Price Hike – ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳಿಗಾಗಿ ಹಣ ಹೊಂದಿಸಲು ತುಂಬಾನೆ ಕಸರತ್ತು ಮಾಡುತ್ತಿದೆ ಎಂಬ ಮಾತುಗಳು ಕೇಳಿಬರುತ್ತಲೇ ಇದೆ. ಈ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಸಹ ಒಂದಾಗಿದ್ದು, ಸಾವಿರಾರು ಕೋಟಿ ಈ ಗ್ಯಾರಂಟಿ ನೀಡಲು ಬೇಕಾಗುತ್ತದೆ. ಈ ಯೋಜನೆಗಾಗಿ ಕರ್ನಾಟಕದ ನಾಲ್ಕು ಸಾರಿಗೆ ಸಂಸ್ಥೆಗಳಿಂದ ಬಸ್ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆಗೆ ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದು ಜ.5 ಬಸ್ ಪ್ರಯಾಣ (Price Hike) ದರ ಶೇ.15 ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಕಳೆದ 2020 ರಂದು ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಬಳಿಕ ಬಸ್ ದರ ಏರಿಕೆ ಮಾಡಿರಲಿಲ್ಲ. ಕಳೆದ ಐದು ವರ್ಷದಲ್ಲಿ ಡೀಸೆಲ್ ದರ ಸಹ ಹೆಚ್ಚಳವಾಗಿದೆ ಇದರ ಜೊತೆಗೆ ಖರ್ಚು-ವೆಚ್ಚಗಳೂ ಸಹ ಹೆಚ್ಚಾಗಲಿದೆ. ಅಷ್ಟೇ ಅಲ್ಲದೇ ಸಿಬ್ಬಂದಿಯ ವೆಚ್ಚ ಕೂಡ ಶೇ.18 ರಷ್ಟು ಏರಿಕೆಯಾಗಿದೆ. ಕಳೆದ 5-10 ವರ್ಷಗಳಿಂದ ಟಿಕೆಟ್ ದರ ಹೆಚ್ಚಿಸಿಲ್ಲ. ನೌಕರರಿಗೆ ಸಂಬಂ ಹಾಗೂ ಸಾರಿಗೆ ಸಂಸ್ಥೆ ಉಳಿಸಬೇಕು. ಆದಾಯ ಹೆಚ್ಚಳವಾದರೂ ಖರ್ಚು ಸಹ ಹೆಚ್ಚಾಗುತ್ತಿದೆ. ಇನ್ನೂ ಶಕ್ತಿ ಯೋಜನೆಯಿಂದ ನಮಗೆ ಲಾಭವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾವಿರಾರು ಕೋಟಿ ಸಾಲ ಬಿಟ್ಟು ಹೋಗಿದೆ. ನಮ್ಮ ಸರ್ಕಾರದಲ್ಲಿ ವೇತನಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ನಮ್ಮ ಸರ್ಕಾರದಲ್ಲಿ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಲಾಗುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೇ ನಮ್ಮ ರಾಜ್ಯದಲ್ಲಿ ಬಸ್ ಟಿಕೆಟ್ ದರ ಕಡಿಮೆಯಿದೆ ಎಂದಿದ್ದಾರೆ.
ಸಂಬಂಧಪಟ್ಟ ಪೋಸ್ಟ್ ಇಲ್ಲಿದೆ ನೋಡಿ: Click Here
ಇನ್ನೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದಂತಹ ಸಾಲವನ್ನು ತೀರಿಸುವ ಜವಾಬ್ದಾರಿ ಸಹ ಇದೆ. ಸುಮಾರು ಒಂದು ಸಾವಿರ ಕೋಟಿ ಆದಾಯ ಎಚ್ಚಾಗಿದೆ. ಹೊಸ ವರ್ಷಕ್ಕೆ ಯಾವುದೇ ತೊಂದರೆಯಾಗಲ್ಲ. ಬಸ್ ದರ ಏರಿಕೆಯನ್ನು ಮುಂದೆಯೂ ಮಾಡಬೇಕಿತ್ತು. ಈಗ ಮಾಡಿದ್ದೇವೆ. ಅದರಲ್ಲಿ ಹೊಸ ವರ್ಷ ಅಂತಾ ಏನೂ ಇಲ್ಲ. ಮಹಿಳೆಯರಿಗೆ ಉಚಿತ ಆದರೆ ಪುರುಷರಿಗೆ ತೊಂದರೆ ಎಂದರೆ, ಬಸ್ ಓಡಿಸಬೇಕಾ ಬೇಡ್ವಾ, ಎಲ್ಲವನ್ನೂ ನೋಡಬೇಕಾಗಿದೆ ಎಂದು ಹೇಳಿದ್ದಾರೆ.
ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ ಎಂದು ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ವ್ಯಂಗವಾಡಿದ ಬಿ.ವೈ. ವಿಜಯೇಂದ್ರ
ಜ.2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಾರಿಗೆ ಬಸ್ ಗಳ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಶೇ.15 ರಷ್ಟು ಬಸ್ ಟಿಕೆಟ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗವಾಡುವುದರ ಜೊತೆಗೆ ಕಿಡಿಕಾರಿದ್ದಾರೆ. ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿದ್ದಾರೆ. ಮತ್ತೊಂದು ಕಡೆ ಪುರುಷರ ಜೇಬಿಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿದೆ. ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಹೋರಾಟ ಮಾಡುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಬಿ.ವೈ. ವಿಜಯೇಂದ್ರರವರ ಪೋಸ್ಟ್ ಇಲ್ಲಿದೆ ನೋಡಿ: Click Here
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ? ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ. “ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ” ಎಂಬುದನ್ನು ಇದೀಗ ಶೇ 15% ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ. ಶಕ್ತಿ ಯೋಜನೆ ಹೇಗಾಗಿದೆ ಎಂದರೆ ‘ವಾಣಿಜ್ಯ ಉತ್ಪನ್ನಗಳ ಮಾರಾಟದ ಆಕರ್ಷಣೆಗೆ ಮಳಿಗೆಗಳಲ್ಲಿ Buy-1 Get-1 (ಒಂದು ಖರೀದಿಸಿದರೆ-ಒಂದು ಉಚಿತ) ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ. ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ಕಾಂಗ್ರೇಸ್ ಸರ್ಕಾರದ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದ್ದು ಇದನ್ನು ವಿರೋಧಿಸಿ ರಾಜ್ಯ ಬಿಜೆಪಿ ಜನರ ಪರ ದನಿ ಎತ್ತಲಿದೆ ಎಂದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.