Kannada Programme: ಗಡಿ ಭಾಗವಾದರೂ ಕನ್ನಡಪರ ಚಟುವಟಿಕೆಗಳು ನಿರಂತರ: ಹನುಮಂತರೆಡ್ಡಿ…!

Kannada Programme – ಆಂದ್ರದ ಗಡಿಗೆ ಹೊಂದಿಕೊಂಡಿರುವ ಬಾಗೇಪಲ್ಲಿಯಲ್ಲಿ ತೆಲುಗು ಬಾಷೆಯ ಪ್ರಭಾವ ಹೆಚ್ಚಾಗಿದ್ದರೂ ಸಹ ಕನ್ನಡ ಭಾಷೆ, ನುಡಿ, ನೆಲ,ಜಲಗಳ ಜೊತೆಗೆ ಕನ್ನಡತನಕ್ಕೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಇಲ್ಲಿ ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ  ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ ಅಭಿಪ್ರಾಯಪಟ್ಟರು.

Kavigosti in Bagepalli

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕವಿಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು  ಕಳೆದ ಹಲವಾರು ವರ್ಷಗಳಿಂದ  ಕನ್ನಡ ಕಲಾ ಸಂಘ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಅಲ್ಲದೆ  ಡಾ.ರಾಜ್‍ಕುಮಾರ್, ಉದಯಕುಮಾರ್, ವಿಷ್ಣುವರ್ಧನ್ ಮತ್ತಿತರ ಕನ್ನಡ ಮೇರುನಟರನ್ನು ಬಾಗೇಪಲ್ಲಿಗೆ ಆಹ್ವಾನಿಸಿ ಕಾರ್ಯಕ್ರಮಗಳನ್ನು ನಡೆಸಿದ ಇತಿಹಾಸವಿದೆ ಎಂದರು.

ಈಗ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಕಲಾ ಸಂಘದ ಜವಾಬ್ದಾರಿಯನ್ನು ತೆಗೆದುಕೊಂಡು ಹೆಚ್ಚು ಹೆಚ್ಚು ಕನ್ನಡ ಪರ ಸಾಹಿತ್ಯಾತ್ಮಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುವುದರ ಮೂಲಕ  ಗಡಿನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿದೆ. ಇಲ್ಲಿನ ಕನ್ನಡಪರ ಸಂಘಟನೆಗಳು  ಕನ್ನಡ ಭಾಷೆ,ನೆಲ-ಜಲಕ್ಕೆ ಧಕ್ಕೆ ಬಂದಾಗ ಪ್ರತಿಭಟಿಸಿ ಸರ್ಕಾರಗಳ ಗಮನ ಸೇಳೆಯುವ  ಮೂಲಕ ಗಡಿನಾಡಿನಲ್ಲಿ ಕನ್ನಡ ಬೆಳೆಸಲು ಶ್ರಮಿಸುತ್ತಿದ್ದಾರೆ.  ಈ ತಾಲೂಕಿನ ಬಹುದಿನಗಳ ಬೇಡಿಕೆಯಂತೆ ಬಾಗೇಪಲ್ಲಿ ಹೆಸರನ್ನು ಬದಲಿಸಿ ಭಾಗ್ಯನಗರವನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ಲೇಖಕಿ ಹಾಗೂ ಅಭಾಸಾಪ ಅಧ್ಯಕ್ಷೆ ರಾಧಾಮಣಿ ಮಾತನಾಡಿ, ಬಾಗೇಪಲ್ಲಿಯಲ್ಲಿ ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು  ಸಂತೋಷದ ವಿಚಾರ. ಕವಿಗಳು ಮತ್ತು ಕವಿತೆಗಳ ಅವಲೋಕನವನ್ನು ಮಾಡುವ ಅವಕಾಶ ನನಗೆ ಸಿಕ್ಕಿರುವುದು ಪುಣ್ಯ ಎಂದರು.  ಬಳಿಕ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅತಿ ಶೀಘ್ರದಲ್ಲಿಯೇ ವಾರದ ಕಾರ್ಯಕ್ರಮಗಳನ್ನು ಪ್ರಾರಂಭಿಸಲು ತೀರ್ಮಾನತೆಗೆದುಕೊಂಡು ಕಾರ್ಯರೂಪಕ್ಕೆ ತರುವ ಪ್ರಾಆಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಗೌರವ ಕೋಶಾಧ್ಯಕ್ಷ ಡಾ.ಚಿನ್ನಕೈವಾರಮಯ್ಯ ಕಸಾಪ ನಿಕಟಪೂರ್ವ ಅಧ್ಯಕ್ಷ ಎ.ಜಿ.ಸುಧಕರ್ ಮಾತನಾಡಿದರು.  ಕವಿಗೋಷ್ಠಿಯಲ್ಲಿ 20 ಕವಿಗಳು ತಮ್ಮ ಕವನಗಳನ್ನು ವಾಚಿಸಿದರು. ನಂತರ ಅಭಿನಂದನಾ ಪತ್ರಗಳನ್ನು ಮತ್ತು ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ  ಕಸಾಪ ಗೌರವ ಕಾರ್ಯದರ್ಶಿಗಳಾದ ಎನ್.ಶಿವಪ್ಪ, ಶ್ರೀನಿವಾಸ್ ಬಾಣಾಲಪಲ್ಲಿ, ಕನ್ನಡ ಕಲಾ ಸಂಘದ ಅಧ್ಯಕ್ಷ ಪಿ.ಎಸ್.ರಾಜೇಶ್, ಪ್ರಾಧ್ಯಾಪಕ ಡಾ.ಕೆ.ಎಂ.ನಯಾಜ್ ಅಹಮದ್, ಡಾ.ಸಿ.ಎಸ್.ವೆಂಕಟರಾಮರೆಡ್ಡಿ, ಕಜಾಪ ಅಧ್ಯಕ್ಷ ಅಂಜಿನಪ್ಪ, ಸುಕನ್ಯ, ರಾಜರಾಜೇಶ್ವರಿ, ಪ್ರಭಾನಾಗರಾಜ್, ಪ್ರೊ.ವೈ.ನಾರಾಯಣ, ಜಿ.ವಿ.ಚಂದ್ರಶೇಖರ್, ಡಿ.ಎನ್.ನಾಗರಾಜ, ಡಿ.ಪಿ.ಲಕ್ಷ್ಮೀಪತಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

Next Post

Students : ಮಕ್ಕಳನ್ನು ಮೊಬೈಲ್, ಟಿವಿಗಳಿಂದ ದೂರವಿಡಿ, ವಿದ್ಯಾರ್ಥಿಗಳು ಶಿಸ್ತಿನಿಂದ ಓದುವುದನ್ನು ರೂಡಿಸಿಕೊಳ್ಳಿ: ಸುಬ್ಬಾರೆಡ್ಡಿ

Thu Jan 30 , 2025
Students – ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶಿಸ್ತಿನಿಂದ ಓದುವುದನ್ನು ರೂಡಿಸಿಕೊಳ್ಳಬೇಕು ಜೊತೆಗೆ ಪೋಷಕರು ತಮ್ಮ ಮಕ್ಕಳನ್ನು ಮೊಬೈಲ್, ಟಿವಿಗಳಿಂದ ದೂರವಿಟ್ಟು ಅವರನ್ನು ಓದಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಸೋಮೇನಹಳ್ಳಿ ಹೋಬಳಿಯ ಆದರ್ಶ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.100ರ ಸಾಧನೆಗಾಗಿ ಸ್ಪೂರ್ತಿ ವಿಶೇಷ ಶೈಕ್ಷಣಿಕ ಕಾರ್ಯಕ್ರಮವನ್ನು ಉದ್ಘಾಟಿಸಿ […]
Spoorthi Programme for SSLC Students
error: Content is protected !!