ರಾಜ್ಯದಲ್ಲಿ ಆಡಳಿತ (Karnataka Politics) ನಡೆಸುತ್ತಿರುವ ಕಾಂಗ್ರೇಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ಹಾಳಾಗಿದೆ. ಅದಕ್ಕೆ ಇತ್ತೀಚಿಗೆ ನಡೆದ ಬಳ್ಳಾರಿಯ ಘಟನೆ ಒಳ್ಳೆಯ ಉದಾಹರಣೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಆರೋಪ ಮಾಡಿದರು.

Karnataka Politics – ಬಳ್ಳಾರಿ ಘಟನೆ ಪ್ರಸ್ತಾಪಿಸಿ ವಾಗ್ದಾಳಿ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ತಟ್ಟಹಳ್ಳಿ ಗ್ರಾಮದ ಬಳಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು, ಬಳ್ಳಾರಿಯ ಇತ್ತೀಚಿನ ಘಟನೆಯನ್ನು ಪ್ರಸ್ತಾಪಿಸುತ್ತಾ, ಬಳ್ಳಾರಿಯಲ್ಲಿ ಶಾಸಕರ ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಕಾರ್ಯಕರ್ತ ಬಲಿಯಾಗಿದ್ದಾನೆ. ಆದರೆ ಪೊಲೀಸರು ಆರೋಪಿಯನ್ನು ಬಂಧಿಸುವ ಬದಲು ಕೇವಲ ಗನ್ ವಶಕ್ಕೆ ಪಡೆದಿದ್ದಾರೆ. ಅಧಿಕಾರ ವಹಿಸಿಕೊಂಡ ಒಂದೇ ದಿನಕ್ಕೆ ಎಸ್ಪಿಯವರನ್ನು ಅಮಾನತು ಮಾಡಿರುವುದು ಎಷ್ಟು ಸರಿ? ಸರ್ಕಾರಕ್ಕೆ ಧೈರ್ಯವಿದ್ದರೆ ಘಟನೆಗೆ ಕಾರಣರಾದ ನಿಮ್ಮದೇ ಪಕ್ಷದ ಶಾಸಕರನ್ನು ಅಮಾನತು ಮಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸವಾಲು ಹಾಕಿದರು.
Karnataka Politics – ಆರೋಗ್ಯ ವ್ಯವಸ್ಥೆ ಹಳ್ಳ ಹಿಡಿದಿದೆ
ಇನ್ನೂ ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭವಾಗಿ ಮೂರು ವರ್ಷಗಳೇ ಕಳೆದರೂ, ಈವರೆಗೂ ಆಸ್ಪತ್ರೆಗೆ ಬೇಕಾದ ಸರಿಯಾದ ಸಲಕರಣೆಗಳಿಲ್ಲ, ಹೆಚ್.ಆರ್ ಸಿಬ್ಬಂದಿಗಳ ನೇಮಕವಾಗಿಲ್ಲ. ನಮ್ಮ ಅವಧಿಯಲ್ಲಿ ಮಂಚೇನಹಳ್ಳಿ, ಗೌರೀಬಿದನೂರು ಸೇರಿದಂತೆ ಜಿಲ್ಲೆಯ ಪ್ರಾಥಮಿಕ ಹಾಗೂ ತಾಲೂಕು ಆಸ್ಪತ್ರೆಗಳನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದೆವು. ಆದರೆ ಈಗಿನ ಸರ್ಕಾರ ಕನಿಷ್ಠ ಸಿಬ್ಬಂದಿ ನೇಮಕ ಮಾಡುತ್ತಿಲ್ಲ, ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳೂ ಸಿಗುತ್ತಿಲ್ಲ ಎಂದು ದೂರಿದರು. Read this also : ಕರ್ನಾಟಕದ ಯಲ್ಲಾಪುರದಲ್ಲಿ ಮದುವೆಗೆ ಒಪ್ಪದ ಮಹಿಳೆಯನ್ನು ನಡುರಸ್ತೆಯಲ್ಲೇ ಇರಿದು ಕೊಂದ ಕಿರಾತಕ..!

Karnataka Politics – ಈ ಸರ್ಕಾರಕ್ಕೆ ಜನರ ಹಿತಕ್ಕಿಂತ ಕುರ್ಚಿಯೇ ಮುಖ್ಯ
ಇನ್ನೂ ರಾಜ್ಯದ ಈಗಿನ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ನೋಡಿದರೆ ಭಯವಾಗುತ್ತದೆ. ಒಂದು ವೇಳೆ ರಾಜ್ಯದಲ್ಲಿ ಏನಾದರೂ ಭಯಾನಕ ಕಾಯಿಲೆ ಬಂದರೆ ಜನರನ್ನು ಕಾಪಾಡಲು ಸರ್ಕಾರದಿಂದ ಸಾಧ್ಯವಿಲ್ಲ, ಆ ದೇವರೇ ಕಾಪಾಡಬೇಕು. ಈ ಸರ್ಕಾರಕ್ಕೆ ಜನರ ಹಿತಕ್ಕಿಂತ ತಮ್ಮ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯವಾಗಿದೆ. ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಮರೆತು ಕೇವಲ ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಯಾವುದೇ ಹೇಳಿಕೊಳ್ಳುವಂತಹ ಕೆಲಸವಾಗಿಲ್ಲ, ಇನ್ನುಳಿದ ಎರಡು ವರ್ಷಗಳಲ್ಲಿ ಇವರು ಏನು ಮಾಡುತ್ತಾರೋ ಗೊತ್ತಿಲ್ಲ ಎಂದು ಸುಧಾಕರ್ ಲೇವಡಿ ಮಾಡಿದರು.

ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
