ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ (Heavy Rain) ಯ ಆರ್ಭಟ ನಿಲ್ಲುತ್ತಿಲ್ಲ. ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ (Heavy Rain) ಎಂದು ಬೆಂಗಳೂರಿನ ನಗರ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದ್ದು, (Heavy Rain) ಕೆಲಸ-ಕಾಲೇಜಿಗೆ ಹೋಗುವವರಿಗೆ ಅಡಚಣೆ ಉಂಟಾಗಿದೆ. ಆಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಮಳೆಯ ಪರಿಣಾಮ ರಾಜಧಾನಿಯಲ್ಲಿ ಜಿಟಿಜಿಟಿ ಮಳೆಯ ಜೊತೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಇನ್ನೂ 2-3 ದಿನ ಜಡಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣ ಮುಂದುವರೆಯಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಈಗಾಗಲೇ ದಸರಾ ರಜೆ ಘೋಷಣೆಯಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅ.20ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿತ್ತು. ಆದರೆ (Heavy Rain) ಬೆಂಗಳೂರಿನ ಕೆಲವೊಂದು ಖಾಸಗಿ ಶಾಲೆಗಳಲ್ಲಿ ನಿನ್ನೆ ಅಂದರೇ ಸೋಮವಾರದಿಂದಲೇ ಶಾಲೆ ಆರಂಭ ಮಾಡಿದೆ.
ಇನ್ನೂ ನಿನ್ನೆ ಸೋಮವಾರ ಮಳೆಯಿಲ್ಲದ ಕಾರಣ ಮಕ್ಕಳು (Heavy Rain) ಶಾಲೆಗೆ ಹೋಗಿ ಬಂದಿದ್ದರು. ಇಂದು ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ಹೋಗಲು ಪರದಾಡುವಂತಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನೂ ಎರಡು ದಿನಗಳ ಕಾಲ (Heavy Rain) ಬೆಂಗಳೂರಿನಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ರಜೆ ಘೋಷಿಸಿದ್ದು, ಅಂಗನವಾಡಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದ್ದು, (Heavy Rain) ಪ್ರಾಥಮಿಕ, ಪ್ರೌಢಶಾಲಾ ಬಿಟ್ಟು ಉಳಿದ ತರಗತಿಗಳು ಎಂದಿನಂತೆ ನಡೆಯಲಿವೆ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಐಐಟಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Heavy Rain) ನೀಡಿದ್ದು, ಅದರಂತೆ, ಒಂದು ವಾರವಿಡಿ ಸಾಧಾರಣ ಮಳೆ ಹಾಗೂ ಆಗಾಗ ಗುಡುಗು ಸಹಿತ ಮಳೆಯಾಗುತ್ತದೆ. ವಾರಾಂತ್ಯಗಳಲ್ಲಿ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ. ಅ.16-17 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿಗೆ ಎಲ್ಲೋ ಅಲರ್ಟ್ ಘೋಷಣೆ (Heavy Rain) ಮಾಡಲಾಗಿದೆ. ಶುಕ್ರವಾರದಂದು ಆರೆಂಜ್ ಅಲರ್ಟ್ ಇರಲಿದೆ. ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಬೆಂಗಳೂರಿನ ನಿವಾಸಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು (Heavy Rain)ತೆಗೆದುಕೊಳ್ಳಬೇಕೆಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.