ ಬಿಡುಗಡೆಯಾಗಿದ್ದು, ತಾತ್ಕಲಿಕವಾಗಿ ಅವರಿಗೆ ರಿಲೀಫ್ ಸಿಕ್ಕಿದೆ ಎನ್ನಲಾಗಿದೆ. ಜೈಲಿನಿಂದ ಬಂದ ಕೂಡಲೇ ಅವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೆಗೌಡರ ಮನೆಗೆ ತೆರಳಿ ತಂದೆ ತಾಯಿ ಆರ್ಶಿವಾದ ಪಡೆದು ಬಳಿಕ ದೇವಾಲಯಗಳಿಗೆ ಭೇಟಿ ನೀಡಿದರು. ಜೈಲಿನಿಂದ ಹೊರಬಂದ ಬಳಿಕ ಮೊದಲ ಬಾರಿಗೆ ಮಾದ್ಯಮಗಳೊಂದಿಗೆ ಮಾತನಾಡಿದ್ದಾರೆ.

ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜೈಲಿನಿಂದ ಹೊರಬಂದ ಕೂಡಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡ ರವರ ಮನೆಗೆ ತೆರಳಿ ತಂದೆ ತಾಯಿ ಆರ್ಶಿವಾದ ಪಡೆದುಕೊಂಡರು. ಬಳಿಕ ಜೆ.ಪಿ.ನಗರದ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಮಯದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದರು. ನನಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಹಾಗೂ ಅಪಾರ ಗೌರವ ಇದೆ. ಕಳೆದ ಹನ್ನೊಂದು ದಿನಗಳಿಂದ ಕಾನೂನು ಪಾಲನೆ ಮಾಡಿದ್ದೇನೆ. ನನಗೆ ದೇವರ ಮೇಲೆ ನಂಬಿಕೆ ಇದೆ. ಶೀಘ್ರದಲ್ಲೇ ಈ ಆಪಾದನೆಯಿಂದ ಹೊರಬರುತ್ತೇನೆ. ನ್ಯಾಯಾಂಗದ ಆದೇಶಗಳನ್ನು ಪಾಲನೆ ಮಾಡುತ್ತೇನೆ. ಈ ಕುರಿತು ಹೆಚ್ಚಿಗೆ ಮಾತನಾಡೊಲ್ಲ  ಎಂದು ಪ್ರತಿಕ್ರಿಯೆ ನೀಡಿದ್ದಾರೆ.

H D Revanna first reaction after jail 1

ಇನ್ನೂ ಜೈಲಿನಿಂದ ಹೊರಬಂದ ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಮನೆಯ ಬಳಿಕ ರೇವಣ್ಣ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರನ್ನು ಭೇಟಿ ಯಾದರು. ಈ ವೇಳೆ ಕಾರ್ಯಕರ್ತರ ಮುಂದೆ ರೇವಣ್ಣ ಕಣ್ಣೀರಾಕಿದ್ದಾರೆ. ರೇವಣ್ಣ ಕಣ್ಣೀರನ್ನು ಕಂಡು ಅಭಿಮಾನಿಗಳೂ ಸಹ ಕಣ್ಣಿರಾಕಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ನೀವು ಅಳಬೇಡಿ ಎಂದು ಕಾರ್ಯಕರ್ತರು ಧೈರ್ಯ ತುಂಬಿದ್ದಾರೆ. ಇನ್ನೂ ಇಂದೂ ಸಹ ರೇವಣ್ಣ ರಾಜ್ಯದ ಹಲವು ದೇವಾಲಯಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

by Balajihttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

John Doe on TieLabs White T-shirt