Karnataka Rain – ಮೇ ಅಂತ್ಯದಿಂದ ಜೂನ್ ಮೊದಲ ವಾರದವರೆಗೆ ಅಬ್ಬರಿಸಿದ್ದ ಮಳೆಯ ಅಬ್ಬರ ಈಗ ಕಡಿಮೆಯಾಗಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಬಿಸಿಲು ಹೆಚ್ಚಾಗಿದ್ದು, ಜನರು ಸೆಖೆಯಿಂದ ಬಳಲುತ್ತಿದ್ದಾರೆ. ಆದರೆ, ಇದೀಗ ಹವಾಮಾನ ಇಲಾಖೆ (IMD) ಸಿಹಿ ಸುದ್ದಿ ನೀಡಿದೆ – ಜೂನ್ 11 ರಿಂದ ಮತ್ತೆ ಮಳೆ ಶುರುವಾಗಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜೂನ್ 9 ರಿಂದಲೇ ಮಳೆ ಶುರುವಾಗಲಿದ್ದು, ಜೂನ್ 11 ರಿಂದ ಮಳೆಯ ಆರ್ಭಟ ಹೆಚ್ಚಾಗಲಿದೆ. ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ, ಜೊತೆಗೆ ಜೂನ್ 9 ರಿಂದ ಉತ್ತಮ ಮಳೆ ಬೀಳಲಿದೆ.
Karnataka Rain – ಯಾವ ಜಿಲ್ಲೆಗಳಿಗೆ ಹಳದಿ ಅಲರ್ಟ್?
ಜೂನ್ 11 ರಂದು ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಜೂನ್ 12 ರಂದು ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಹಳದಿ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಇಡೀ ವಾರ ಮಳೆಯಾಗುವ ಸಾಧ್ಯತೆಯಿದೆ.
Karnataka Rain – ನಿಮ್ಮ ಜಿಲ್ಲೆಯಲ್ಲೂ ಮಳೆಯಾಗಲಿದೆಯೇ? ಇಲ್ಲಿದೆ ಮಾಹಿತಿ!
- ಮಧ್ಯಮ ಮಳೆ ಸಾಧ್ಯತೆ ಇರುವ ಜಿಲ್ಲೆಗಳು: ಶಿವಮೊಗ್ಗ, ಹಾಸನ, ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಮತ್ತು ಮೈಸೂರು. ಈ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
- ಹಗುರ ಮಳೆ ಮತ್ತು ಗುಡುಗು-ಸಿಡಿಲು ಸಾಧ್ಯತೆ ಇರುವ ಜಿಲ್ಲೆಗಳು: ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ. ಈ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ.
Karnataka Rain – ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್!
ಹವಾಮಾನ ಇಲಾಖೆ ಮಹಾರಾಷ್ಟ್ರದ ಮುಂಬೈ ಮತ್ತು ಇನ್ನಿತರ ಹಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ವಾರಾಂತ್ಯದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲಿಗೋ ಸೈಕ್ಲೋನಿಕ್ ಪರಿಸ್ಥಿತಿಗಳು ಮತ್ತು ದುರ್ಬಲಗೊಂಡ ನೈಋತ್ಯ ಮಾನ್ಸೂನ್ ಗಾಳಿಯಿಂದಾಗಿ ಮುಂದಿನ ದಿನಗಳಲ್ಲಿ ತೀವ್ರ ಹವಾಮಾನ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
Karnataka Rain – ದೇಶದ ಇನ್ನಿತರ ರಾಜ್ಯಗಳಲ್ಲಿ ಮಳೆ ಮಾಹಿತಿ
ಬೆಂಗಳೂರು, ಮುಂಬೈ, ದೆಹಲಿ/ಎನ್‌ಸಿಆರ್, ಕೋಲ್ಕತ್ತಾ, ಚೆನ್ನೈ, ಅಸ್ಸಾಂ ಮತ್ತು ಒಡಿಶಾದಲ್ಲಿ ಕೂಡ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 8 ರಂದು ಪೂರ್ವ ರಾಜಸ್ಥಾನದ ಕೆಲವು ಕಡೆಗಳಲ್ಲಿ, ಜೂನ್ 11 ಮತ್ತು 12 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
Read this also : ಕೃಷಿ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಬಿತ್ತನೆ ಮಾಡಿ: ಮಂಜುನಾಥ್
Karnataka Rain – ಈಶಾನ್ಯ ಭಾರತ ಮತ್ತು ದಕ್ಷಿಣ ರಾಜ್ಯಗಳಲ್ಲೂ ಮಳೆ ನಿರೀಕ್ಷೆ
ಮುಂದಿನ 7 ದಿನಗಳಲ್ಲಿ ಈಶಾನ್ಯ ಭಾರತದ ಬಹುತೇಕ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 12 ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 9 ರಿಂದ 11 ರವರೆಗೆ ತ್ರಿಪುರದಲ್ಲಿ ಮಳೆಯಾಗುವ ನಿರೀಕ್ಷೆಯಿದ್ದರೆ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಜೂನ್ 11 ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಸಂಬಂಧಿಸಿದ ಪೋಸ್ಟ್ ಇಲ್ಲಿದೆ ನೋಡಿ : Click Here
ಮುಂದಿನ 7 ದಿನಗಳಲ್ಲಿ ಕೇರಳ ಮತ್ತು ಮಾಹೆ, ಕರಾವಳಿ ಕರ್ನಾಟಕದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10 ರವರೆಗೆ ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮಳೆ ಬರುವ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.