ತೆಲಂಗಾಣದ ಹೈದರಾಬಾದ್‌ನಲ್ಲಿ ಭಕ್ತಿ ಮತ್ತು ಭಾವನೆಗಳಿಗೆ ಧಕ್ಕೆ ತರುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ನಗರದ ಸಫೀಲ್‌ಗುಡಾದಲ್ಲಿರುವ ಪವಿತ್ರ ‘ಕಟ್ಟ ಮೈಸಮ್ಮ’ ದೇವಾಲಯದ (Katta Maisamma Temple) ಆವರಣದಲ್ಲಿ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ, ಧಾರ್ಮಿಕ ಭಾವನೆಗಳಿಗೆ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ನೆರೆಡ್‌ಮೆಟ್ ಪೊಲೀಸರು ಕರ್ನಾಟಕ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Katta Maisamma Temple – ನಡೆದಿದ್ದೇನು? ವಿಡಿಯೋದಲ್ಲಿ ಏನಿದೆ?
ಕೆಲವೊಂದು ವರದಿಗಳ ಪ್ರಕಾರ, ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕರ್ನಾಟಕದ ಬೀದರ್ ಜಿಲ್ಲೆಯ ಹುಗೇರಿ ಗ್ರಾಮದ ಅಲ್ತಾಫ್ (26) ಎಂದು ಗುರುತಿಸಲಾಗಿದೆ. ಈತ ಅನುಮತಿಯಿಲ್ಲದೆ ದೇವಾಲಯದ ಆವರಣಕ್ಕೆ ನುಗ್ಗಿ, ದೇವಿಯ ವಿಗ್ರಹದ ಎದುರೇ ಅಸಭ್ಯವಾಗಿ ವರ್ತಿಸಿದ್ದಾನೆ (ಮಲವಿಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ). ಇದನ್ನು ಗಮನಿಸಿದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರಿಗೆ ಒಪ್ಪಿಸುವ ಮುನ್ನ ಆರೋಪಿಗೆ ಧರ್ಮದೇಟು ನೀಡಿದ್ದಾರೆ ಎನ್ನಲಾಗಿದೆ.
ಕಾನೂನು ಕ್ರಮ ಮತ್ತು ತನಿಖೆ
ಈ ಘಟನೆಯ ನಂತರ ಪೊಲೀಸರು ಅಲ್ತಾಫ್‌ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆತನ ಮೇಲೆ ಭಾರತೀಯ ನ್ಯಾಯ ಸಂಹಿತೆಯ (BNS) ಅಡಿಯಲ್ಲಿ ಅತಿಕ್ರಮ ಪ್ರವೇಶ ಮತ್ತು ಧಾರ್ಮಿಕ ನಂಬಿಕೆಗಳಿಗೆ (Katta Maisamma Temple) ಅವಮಾನ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಭಾನುವಾರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯ ಹಿನ್ನೆಲೆ ಮತ್ತು ಈ ಕೃತ್ಯದ ಹಿಂದೆ ಬೇರೆ ಯಾವುದಾದರೂ ಉದ್ದೇಶವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. Read this also : ಮಂಗಳೂರು ಟೆಕ್ಕಿ (Mangaluru Techie Sharmila) ಶರ್ಮಿಳಾ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಶಾರ್ಟ್ ಸರ್ಕ್ಯೂಟ್ ಅಲ್ಲ ಅದು ‘ಸೈಲೆಂಟ್’ ಕೊಲೆ!
ಭುಗಿಲೆದ್ದ ಆಕ್ರೋಶ – ಪ್ರತಿಭಟನೆ
ಈ ವಿಷಯ ತಿಳಿಯುತ್ತಿದ್ದಂತೆಯೇ ಹಿಂದೂ ಪರ ಸಂಘಟನೆಗಳು (Katta Maisamma Temple) ಮತ್ತು ಬಿಜೆಪಿ ಕಾರ್ಯಕರ್ತರು ದೇವಾಲಯದ ಮುಂದೆ ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಬಿಜೆಪಿ ನಾಯಕ ಭಾನು ಪ್ರಕಾಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, “ಹಿಂದೂ ದೇವಾಲಯಗಳ ಮೇಲೆ ಪದೇ ಪದೇ ಇಂತಹ ದಾಳಿಗಳು ನಡೆಯುತ್ತಿವೆ. ಇದು ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ” ಎಂದು ಆರೋಪಿಸಲಾಗಿದೆ. ಬಿಜೆಪಿ ರಾಜ್ಯ ಘಟಕದ ಪ್ರಮುಖರು ಸಹ ಈ ಘಟನೆಯನ್ನು ಖಂಡಿಸಿದ್ದು, ರಾಜ್ಯ ಸರ್ಕಾರವು ದೇವಾಲಯಗಳ ರಕ್ಷಣೆಯಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ : Click Here
ಶಾಂತಿಗೆ ಪೊಲೀಸರ ಮನವಿ
ಘಟನೆಯಿಂದಾಗಿ ಸಫೀಲ್‌ಗುಡಾ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ದೇವಾಲಯದ ಸುತ್ತಮುತ್ತ ಹೆಚ್ಚಿನ ಭದ್ರತೆಯನ್ನು ನಿಯೋಜಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವದಂತಿಗಳನ್ನು ಹಬ್ಬಿಸಬೇಡಿ ಮತ್ತು ಶಾಂತಿ ಕಾಪಾಡಿ ಎಂದು ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
