ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ರವರು ಪ್ರಸಿದ್ದ ತುಮಕೂರಿನ ಮಹಾಲಕ್ಷ್ಮೀ ದರ್ಶನ ಪಡೆದುಕೊಂಡಿದ್ದಾರೆ. ಭಾನುವಾರ (ಮೇ.19) ರಂದು ತುಮಕೂರಿನ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಮಹಾಲಕ್ಷ್ಮೀ ಕ್ಷೇತ್ರಕ್ಕೆ ತಮ್ಮ ಸಂಬಂಧಿಕರೊಡನೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯ ಸಭಾ ಸದಸ್ಯರಾದ ಸಾಮಾನ್ಯರಂತೆ ಅವರು ದೇವಿಯ ದರ್ಶನ ಪಡೆದಿದ್ದಾರೆ.
ಭಾನುವಾರ ಬೆಳ್ಳಂಬೆಳಗ್ಗೆ ಇನ್ಪೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿಯವರು ತಮ್ಮ ಸಂಬಂಧಿಕರೊಂದಿಗೆ ಗೊರವನಹಳ್ಳಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಸಾಮಾನ್ಯರಂತೆ ಗೊರವನಹಳ್ಳಿ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನದ ಆಡಳಿತ ಮಂಡಳಿಯ ಜೊತೆಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಇದೇ ಸಮಯದಲ್ಲಿ ದೇವಾಸ್ಥಾನದ ಆಡಳಿತ ಮಂಡಳಿ ವತಿಯಿಂದ ಸುಧಾಮೂರ್ತಿಯವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಗಿದೆ.
ಇನ್ನೂ ಸಾವಿರಾರೂ ಕೋಟಿ ಒಡತಿಯಾದರೂ, ರಾಜ್ಯಸಭಾ ಸದಸ್ಯೆಯಾದರೂ ಯಾವುದೇ ದೊಡ್ಡಸ್ಥಿಕೆಯಿಲ್ಲದೇ ಸಾಮಾನ್ಯರಂತೆ ಬದುಕುವ ಅವರ ಜೀವನ ಶೈಲಿಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಯಾವುದೇ ಆಡಂಬರವಿಲ್ಲದೇ ಸಾಮಾನ್ಯರಂತೆ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಆಗಮಿಸಿದರು. ಅವರು ಆಗಮಿಸುತ್ತಿದ್ದಂತೆ ದೇವಾಲಯದ ಆಡಳಿತ ಮಂಡಳಿ ಅವರಿಗೆ ಹಾರ ಹಾಕಿ ಸ್ವಾಗತ ಕೋರಿದರು. ಬಳಿಕ ದೇವಸ್ಥಾನದೊಳಗೆ ತೆರಳಿದ ಸುಧಾಮೂರ್ತಿರವರು ಮಹಾಲಕ್ಷ್ಮೀ ದೇವಿಗೆ ಆರತಿ ಬೆಳಗಿ ವಿಶೇಷ ಪೂಜೆ ಸಹ ಸಲ್ಲಿಸಿದರು.