ಅನೇಕರಿಗೆ ಕೇಂದ್ರ ಸರ್ಕಾರಿ ಹುದ್ದೆಗಳನ್ನು ಪಡೆಯಬೇಕೆಂಬ ಆಸೆ, ಹಂಬಲವಿರುತ್ತದೆ. ಅಂತಹ ನಿರುದ್ಯೋಗಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಭಾರತೀಯ ಅಂಚೆ ಇಲಾಖೆಯಲ್ಲಿ (India Post Recruitment) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 44,228 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆ.5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳಿಗಾಗಿ ಮುಂದೆ ಓದಿ…
ಭಾರತೀಯ ಅಂಚೆ ಇಲಾಖೆಯಲ್ಲಿ (Indian Postal Department) 44,228 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬ್ರಾಂಚ್ ಪೋಸ್ಟ್‌ಮಾಸ್ಟರ್ (ಬಿಪಿಎಂ)/ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)/ ಗ್ರಾಮಿಕ್ ಡಾಕ್ ಸೇವಕ್ (ಜಿಡಿಎಸ್) ಒಟ್ಟು 44,228 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆ.5 ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅರ್ಹ ಅಭ್ಯರ್ಥಿಗಳು indiapostgdsonline.gov.in ತಾಣದ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆಯನ್ನು ಈ ಕೆಳಗೆ ತಿಳಿಸಲಾಗಿದೆ.
ಭಾರತೀಯ ಅಂಚೆ ಇಲಾಖೆಯ (Indian Postal Department) 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಅಥವಾ ಗಣಿತ ಹಾಗೂ ಇಂಗ್ಲೀಷ್ ನಲ್ಲಿ ಉತ್ತೀರ್ಣ ಅಂಕಗಳೊಂದಿಗೆ ಎಸ್.ಎಸ್.ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯು ಕನಿಷ್ಠ 10ನೇ ತರಗತಿಯವರೆಗೆ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿರಬೇಕು. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಕನಿಷ್ಟ ವಯಸ್ಸು 18 ಹಾಗೂ ಗರಿಷ್ಟ 40 ವರ್ಷಗಳಿಗಿಂತ ಹೆಚ್ಚಿರಬಾರದು. ಇನ್ನೂ ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಜೊತೆಗೆ ಕಂಪ್ಯೂಟರ್ ಜ್ಞಾನ ಹಾಗೂ ಸೈಕ್ಲಿಂಗ್ ಗೊತ್ತಿರಬೇಕು. ಜೀವನೋಪಾಯದ ಸಮರ್ಪಕ ವಿಧಾನಗಳ ಬಗ್ಗೆ ಅನುಭವ ಇರಬೇಕು.
ಅರ್ಜಿ ಶುಲ್ಕ: ಜಿಡಿಎಸ್ ನೇಮಕಾತಿಗೆ ಅರ್ಜಿ ಶುಲ್ಕ 100 ರೂಪಾಯಿ. ಎಲ್ಲಾ ಮಹಿಳಾ ಅರ್ಜಿದಾರರು, SC/ST ಅರ್ಜಿದಾರರು, PwD ಅರ್ಜಿದಾರರು ಮತ್ತು ಟ್ರಾನ್ಸ್‌ವುಮೆನ್ ಅರ್ಜಿದಾರರಿಗೆ ಶುಲ್ಕದ ಪಾವತಿಯಲ್ಲಿ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಸಿಸ್ಟಂ-ಜೆನರೇಟೆಡ್ ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. 10 ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಇರುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ. ಭಾರತದ ಎಲ್ಲಿ ಬೇಕಾದರೂ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಕೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ indiapostgdsonline.gov.in ತಾಣವನ್ನು ಭೇಟಿ ನೀಡಬಹುದಾಗಿದೆ.