ಕಿಡ್ನಾಪ್ ಕೇಸ್ ಒಂದರಲ್ಲಿ ಕಳೆದೆರಡು ದಿನಗಳ ಹಿಂದೆಯಷ್ಟೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ರನ್ನು ಬಂಧನ ಮಾಡಲಾಗಿತ್ತು. ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾಗಿರುವ ಸಂತ್ರಸ್ತೆಯನ್ನು ಹೆಚ್.ಡಿ.ರೇವಣ್ಣ ಕಿಡ್ನಾಪ್ ಮಾಡಿದ್ದರು ಎಂದು ದೂರು ನೀಡಲಾಗಿತ್ತು. ದೂರಿನಂತೆ ಎಸ್.ಐ.ಟಿ ಅಧಿಕಾರಿಗಳು ರೇವಣ್ಣರನ್ನು ಬಂಧನ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಬಳಿ ತೆರಳುವುದಕ್ಕೂ ಮುನ್ನಾ ರೇವಣ್ಣ ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿಬಿಟ್ರಿ ಎಂದು ಎಸ್.ಐ.ಟಿ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟಿದ್ದಾರೆ.
ಎಸ್.ಐ.ಟಿ ಅಧಿಕಾರಿಗಳ ಮುಂದೆ ಕಣ್ಣೀರಾಕುತ್ತಾ ನನಗ್ಯಾಕೆ ಹೀಗೆ ಮಾಡುತ್ತಿದ್ದಿರಾ, ರಾಜಕೀಯ ಪ್ರೇರಿತವಾಗಿ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ. ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಎಂದು ಎಸ್.ಐ.ಟಿ ಅಧಿಕಾರಿಗಳ ಮುಂದೆ ಕಣ್ಣಿರಾಕಿದ್ದಾರೆ. ಇನ್ನೂ ಮಹಿಳೆ ಕಿಡ್ನಾಪ್ ಆಗಿದ್ದಾಗ ನಾನು ಬೆಂಗಳೂರಿನಲ್ಲಿಯೇ ಇದ್ದೆ. ನನ್ನ ತಂದೆ ದೇವೆಗೌಡರವರನ್ನು ಮಾತನಾಡಿಸಲು ಬಂದಿದ್ದೆ. ದೇವೇಗೌಡರ ಮನೆಯಲ್ಲಿ ಇದ್ದಾಗ ನನ್ನನ್ನು ಅರೆಸ್ಟ್ ಮಾಡಿದ್ದಾರೆ ಎಂದು ಕಣ್ಣೀರಾಕಿದ್ದಾರೆ. ಈ ವೇಳೆ ಎಸ್.ಐ.ಟಿ ಅಧಿಕಾರಿಗಳು ಹೆಚ್.ಡಿ.ರೇವಣ್ಣ ರವರಿಗೆ ನೀರು ಕೊಟ್ಟು ಸಮಾಧಾನ ಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ರೇವಣ್ಣರವರನ್ನು ನಾಲ್ಕು ದಿನಗಳ ಕಾಲ ಎಸ್.ಐ.ಟಿ ಕಸ್ಟಡಿಗೆ ನೀಡಿದ ಆದೇಶ ನೀಡಲಾಗಿದ್ದು, ಅರಂತೆ ಮೇ.8ರ ವರೆಗೆ ರೇವಣ್ಣ ಎಸ್.ಐ.ಟಿ. ಅಧಿಕಾರಿಗಳ ವಶದಲ್ಲಿರಲಿದ್ದಾರೆ.
ರೇವಣ್ಣ ವಿರುದ್ದ ಮೈಸೂರು ಜಿಲ್ಲೆ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗ ದೂರು ದಾಖಲಿಸಿದ್ದರು. ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬುವವರ ವಿರುದ್ದ ದೂರು ದಾಖಲಿಸಿದ್ದರು. ಬಾಬಣ್ಣ ಎಂಬಾತ ನಮ್ಮ ಮನೆಗೆ ಬಂದು ಭವಾನಿ ಅಕ್ಕ ಕರೆಯುತ್ತಿದ್ದಾರೆ ಎಂದು ನಮ್ಮ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಪೊಲೀಸರು ಕೇಳಿದರೇ ನಮಗೇನು ಗೊತ್ತಿಲ್ಲ ಅಂತಾ ಹೇಳಿದ್ದಾರೆ ಎಂದು ದೂರು ನೀಡಿದ್ದರು. ದೂರಿನಂತೆ ರೇವಣ್ಣ ವಿರುದ್ದ ಪ್ರಕರಣ ದಾಖಲಾಗಿತ್ತು. ಪೊಲೀಸರು ಮೈಸೂರು ಜಿಲ್ಲೆ ಹುಣಸೂರು ಬಳಿಕ ಕಾಳೇನಹಳ್ಳಿ ತೋಟದ ಮನೆಯಿಂದ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿತ್ತು.