Thursday, November 21, 2024

Janaspandana Meeting: ಜನರನ್ನು ಕಚೇರಿಗೆ ಅಲೆದಾಡಿಸದೇ, ಶೀಘ್ರವಾಗಿ ಜನರ ಕೆಲಸ ಮಾಡಿಕೊಡಿ: ಶಾಸಕ ಸುಬ್ಬಾರೆಡ್ಡಿ

ಬಾಗೇಪಲ್ಲಿ:  ಜನರು ವಿವಿಧ ಕೆಲಸಗಳ ನಿಮಿತ್ತ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ನಿಯಂತ್ರಿಸಿ, ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವುದೇ ಜನಸ್ಪಂದನಾ ಕಾರ್ಯಕ್ರಮದ (Janaspandana Meeting) ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಿ.  ವಿನಾ ಕಾರಣ  ಸಾರ್ವಜನಿಕರನ್ನು ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಿಸುವ  ಅಧಿಕಾರಿಗಳ ವಿರುದ್ದ  ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Janaspandana meeting in Bagepalli 0

ತಾಲೂಕಿನ ಗೂಳೂರು ಹೋಬಳಿ ವ್ಯಾಪ್ತಿಯ ಗೊರ್ತಪಲ್ಲಿ ಗ್ರಾಮದಲ್ಲಿ ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನಾ (Janaspandana Meeting) ಕಾರ್ಯಕ್ರಮದಲ್ಲಿ  ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು  ವಿವಿಧ ಕೆಲಸಗಳಿಗಾಗಿ ತಾಲೂಕಿನ 25-30 ಕಿ.ಮೀ ದೂರದ ಗ್ರಾಮಗಳಿಂದ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಬಂದು ಕೆಲಸವಾಗದೆ ವಾಪಸ್ ಹೋಗುವಂತಹ ಪರಿಸ್ಥಿತಿ ಅಲ್ಲದೆ ಪ್ರತಿನಿತ್ಯವೂ ಕೆಲಸ ಕಾರ್ಯಗಳನ್ನು ಬಿಟ್ಟು ಕಚೇರಿಗಳ ಸುತ್ತ ಅಲೆದಾಡಲು  ಕಷ್ಟವಾಗುತ್ತೆ. ಇದರಿಂದ  ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಿ, ಜನರ ಸಮಸ್ಯೆಗಳನ್ನು ಅಲಿಸಲು ತಾಲೂಕು ಮಟ್ಟದ ಎಲ್ಲಾ  ಇಲಾಖೆಗಳ ಅಧಿಕಾರಿಗಳು ಮನೆಬಾಗಿಲಿಗೆ ಬಂದು ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ  ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಂದರು.

ತಾಲೂಕಿನಲ್ಲಿ ಇತ್ತೀಚಿಗೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಳವಳವ್ಯಕ್ತಪಡಿಸಿದ ಅವರು ಯಾವುದೇ ಕಾರಣಕ್ಕೂ  18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡಬೇಡಿ, ಅನಿಷ್ಠ ಪದ್ದತಿಗಳಲ್ಲಿ ಒಂದಾಗಿರುವ ಬಾಲ್ಯ ವಿವಾಹ ಪದ್ದತಿಯನ್ನು ಸಮಾಜದಿಂದ ತೊಲಗಿಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದರು. ರಾಜ್ಯದಲ್ಲಿ ಡೆಂಗ್ಯೋ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ಸುತ್ತಮುತ್ತಲಿನಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದೇ ವೇಳೆ (Janaspandana Meeting) 75 ಫಲಾನುಭವಿಗಳಿಗೆ ಪಿಂಚಣಿ, 70 ಮಂದಿಗೆ ಆರೋಗ್ಯ ಕಾರ್ಡ್, 25 ಮಂದಿಗೆ ನರೇಗ ಯೋಜನೆಯ ಜಾಬ್ ಕಾರ್ಡ್ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ 25 ಲಕ್ಷ ರೂ.ಗಳ ಸಾಲದ ಚೆಕ್ ಸೇರಿದಂತೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

Janaspandana meeting in Bagepalli

ಈ  ಜನಸ್ಪಂದನಾ (Janaspandana Meeting)  ಕಾರ್ಯಕ್ರಮದಲ್ಲಿ  ನಿವೇಶನ, ಕುಡಿಯುವ ನೀರಿನ ಸಮಸ್ಯೆ, ರಸ್ತೆ, ಸಾರಿಗೆ, ಪಡಿತಚೀಟಿ, ಪಿಂಚಣಿ ಸೇರಿದಂತೆ 100ಕ್ಕೂ ಹೆಚ್ಚಿನ ಅರ್ಜಿಗಳನ್ನು ಸ್ವೀಕರಿಸಲಾಯಿತು. ಹಲವು ಸಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಯಿತು. ಉಳಿದ ಸಮಸ್ಯೆಗಳಿಗೆ ಒಂದು ತಿಂಗಳೊಳಗೆ ಬಗೆಹರಿಸುವಂತೆ ಆಯಾ ಇಲಾಖೆ ಅಧಿಕಾರಿಗಳಿಗೆ  ಸೂಚನೆ ನೀಡಿದರು. ಈ ವೇಳೆ ತಹಸೀಲ್ದಾರ್ ಎನ್.ಮನೀಷಾ, ಡಿ.ಹೆಚ್.ಓ ಮಹೇಶ್ ಕುಮಾರ್,  ತಾ.ಪಂ ಇಒ ರಮೇಶ್, ಸಿಡಿಪಿಓ ರಾಮಚಂದ್ರಪ್ಪ, ಟಿಹೆಚ್‍ಓ ಡಾ.ಸತ್ಯನಾರಾಯಣರೆಡ್ಡಿ,  ಬೆಸ್ಕಾಂ ಎಇಇ ಸೋಮಶೇಕರ್, ಗೊರ್ತಪಲ್ಲಿ ಗ್ರಾ.ಪಂ ಅಧ್ಯಕ್ಷ ಸದಾಶಿವರೆಡ್ಡಿ, ಉಪಾದ್ಯಕ್ಷೆ ಉಮಾದೇವಿ, ಮುಖಂಡರಾದ ಶಂಕರರೆಡ್ಡಿ, ಮಲ್ಲಿಕಾರ್ಜುನರೆಡ್ಡಿ ನರೇಂದ್ರ ಬಾಬು ಮತ್ತಿತರರು ಇದ್ದರು.

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!