ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ನಾಳೆ ಅಂದರೇ ಮೇ.09 ರಂದು ಬಿಡುಗಡೆಯಾಗಲಿದೆ. ಕಳೆದ ಮಾರ್ಚ್ ಮಾಹೆಯಲ್ಲಿ ಆರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ಏಪ್ರಿಲ್ ಮಾಹೆಯಲ್ಲಿ ಮುಕ್ತಾಯವಾಗಿತ್ತು. ಏಪ್ರಿಲ್ 15 ರಂದು ಮೌಲ್ಯಮಾಪನ ಆರಂಭವಾಗಿತ್ತು. ಮೇ.9 ರಂದು ಫಲಿತಾಂಶ ಪ್ರಕಟವಾಗಲಿದೆ.
ವಿದ್ಯಾರ್ಥಿಗಳೊಂದಿಗೆ ಪೋಷಕರು ಸಹ ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಪರೀಕ್ಷೆ ಫಲಿತಾಂಶ ಮೇ.9 ರಂದು ಬಿಡುಗಡೆಯಾಗಲಿದೆ. ಬೆಳಿಗ್ಗೆ 10.30 ಗಂಟೆಯ ಬಳಿಕ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಫಲಿತಾಂಶ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ. ಮಾರ್ಚ್-25 ರಂದು ಆರಂಭವಾದ ಈ ಪರೀಕ್ಷೆ ಏಪ್ರಿಲ್ 6 ರವರೆಗೆ ನಡೆದಿತ್ತು. ಈ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ.9 ರಂದು ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನು ಕರೆಯಲಾಗಿದೆ ಎಂದು ಮಂಡಳಿಯ ಅಧ್ಯಕ್ಷೆ ಎನ್.ಮಂಜುಶ್ರೀ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಈ ಬಾರಿ ರಾಜ್ಯದಾದ್ಯಂತ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,41,910 ವಿದ್ಯಾರ್ಥಿಗಳು ಹಾಗೂ 4,28,058 ವಿದ್ಯಾರ್ಥಿನೀಯರು ಪರೀಕ್ಷೆಗೆ ಹಾಜರಾಗಿದ್ದಾರೆ. ಏ.15 ರಂದು ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿತ್ತು. ಎಲ್ಲಾ ಪ್ರಕ್ರಿಯೆಯನ್ನು ಪರೀಕ್ಷಾ ಮಂಡಳಿ ಪೂರ್ಣಗೊಳಿಸಿದೆ. ಮೇ.9 ರಂದು ಫಲಿತಾಂಶ ಪ್ರಕಟವಾಗಲಿದೆ.
ಇನ್ನೂ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಲು kseeb.kar.nic.in ಮತ್ತು karresults.nic.in ತಾಣಗಳಿಗೆ ಭೇಟಿ ನೀಡಬಹುದಾಗಿದೆ. ಬೆಳಿಗ್ಗೆ 10.30 ರಿಂದ ಫಲಿತಾಂಶ ಪಡೆಯಬಹುದಾಗಿದೆ.