HomeStateAccident - ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ...

Accident – ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಸಾವು

Accident – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44 ವರ್ಲಕೊಂಡ ಬಳಿ ನಿಯಂತ್ರಣ ತಪ್ಪಿ ಇನೋವಾ ಕಾರೊಂದು ಪಲ್ಟಿ ಹೊಡೆದಿದ್ದು, ಈ ಅಪಘಾತದಲ್ಲಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಮೃತಪಟ್ಟಿದ್ದಾರೆ.

Accident – ಬಾಗೇಪಲ್ಲಿ ಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ನಡೆದ ಘಟನೆ

ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಬಾಗೇಪಲ್ಲಿಗೆ ಹೋಗಿ ಬೆಂಗಳೂರಿಗೆ ವಾಪಸ್ ಆಗುವಾಗ ಈ ದುರಂತ ನಡೆದಿದೆ. ಮೃತರು ತಮ್ಮ ವಕೀಲ ಸ್ನೇಹಿತರೊಂದಿಗೆ ಬೆಂಗಳೂರಿನತ್ತ ಪ್ರಯಾಣ ನಡೆಸುತ್ತಿದ್ದರು ಎನ್ನಲಾಗಿದೆ. ಇನೋವಾ ಕಾರು ಚಲಾಯಿಸುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ.

Accident Gudibande

Accident – ಕಾರಿನ ಟೈಯರ್ ಸಿಡಿದ ಪರಿಣಾಮ ಸಂಭವಿಸಿದ ಅಪಘಾತ

ಕಾರಿನ ಟೈಯರ್ ಸಿಡಿದು ಹತ್ತಾರು ಪಲ್ಟಿ ಹೊಡೆದ ಕಾರು ರಸ್ತೆ ಬದಿಯಿದ್ದ ಹಳ್ಳಕ್ಕೆ ಬಿದ್ದಿದೆ. ಈ ಘಟನೆಯಲ್ಲಿ ಗಾಯಗೊಂಡ ವಕೀಲ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Accident – ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಇನ್ನೂ ಮೃತ ದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಸಂಬಂಧ ಮೃತ ಚೆನ್ನಕೃಷ್ಣಪ್ಪ ಅವರ ಮಗ ಅನುಮಾನ ವ್ಯಕ್ತಪಡಿಸಿ ದೂರಿದ್ದಾರೆ ಎನ್ನಲಾಗಿದೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular