ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB Recruitment) ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಐಪಿಪಿಬಿ ನ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯ ಮೂಲಕ ಐಪಿಪಿಬಿ ಎಕ್ಸಿಕ್ಯೂಟೀವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 344 ಕಾರ್ಯನಿರ್ವಾಹಕ ಹುದ್ದೆಗಳು ಖಾಲಿಯಿದ್ದು, ಅ.11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅ.31 ಕೊನೆಯ ದಿನಾಂಕವಾಗಿದೆ. ಅಧಿಸೂಚನೆ ಹಲವು ಪ್ರಮುಖ ವಿಚಾರಗಳನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನ ಹುದ್ದೆಗಳ ವಿವರ:
- ಹುದ್ದೆಗಳು : ಎಕ್ಸಿಕ್ಯೂಟೀವ್
- ಒಟ್ಟು ಹುದ್ದೆಗಳು : 344 ಹುದ್ದೆಗಳು
- ವೇತನ : 30 ಸಾವಿರ ಮಾಹೆಯಾನ
- ಅರ್ಜಿ ಶುಲ್ಕ : 750 ರೂಪಾಯಿ
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು? : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಇರಬೇಕಾಗಿದ್ದು, ಈ ಕೆಳಗೆ ವಿವರಿಸಲಾಗಿದೆ.
- ಅಭ್ಯರ್ಥಿಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ / ಮಂಡಳಿಯಿಂದ ಯಾವುದೇ ವಿಷಯದಲ್ಲಿ (ನಿಯಮಿತ / ದೂರಶಿಕ್ಷಣ) ಪದವಿ ಪಡೆದಿರಬೇಕು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 2 ವರ್ಷಗಳ ಕಾಲ ಗ್ರಾಮೀಣ ಡಾಕ್ ಸೇವಕರಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು 38 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 40 ವರ್ಷದವರೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಆಯ್ಕೆ ಪ್ರಕ್ರಿಯೆ ಹೇಗೆ ಮಾಡಲಾಗುತ್ತದೆ?
- ಆಯ್ಕೆ ಪ್ರಕ್ರಿಯೆಯು ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಆಧರಿಸಿರುತ್ತದೆ.
- ಆನ್‌ಲೈನ್ ಪರೀಕ್ಷೆಯನ್ನು ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Applying for the IPPB GDS recruitment is simple follow these steps:
- Visit the Official Website: Go to www.ippbonline.com.
- Online Registration: Click on the link for online registration starting from October 11, 2024, to October 31, 2024. (https://ibpsonline.ibps.in/ippblsep24/)
- Fill in Your Details: Provide all necessary information, including your preferred banking outlets from the list provided.
- Application Fee: Pay the non-refundable application fee of ₹750.
- Submit Your Application: Ensure all information is accurate before submitting.
ಐಪಿಪಿಬಿ ನೇಮಕಾತಿ 2024 ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ https://www.ippbonline.com ಗೆ ಭೇಟಿ ನೀಡಬಹುದು.