ಕೆಲವು ದಿನಗಳ ಹಿಂದೆಯಷ್ಟೆ ಬಾಂಗ್ಲಾದೇಶದಲ್ಲಿ ನಡೆದ ಗಲಭೆಯ ಬಳಿಕ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದಾಳಿ ದೌರ್ಜನ್ಯ ನಡೆಯುತ್ತಲೇ ಇದೆ. ಬಾಂಗ್ಲಾದಲ್ಲಿನ ಹಿಂದೂ ದೇವಾಲಯಗಳು, ಹಿಂದೂಗಳೂ ಸೇರಿದಂತೆ ಹಿಂದೂ ಸಂಘಟನೆಗಳ ಮೇಲೂ ದೌರ್ಜನ್ಯ ನಡೆಯುತ್ತಿದೆ. ಇದೀಗ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂಸಾಚಾರ ನಡೆಯುತ್ತಲೇ ಇದೆ. ಅದರಲ್ಲೂ ಬಾಂಗ್ಲಾ ಹಿಂದೂಗಳ ಮೇಲೆ ಹಿಂಸಾಚಾರ ಸಹ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಹೇಳಬಹುದಾಗಿದೆ. ಬಾಂಗ್ಲಾದಲ್ಲಿನ ಹಿಂದೂಗಳ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಲಾಗಿತ್ತು. ಇದೀಗ ಬಾಂಗ್ಲಾ ಪೊಲೀಸರು ಹಿಂದೂ ಧಾರ್ಮಿಕ ಸಂಘಟನೆಯಾದ ಇಸ್ಕಾನ್ (ಇಂಟರ್ ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ ನೆಸ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಣೆ ಮಾಡಿತ್ತು. ಇದೀಗ ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪರ ವಕೀಲ ಹಾಗೂ ಖ್ಯಾತ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿ ರವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಬಾಂಗ್ಲಾ ತೊರೆಯಲು ಮುಂದಾಗುತ್ತಿದ್ದಾಗ ಸೋಮವಾರ(ನ.25) ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದರು ಮತ್ತು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಈ ಬಂಧನ ಬಗ್ಗೆ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎನ್ನಲಾಗಿದೆ.
ಸಂಬಂಧಿಸಿದ ಪೋಸ್ಟ್ ಇಲ್ಲಿದೆ ನೋಡಿ: Click Here
ಇನ್ನೂ ಬಾಂಗ್ಲಾದ ರಾಜಧಾನಿಯಲ್ಲಿ ಹಿಂದೂಗಳು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದ್ದರು. ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಧ್ವನಿ ಎತ್ತಿದ ಹಿನ್ನೆಲೆಯಲ್ಲಿ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿ ರನ್ನು ಬಂಧನ ಮಾಡಲಾಗಿದೆ ಎಂದು ಅಲ್ಲಿನ ಹೋರಾಟಗಾರರು ತಿಳಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ರಾಧಾರಾಮನ್ ದಾಸ್ ಎಂಬುವವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿರುವಂತೆ ಹಿಂದೂ ಸನ್ಯಾಸಿ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಮುಖ್ಯ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾದಲ್ಲಿ ಬಂಧಿಸಿದ್ದಾರೆ. ಇದು ದೊಡ್ಡ ಅಘಾತ ಹಾಗೂ ಪೊಲೀಸರು ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಟ್ವೀಟ್ ಮಾಡಿದ್ದಾರೆ.