Hyderabad – ವರದಕ್ಷಿಣೆ ಎಂಬುದು ಸಾಮಾಜಿಕ ಪಿಡುಗಾಗಿದ್ದು, ಇದರಿಂದ ಅನೇಕರ ಜೀವನವನ್ನೇ ನಾಶ ಮಾಡಿಕೊಂಡಿದ್ದಾರೆ. ಅದೇ ರೀತಿಯ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ಮದುವೆಯಾದ 6 ತಿಂಗಳಲ್ಲಿ ಹೈದರಾಬಾದ್ ನ ಸಾಫ್ಟ್ ವೇರ್ ಎಂಜನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದುರ್ದೈವಿಯನ್ನು ದೇವಿಕಾ (35) ಎಂದು ಗುರ್ತಿಸಲಾಗಿದೆ. ಈ ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿಬರುತ್ತಿದೆ.

ಹೈದರಾಬಾದ್ ನ ರಾಯದುರ್ಗಂ ನಿವಾಸಿ ದೇವಿಕಾ ಹೈಟೆಕ್ ಸಿಟಿಯ ಟೆಕ್ ಸಂಸ್ಥೆಯಲ್ಲಿ ಉದ್ಯೋಗಿದ್ದರು. ಮಾ.2 ರಂದು ರಾತ್ರಿ ಹೈದರಾಬಾದ್ ನ ತಮ್ಮ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರು ತಿಂಗಳ ಹಿಂದೆಯಷ್ಟೆ ಗೋವಾದಲ್ಲಿ ದೇವಿಕಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಮದುವೆಯಾದ ಬಳಿಕ ಈ ದಂಪತಿ ರಾಯದುರ್ಗಂನಲ್ಲಿರುವ ಅಪಾರ್ಟ್‌ಮೆಂಟ್ ನಲ್ಲಿ ವಾಸವಿದ್ದರು. ಇಬ್ಬರೂ ಸಣ್ಣಪುಟ್ಟ ವಿಚಾರಗಳಿಗೂ ಜಗಳವಾಡುತ್ತಿದ್ದರು ಎಂದು ಕೆಲವೊಂದು ಮೂಲಗಳಿಂದ ತಿಳಿದುಬಂದಿದೆ.
Haveri – ಪರೀಕ್ಷೆಯಲ್ಲಿ ಫೇಲ್, ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರ್ನಾಟಕದ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಎಂಜನೀಯರಿಂಗ್ ಕಾಲೇಜಿನ ವಿದ್ಯಾರ್ಥಿ ಉಲ್ಲಾಸ್ ಮುರಳಿ (22) ಎಂಬ ಯುವಕನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೃತ ಉಲ್ಲಾಸ್ ಎಂಜಿನಿಯರಿಂಗ್ ನ 4ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಒಂದು ವಿಷಯದಲ್ಲಿ ಅನುತ್ತೀರ್ಣರಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಆದರೆ ಆ ಸಾವಿಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ. ಇನ್ನೂ ಗ್ರಾಮಸ್ಥರು ಹಾಗೂ ಪೊಲೀಸರು ಮೃತ ದೇಹವನ್ನು ಹೊರೆತೆಗೆದಿದ್ದಾರೆ.
ಇನ್ನೂ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಪೊಲೀಸರು ಮಾನವೀಯತೆಯಿಲ್ಲದೇ ಕಸ ತುಂಬುವ ವಾಹನದಲ್ಲಿ ಮೃತದೇಹ ಸಾಗಿಸಿದ್ದು, ಈ ವಿಚಾರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.