ಗುಡಿಬಂಡೆಯಲ್ಲಿ ಇದೇ ತಿಂಗಳ 31 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಹಿಂದೂಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ಇದು ನಮ್ಮ ಮನೆಯ ಹಬ್ಬದಂತೆ ಭಾವಿಸಿ ಆಚರಿಸಬೇಕು ಎಂದು ಬಿಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಮನವಿ ಮಾಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಜ.31 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವ (Hindu Samajotsava) ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಬೈಕ್ ಜಾಥಾ ಗೆ ಚಾಲನೆ ನೀಡಿ ಮಾತನಾಡಿದರು.

Hindu Samajotsava – ಶಕ್ತಿ ಪ್ರದರ್ಶನವಲ್ಲ, ಇದು ಜಾಗೃತಿಯ ಹಾದಿ
ಇಂದು ದೇಶದ ಸಮಸ್ತ ಹಿಂದೂಗಳು ಒಂದಾಗಬೇಕಾದ ಪರಿಸ್ಥಿತಿ ಬಂದಿದೆ. ಹಿಂದೂಗಳಾದ ನಾವು ಒಗ್ಗಾಟ್ಟಾಗದೇ ಇದ್ದರೇ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕಠಿಣವಾಗಬಹುದಾಗಿದೆ. ಈ ನಿಟ್ಟಿನಲ್ಲಿ ದೇಶದಾದ್ಯಂತ ಹಿಂದೂ ಸಮಾಜೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಹಿಂದೂಗಳಲ್ಲಿ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ. ಹಿಂದೂ ಸಂಸ್ಕೃತಿ, ಆಚಾರ ವಿಚಾರಗಳು ಉಳಿಯಲು ಹಿಂದೂ ಧರ್ಮವನ್ನು ಎತ್ತಿಹಿಡಿಯಬೇಕು.
ನಾನು ಹಿಂದು, ನಾನು ಒಂದು ಎಂಬ ಭಾವನೆಯನ್ನು ಇಟ್ಟುಕೊಂಡು ಎಲ್ಲರೂ ಪಕ್ಷಾತೀತವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಜ.31 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಹಿಂದೂ ಭಾಗವಹಿಸಬೇಕು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಬೈಕ್ ಜಾಥಾ ಕಾರ್ಯಕ್ರಮವನ್ನು ಎಲ್ಲಾ ಯುವಕರು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಅದ್ದೂರಿ ಶೋಭಾಯಾತ್ರೆ ಮತ್ತು ವೈವಿಧ್ಯತೆ
ಬಳಿಕ ಹಿಂದೂ ಸಮಾಜೋತ್ಸವ ಆಚರಣಾ ಸಮಿತಿಯ ತಾಲೂಕು ಅಧ್ಯಕ್ಷ ಗಜನಾಣ್ಯ ನಾಗರಾಜ್ ಮಾತನಾಡಿ, ಜ.31 ರಂದು ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ವಿವಿಧ ಕಲಾತಂಡಗಳು, ಭಜನಾ ತಂಡಗಳು ಗುಡಿಬಂಡೆ ರಾಜಬೀದಿಯಲ್ಲಿ ಅದ್ದೂರಿಯಾಗಿ ಶೋಭಾಯಾತ್ರೆ ನಡೆಯಲಿದೆ. Read this also : ಜನವರಿ 26 ರಿಂದ ಫೆಬ್ರವರಿ 1ರ ವರೆಗಿನ ಅದೃಷ್ಟದ ರಾಶಿಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ…!
ನಮ್ಮ ಹಿಂದೂ ಸಂಸ್ಕಾರ, ಆಚಾರ-ವಿಚಾರಗಳು, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಸನಾತನ ಧರ್ಮದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಸಹ ನಡೆಯಲಿದೆ. ಈ ಕಾರ್ಯಕ್ರಮದ ಕರಪತ್ರಗಳು ಸಹ ಈಗಾಗಲೇ ಮನೆ ಮನೆಗೆ ತಲುಪಿಸಲಾಗುತ್ತಿದೆ. ಮನೆಗೊಬ್ಬರಂತೆ ಕಾರ್ಯಕ್ರಮಕ್ಕೆ ಬಂದು ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಬೈಕ್ ಜಾಥಾದಲ್ಲಿ ಮಿಂಚಿದ ಯುವಶಕ್ತಿ
ಕಾರ್ಯಕ್ರಮದ ಅಂಗವಾಗಿ ನಡೆದ ಬೈಕ್ ಜಾಥಾ ತಾಲೂಕಿನಾದ್ಯಂತ ಸಂಚಲನ ಮೂಡಿಸಿತು. ಈ ಸಂದರ್ಭದಲ್ಲಿ ದ್ವಾರಕನಾಥ ನಾಯ್ಡು, ಹೆಚ್.ಎನ್. ಮಂಜುನಾಥ್, ಅಂಬರೀಶ್, ರಾಜಣ್ಣ, ಗಂಗಿರೆಡ್ಡಿ, ಜಿನ್ನಿ, ಜಿ.ಟಿ. ವೆಂಕಟೇಶ್ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿದರು.
