ಕರ್ನಾಟಕ ರಾಜ್ಯದಾದ್ಯಂತ ಮೇ.15 ರವರೆಗೆ ಬಿರುಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರಾಜ್ಯದ ಹಲವು ಕಡೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ. ಕೆಲವು ಕಡೆ ಮದ್ಯಾಹ್ನದಿಂದಲೇ ಮಳೆ ಶುರುವಾಗುತ್ತಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವು ಕಡೆ ಟ್ರಾಫಿಕ್ ಜಾಮ್ ಸಹ ಆಗುತ್ತಿದೆ.
ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿದ್ದು, ಮೇ.15 ರವರೆಗೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು – ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನಿಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಸಹ ಘೋಷಣೆ ಮಾಡಿದೆ. ಜೊತೆಗೆ ಹಲವು ಕಡೆ ಲಘು ಪ್ರವಾಹ, ನೈಸರ್ಗಿಕ ಸಮಸ್ಯೆಗಳು ಸಹ ಎದುರಾಗುವಂತಹ ಮುನ್ಸೂಚನೆಯನ್ನೂ ಸಹ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಈ ಕುರಿತು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ರಾಜ್ಯದ ಹಲವು ಕಡೆ ಮಳೆಯಾಗಿದೆ. ಧಾರವಾಡದಲ್ಲಿ 8cm, ದಕ್ಷಿಣ ಕನ್ನಡದಲ್ಲಿ 6cm, ಚಿಕ್ಕಮಗಳೂರು, ಬೆಳಗಾವಿಯಲ್ಲಿ 5cm ಮಳೆಯಾಗಿದೆ. ಕರ್ನಾಟಕದಲ್ಲಿ ಮೇ.15 ರವರೆಗೂ ಬಿರುಗಾಳಿ, ಗುಡುಗು ಮಿಂಚು ಸಮೇತ ಮಳೆಯಾಗಲಿದೆ. ಜೊತೆಗೆ ಬೆಂಗಳೂರಿನಲ್ಲೂ ಸಹ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ರಾಜ್ಯದಲ್ಲಿ ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ಇದೀಗ ತುಸು ನಿರಾಳರಾಗಿದ್ದಾರೆ. ಆದರೆ ಸದ್ಯ ಸುರಿಯುತ್ತಿರುವ ಮಳೆಯಿಂದಾಗ ಬೆಂಗಳೂರಿನ ಹಲವು ಕಡೆ ಮರಗಳು, ರೆಂಬೆಗಳು ಮುರಿದು ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮರಗಳಿಗೆ ಆಸಿಡ್ ಇಂಜೆಕ್ಷನ್ ನೀಡಿ ಮರಗಳ ಮಾರಣ ಹೋಮ ಮಾಡಲು ಪ್ಲಾನ್ ಮಾಡಿದ್ದಾರೆ ಎಂದು ಕೆಲವರು ಆರೋಪಿಸಿದ್ದರೇ, ಮತ್ತೆ ಕೆಲವರು ಮನೆಗಳಿಗೆ ತೊಂದರೆಯಾಗುತ್ತಿದೆ ಎಂದು ಮರಗಳನ್ನು ಕತ್ತರಿಸುತ್ತಿದ್ದಾರೆ. ಇದರಿಂದ ಪರಿಸರ ನಾಶವಾಗಿ ಪ್ರಾಕೃತಿಕ ಅಸಮತೋಲನ ಸೃಷ್ಟಿಯಾಗಲಿದೆ. ಕೂಡಲೇ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.