Kalaburagi – ರಾಷ್ಟ್ರಧ್ವಜದ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಿಸುವ ಮೂಲಕ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ನಮ್ಮ ರಾಷ್ಟ್ರಧ್ವಜ ಸದಾ ಉಳಿದ ಎಲ್ಲಾ ಧ್ವಜಗಳಿಗಿಂತ ಮೇಲೆ ಇರಬೇಕು ಎಂಬುದು ನಿಯಮ. ಆದರೆ ಕಲಬುರಗಿಯಲ್ಲಿ ಈ ನಿಯಮ ಉಲ್ಲಂಘನೆಯಾಗಿರುವ ಆರೋಪ ಕೇಳಿಬಂದಿದೆ. ರಾಷ್ಟ್ರಧ್ವಜದ ಸ್ತಂಭದಲ್ಲಿ ಮುಸ್ಲಿಂ ಧರ್ಮಕ್ಕೆ ಸಂಬಂಧಿಸಿದ ಧ್ವಜಾರೋಹಣ ನಡೆದಿದ್ದು, ಮುಸ್ಲಿಂ ಧ್ವಜದ (Muslim Flag) ಕೆಳಗಡೆ ರಾಷ್ಟ್ರಧ್ವಜವನ್ನು ಇರಿಸಲಾಗಿದೆ. ಈ ಸಂಬಂಧ ಮುಸ್ಲೀಂ ಮುಖಂಡರು ದೂರು ನೀಡಿದ್ದಾರೆ, ಜೊತೆಗೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವಂತಹವರಿಗೆ ಕಾನೂನಿನಂತೆ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜಾಗೃತಿ ಸೇನೆ ಆಗ್ರಹಿಸಿದೆ.
ಕಲಬುರಗಿಯಲ್ಲಿ ಧ್ವಜ ಸಂಹಿತೆ ಉಲ್ಲಂಘಿಸಿರುವ (National flag insulted) ಆರೋಪ ಕೇಳಿಬಂದಿದೆ. ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜವನ್ನು ಇರಿಸಲಾಗಿದ್ದು, ಇದರ ಫೋಟೊ ಹಾಗೂ ವಿಡಿಯೊಗಳು ವೈರಲ್ ಆಗಿದೆ. ನಂತರ ಹಿಂದೂ ಸಂಘಟನೆಗಳು ಈ ಕುರಿತು ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಕಲಬುರಗಿಯ ಶೇಖ್ ರೋಜಾ ದರ್ಗಾದ ಆವರಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಳೆದೆರಡು ದಿನಗಳ ಹಿಂದೆಯಷ್ಟೆ ಶೇಖ್ ರೋಜಾ ದರ್ಗಾದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ನಡೆದಿದೆ ಎನ್ನಲಾಗಿದೆ.
ಕಲಬುರಗಿಯ ಶೇಖ್ ರೋಜಾ ದರ್ಗಾದ ಆವರಣದಲ್ಲಿ ರಾಷ್ಟ್ರಧ್ವಜದ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಾಡಿದ್ದಲ್ಲದೇ, ಮುಸ್ಲಿಂ ಧ್ವಜದ ಕೆಳಗಡೆ ರಾಷ್ಟ್ರ ದ್ವಜ ಇಟ್ಟು ಅಪಮಾನ ಮಾಡಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಲ ಮುಸ್ಲಿಂ ಮುಖಂಡರೂ ಖಂಡಿಸಿ ಚೌಕ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇನ್ನು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದು ಜಾಗೃತಿ ಸೇನೆ ಆಗ್ರಹಿಸಿದೆ.