ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB Recruitment 2024) ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಇನ್ಫಮೇರ್ಷನ್ ಟೆಕ್ನಾಲಜಿ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಬಿಸಿಎ, ಬಿಎಸ್ ಸಿ, ಬಿ.ಇ. ಅಥವಾ ಬಿ.ಟೆಕ್, ಎಂಸಿಎ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಿತ್ತು. ಮೇ.24 ಕೊನೆಯ ದಿನಾಂಕವಾಗಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB Recruitment 2024) ಹೊರಡಿಸಿರುವ ಅಧಿಸೂಚನೆಯಂತೆ ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್‍ಟೆಂಟ್) (Executive – Associate Consultant)- 28, ಎಕ್ಸಿಕ್ಯೂಟಿವ್ (ಕನ್ಸಲ್‍ಟೆಂಟ್) (Executive (Consultant) – 21 ಹಾಗೂ ಎಕ್ಸಿಕ್ಯೂಟಿವ್ (ಸೀನಿಯರ್ ಕನ್ಸಲ್‍ಟೆಂಟ್) (Executive – Senior Consultant) – 5 ಹುದ್ದೆಗಳಿವೆ. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯಂತೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್, ಎಂಸಿಎ ಪದವಿ ಪಡೆದಿರಬೇಕು. ವಿದ್ಯಾರ್ಹತೆಯ ಜೊತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯವಾಗಿದೆ.
ಇನ್ನೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹವ ಅಭ್ಯರ್ಥಿಗಳಿಗೆ ಕನಿಷ್ಟ 22 ಗರಿಷ್ಟ 45 ವರ್ಷ ವಯಸ್ಸಿನ ಮಿತಿ ನೀಡಲಾಗಿದೆ. ಆದರೆ ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಗೆ ಸಹ ನೀಡಲಾಗಿದೆ. ಎಸ್‌ಸಿ – ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಎಸ್.ಸಿ, ಎಸ್.ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳು 150 ರೂಪಾಯಿ ಉಳಿದ ಅಭ್ಯರ್ಥಿಗಳು 750 ರೂಪಾಯಿ ಶುಲ್ಕ ಪಾವತಿಸಬೇಕಿದೆ. ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಕಟ್ಟಬೇಕಿದೆ.
ಇನ್ನೂ ಅರ್ಹ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಪರೀಕ್ಷೆ ಹಾಗೂ ಗ್ರೂಪ್ ಡಿಸ್ಕಷನ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳು ಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು https://ippbonline.com/web/ippb/current-openings ತಾಣಕ್ಕೆ ಭೇಟಿ ನೀಡಬಹುದಾಗಿದೆ.
Na