Job Alert – ಡಿಪ್ಲೊಮಾ ಪಾಸ್ ಆದವರಿಗೆ ಇಲ್ಲೊಂದು ಶುಭ ಸುದ್ದಿಯಿದೆ. ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ ಡಿಪ್ಲೊಮಾ ಟ್ರೈನಿ ಹಾಗೂ ಅಸಿಸ್ಟಂಟ್ ಟ್ರೈನಿ ಹುದ್ದೆಗಳ (Job Alert) ಅಧಿಸೂಚನೆ ಪ್ರಕಟಿಸಲಾಗಿದೆ. 802 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದ್ದು, ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇತರೆ ವಿವರಗಳನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ.
ಹುದ್ದೆಗಳ ವಿವರ: 802 ಟ್ರೈನಿ ಹುದ್ದೆಗಳಿದ್ದು, ಈ ಪೈಕಿ ಡಿಪ್ಲೊಮಾ ಟ್ರೈನಿ (ಎಲೆಕ್ಟ್ರಿಕಲ್) 100 ಹುದ್ದೆ, ಡಿಪ್ಲೊಮಾ ಟ್ರೈನಿ (ಸಿವಿಲ್) 20 ಹುದ್ದೆ, ಜೂನಿಯರ್ ಆಫೀಸರ್ ಟ್ರೈನಿ 40 ಹುದ್ದೆ, ಜೂನಿಯರ್ ಆಫೀಸರ್ ಟ್ರೈನಿ (ಎಫ್ ಅಂಡ್ ಎ) 25 ಹುದ್ದೆ, ಅಸಿಸ್ಟೆಂಟ್ ಟ್ರೈನಿ (ಎಫ್ ಅಂಡ್ ಎ) 610 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ ಹಾಗೂ ವಯೋಮಿತಿ : ಇನ್ನೂ ಅಧಿಸೂಚನೆ ಹೊರಡಿಸಿದ ವಿದ್ಯಾರ್ಹತೆ ಹಾಗೂ ವಯೋಮಿತಿ ವಿಚಾರಕ್ಕೆ ಬಂದರೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹವರು ಆಯಾ ಹುದ್ದೆಗಳಿಗೆ ತಕ್ಕಂತೆ ಡಿಪ್ಲೊಮಾ, ಬಿಇ, ಬಿಟೆಕ್, ಬಿಬಿಎ, ಬಿಬಿಎಂ, ಸಿಎ, ಬಿಕಾಂ ಪದವಿಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಸಾಮಾನ್ಯ, ಒಬಿಸಿ, ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಪ.ಜಾ, ಪ. ಪಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ, ಕಂಪ್ಯೂಟರ್ ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಈಗಾಗಲೇ ಅಕ್ಟೋಬರ್ 21ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ದಿನಾಂಕ ನವೆಂಬರ್ 12 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗಾಗಿ ಅಧಿಕೃತ ವೆಬ್ ಸೈಟ್ powergridindia.com ಭೇಟಿ ನೀಡಬಹುದು.
Follow the steps given below to apply online for this recruitment:
- Step 1
Check Eligibility
- Step 2
Click on Apply Online Link
- Step 3
Fill the application form
- Step 4
Complete Payment
- Step 5
Save the form for future reference