Dowry Harassment – ರಾಜಸ್ಥಾನ ದ ಜೋಧ್‌ಪುರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ತನ್ನ ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸುದ್ದಿ ಇಡೀ ಸಮಾಜವನ್ನು ಆಘಾತಕ್ಕೆ ದೂಡಿದೆ. ಶಿಕ್ಷಕಿಯಾಗಿರುವ ಮಹಿಳೆ, ತನ್ನ ಪತಿ ಮತ್ತು ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ಈ ದುರಂತ ನಿರ್ಧಾರ ಕೈಗೊಂಡಿದ್ದಾರೆ.
Dowry Harassment – ವರದಕ್ಷಿಣೆ ಕಿರುಕುಳಕ್ಕೆ ಕೊನೆಯಾದ ಬದುಕು
ಜೋಧ್‌ಪುರದ ಸರ್ನಾದಾ ಗ್ರಾಮದಲ್ಲಿ ಸಂಜು ಬಿಷ್ಣೋಯ್ ಎಂಬ ಉಪನ್ಯಾಸಕಿ, ತನ್ನ 3 ವರ್ಷದ ಮಗಳೊಂದಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದರೆ, ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದ ಸಂಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದಾಗ ಸಂಜು ಅವರ ಪತಿ ಮತ್ತು ಅತ್ತೆ-ಮಾವ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
Dowry Harassment – ಪತ್ರದಲ್ಲಿ ಬಯಲಾದ ಸತ್ಯ
ಅಗ್ನಿ ಅವಘಡದ ಹೊಗೆಯನ್ನು ಗಮನಿಸಿದ ನೆರೆಹೊರೆಯವರು ತಕ್ಷಣ ಪೊಲೀಸರಿಗೆ ಮತ್ತು ಕುಟುಂಬಕ್ಕೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸುವಷ್ಟರಲ್ಲಿ ಮಗು ಸಾವನ್ನಪ್ಪಿತ್ತು. ಪೊಲೀಸರು ಸ್ಥಳದಲ್ಲಿ ಒಂದು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಆ ಪತ್ರದಲ್ಲಿ ಸಂಜು ತನ್ನ ಪತಿ ದಿಲೀಪ್ ಬಿಷ್ಣೋಯ್ ಮತ್ತು ಅವರ ಪೋಷಕರು ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳವನ್ನು ವಿವರಿಸಿದ್ದಾರೆ. ಮಾತ್ರವಲ್ಲದೆ, ಗಣಪತ್ ಸಿಂಗ್ ಎಂಬ ವ್ಯಕ್ತಿಯೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದು, ಈ ಕಾರಣದಿಂದಲೇ ತಾನು ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. Read this also : ಹೈದರಾಬಾದ್‌ನಲ್ಲಿ ಭೀಕರ ಘಟನೆ: ಗರ್ಭಿಣಿ ಪತ್ನಿಯನ್ನು ಕೊಂದು ತುಂಡರಿಸಿದ ಪತಿ…!
Dowry Harassment – ಕುಟುಂಬಸ್ಥರಿಂದ ದೂರು ದಾಖಲು
ಈ ದುರಂತದ ನಂತರ, ಸಂಜು ಅವರ ಪೋಷಕರು ಪತಿ ದಿಲೀಪ್ ಮತ್ತು ಅವರ ಪೋಷಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನು (FSL) ಸ್ಥಳಕ್ಕೆ ಕರೆಸಲಾಗಿದೆ. ಸಂಜು ಅವರ ಮೊಬೈಲ್ ಫೋನ್ ಸಹ ವಶಪಡಿಸಿಕೊಳ್ಳಲಾಗಿದೆ. ದೂರಿನಲ್ಲಿ ಹೆಸರಿಸಲಾದ ಗಣಪತ್ ಸಿಂಗ್‌ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಂಜು ಮತ್ತು ಅವರ ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ತದನಂತರ ತಾಯಿ-ಮಗಳ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.