Job Alert – ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ (Bengaluru Rural eCourt) ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಟೈಪಿಸ್ಟ್ ಹುದ್ದೆಗಳು ಖಾಲಿಯಿದ್ದು, 12ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಜ.6 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ. ಹೆಚ್ಚಿನ ವಿವರಗಳಿಗೆ ಅದಿಕೃತ ವೆಬ್‌ಸೈಟ್ ವಿಳಾಸ: bengalururural.dcourts.gov.in ಗೆ ಭೇಟಿ ನೀಡಿ.
Job Alert – ಅಧಿಸೂಚನೆಯ ಸಂಕ್ಷಿಪ್ತ ವಿವರ:
- ಇಲಾಖೆ ಹೆಸರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕ
- ಹುದ್ದೆಗಳ ಹೆಸರು ಬೆರಳಚ್ಚುಗಾರರು
- ಒಟ್ಟು ಹುದ್ದೆಗಳು 30
- ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ (Online)
- ಉದ್ಯೋಗ ಸ್ಥಳ ಬೆಂಗಳೂರು ಗ್ರಾಮಾಂತರ
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಪ್ರೌಡದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 38 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಕ್ಯಾಟಗರಿ 2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ/ಕ್ಯಾಟಗರಿ-I ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100 ಹಾಗೂ ಪ.ಜಾತಿ ಹಾಗೂ ಪಂಗಡ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. (ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು)
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
- ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
- ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
- ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
- ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಪ್ರಮುಖ ಲಿಂಕುಗಳು :
ಹೊಸ ನೋಟಿಫಿಕೇಶನ್ | Click Here |
ಹಳೆಯ ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06 ಜನವರಿ 2025 |