Karnataka Politics – ಸುಮಾರು ದಿನಗಳಿಂದ ರಾಜ್ಯದಲ್ಲಿ ಸಿಎಂ ಬದಲಾವಣೆಯ ಜೊತೆಗೆ ಸಂಪುಟ ಪುನಾರಚನೆಯ ಕುರಿತು ಆಗಾಗ ಚರ್ಚೆಗಳು ನಡೆಯುತ್ತಲೇ ಇದೆ. ಇದೀಗ ಈ ಸುದ್ದಿ ಮತ್ತೊಮ್ಮೆ ಮುನ್ನೆಲೆಗೆ ಬರುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ಸುದ್ದಿ ಸಹ ಹರಿದಾಡುತ್ತಲೇ ಇದೆ. ಇದೆಲ್ಲದರ ಜೊತೆಗೆ ಕೆಲವು ಶಾಸಕರೂ ಸಹ ಸಚಿವರಾಗಲಿದ್ದಾರೆ ಎಂಬ ಮಾತುಗಳೂ ಸಹ ಕೇಳಿಬರುತ್ತಲೇ ಇದೆ. ಇದೀಗ ಈ ವದಂತಿಗೆ ಸಿಎಂ ಸಿದ್ದರಾಮಯ್ಯ ನೀಡಿದಂತಹ ಹೇಳಿಕೆಯೊಂದು ಸಂಪುಟ ಪುನಾರಚನೆ ಸುದ್ದಿಗೆ ಮರುಜೀವ ಕೊಟ್ಟಂತಿದೆ.

ಇನ್ನೂ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಯ ಕುರಿತು ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಹೊಸ ತಂಡವನ್ನು ಕಟ್ಟುವ ಕುರಿತು ಪರೋಕ್ಷ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ ಮಾಹೆಯ ಅಂತ್ಯಕ್ಕೆ ಸಂಪುಟ ಪುನಾರಚನೆ ಕುರಿತು ಸುದ್ದಿಗಳು ಕೇಳಿಬಂತು. ಕೆಲವೊಂದು ಪ್ರಭಾವಿ ನಾಯಕರ ಒತ್ತಡದ ಹಿನ್ನೆಲೆಯಲ್ಲಿ ಈ ಸುದ್ದಿ ಅಲ್ಲಿಗೆ ನಿಂತಿತ್ತು. ಇದೀಗ ಮತ್ತೊಮ್ಮೆ ರಾಜ್ಯ ಸಚಿವ ಸಂಪುಟ ಪುನಾರಚಣೆಗೆ ಆಗ್ರಹ ಆರಂಭವಾಗಿದ್ದು, ಬಜೆಟ್ ಅಧಿವೇಶನಕ್ಕೂ ಮುನ್ನವೇ ಕಾಂಗ್ರೇಸ್ ಸರ್ಕಾರದಲ್ಲಿ ಕೆಲವೊಂದು ಬದಲಾವಣೆಗಳಾಗುವ ಸಾಧ್ಯತೆಗಳು ಆಗಲಿದೆ ಎಂದು ಹೇಳಲಾಗುತ್ತಿದೆ.
ಇನ್ನೂ ಸಂಪುಟ ಪುನಾರಚನೆ ಒಂದು ಸ್ಥಾನಕ್ಕೆ ಮಾತ್ರ ಸೀಮಿತವಾಗುತ್ತಾ ಅಥವಾ ಹೆಚ್ಚು ಸಚಿವರ ಬದಲಾವಣೆಯಾಗುತ್ತಾ ಎಂಬುದರ ಬಗ್ಗೆ ಇನ್ನೂ ಖಚಿತತೆಯಾಗಲಿ ಅಥವಾ ಸುದ್ದಿಯಾಗಲಿ ತಿಳಿದುಬಂದಿಲ್ಲ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೂ ಸಹ ಹಲವು ನಾಯಕರು ಕಣ್ಣಿಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಬೆಳಗಾವಿ ಸಾಹುಕಾರ್ ಸತೀಶ್ ಜಾರಕೀಹೊಳಿ ರವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ ಎನ್ನಲಾಗಿದೆ. ಜೊತೆಗೆ ಮತಷ್ಟು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಲು ಲಾಬಿ ಮಾಡುತ್ತಿದ್ದಾರೆ. ಈ ಕುರಿತು ಕಾಂಗ್ರೇಸ್ ಹೈಕಮಾಂಡ್ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ನಿಗೂಢವಾಗಿದೆ.

ಕೆಲವೊಂದು ಘಟನೆಗಳ ಕಾರಣದಿಂದ ಕರ್ನಾಟಕದ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಷ್ಟೇಅಲ್ಲದೇ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗೆದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಭಾರಿ ಪೈಪೋಟಿ ಸಹ ಏರ್ಪಟ್ಟಿತ್ತು. ನಂತರ ಕಾಂಗ್ರೇಸ್ ಹೈಕಮಾಂಡ್ ಡಿಕೆಶಿ ಮನವೊಲಿಸಿ ಡಿಸಿಎಂ ಸ್ಥಾನ ಕೊಟ್ಟಿತ್ತು. ಇತ್ತೀಚಿಗಷ್ಟೆ ಡಿ.ಕೆ.ಶಿವಕುಮಾರ್ ಸಹ ಕರ್ನಾಟಕದಲ್ಲಿ ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. ಅಧಿಕಾರ ಹಂಚಿಕೆಯ ವಿಚಾರದಲ್ಲಿ ನಮ್ಮ ನಡುವೆ ಒಪ್ಪಂದವಾಗಿರೋದು ನಿಜ. ಸಮಯ ಬಂದಾಗ ಈ ಕುರಿತು ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಹೇಳಿದ್ದರು. ಈ ನಡುವೆ ಸಿಎಂ ಸಿದ್ದರಾಮಯ್ಯ ಸಹ ಹೊಸ ವರ್ಷದಲ್ಲಿ ಸಂಪುಟ ಪುನಾರಚನೆ ಬಗ್ಗೆ ನಮ್ಮ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಹೇಳಿದ್ದರು. ಇದೀಗ ಹೊಸ ವರ್ಷದಲ್ಲಿ ಸಂಪುಟ ಪುನಾರಚನೆಯಾಗುತ್ತಾ ಅಥವಾ ಇದೆ ಸಚಿವ ಸಂಪುಟ ಮುಂದುವರೆಯಲಿದೆಯಾ, ಒಂದು ವೇಳೆ ಸಂಪುಟ ಪುನಾರಚನೆಯಾದರೇ ಯಾವ ಶಾಸಕರು ಸಚಿವರಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.